Home Bibles ಸಾಮೇತಿಗಳು 10:30 · ಕನ್ನಡ ಬೈಬಲ್
ಸಾಮೇತಿಗಳು 10:30 · ಕನ್ನಡ ಬೈಬಲ್

ನೀತಿವಂತರು ಎಂದಿಗೂ ಕದಲುವದೇ ಇಲ್ಲ; ದುಷ್ಟರು ಭೂಮಿಯಲ್ಲಿ ವಾಸಮಾಡುವದಿಲ್ಲ.

Cross references

ಯೋಬ 17:9

ಆದರೆ ನೀತಿವಂತನು ತನ್ನ ಮಾರ್ಗವನ್ನು ಹಿಡಿದುಕೊಳ್ಳುವನು. ಶುದ್ಧ ಕೈಗಳು ಳ್ಳವನು ಬರಬರುತ್ತಾ ಬಲಗೊಳ್ಳುವನು.

ಕೀರ್ತನೆಗಳು 15:5

ತನ್ನ ಹಣವನ್ನು ಬಡ್ಡಿಗೆ ಕೊಡುವದಿಲ್ಲ; ನಿರಪರಾಧಿಗೆ ವಿರೋಧವಾಗಿ ಲಂಚ ತಕ್ಕೊಳ್ಳುವದಿಲ್ಲ. ಇವುಗಳನ್ನು ಮಾಡುವವನು ಎಂದೆಂದಿಗೂ ಕದಲದೆ ಇರುವನು.

ಕೀರ್ತನೆಗಳು 16:8

ನಾನು ಕರ್ತನನ್ನು ಯಾವಾಗಲೂ ನನ್ನ ಮುಂದೆ ಇಟ್ಟುಕೊಂಡಿದ್ದೇನೆ. ಆತನು ನನ್ನ ಬಲಗಡೆಯಲ್ಲಿ ಇರುವದರಿಂದ ನಾನು ಕದಲೆನು.

ಕೀರ್ತನೆಗಳು 37:9

ದುರ್ಮಾರ್ಗಿಗಳು ಕಡಿದು ಹಾಕಲ್ಪಡುವರು; ಕರ್ತನನ್ನು ನಿರೀಕ್ಷಿಸುವವರೇ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳುವರು.

ಕೀರ್ತನೆಗಳು 37:22

ಆತನು ಆಶೀರ್ವದಿಸಿದವರು ಭೂಮಿಯನ್ನು ಸ್ವತಂತ್ರಿಸಿ ಕೊಳ್ಳುವರು; ಆತನು ಶಪಿಸಿದವರು ಕಡಿದು ಹಾಕಲ್ಪಡವರು.

ಕೀರ್ತನೆಗಳು 37:28

ಕರ್ತನು ನ್ಯಾಯವನ್ನು ಪ್ರೀತಿಮಾಡುತ್ತಾನೆ; ತನ್ನ ಪರಿಶುದ್ಧರನ್ನು ತೊರೆದುಬಿಡನು; ಅವರು ಯುಗ ಯುಗಕ್ಕೂ ಕಾಪಾಡಲ್ಪಡುವರು; ಆದರೆ ದುಷ್ಟರ ಸಂತತಿಯು ಕಡಿದುಹಾಕಲ್ಪಡುವದು.

ಕೀರ್ತನೆಗಳು 52:5

ಆದದರಿಂದ ದೇವರು ಅದೇ ರೀತಿಯಲ್ಲಿ ನಿನ್ನನ್ನು ಸದಾಕಾಲಕ್ಕೂ ನಾಶಮಾಡಿ, ತೆಗೆದುಬಿಡುವನು. ನಿನ್ನ ವಾಸಸ್ಥಳದಿಂದ ಕಿತ್ತುಹಾಕುವನು; ಜೀವಿತರ ದೇಶ ದೊಳಗಿಂದ ನಿನ್ನನ್ನು ಬೇರುಸಹಿತ ಕೀಳುವನು. ಸೆಲಾ.

ಕೀರ್ತನೆಗಳು 112:6

ನಿಶ್ಚಯವಾಗಿ ಅವನು ಎಂದೆಂದಿಗೂ ಕದಲನು; ನೀತಿವಂತನು ನಿತ್ಯವಾಗಿ ಜ್ಞಾಪಕದಲ್ಲಿ ಇರುವನು.

ಕೀರ್ತನೆಗಳು 125:1

ಕರ್ತನಲ್ಲಿ ಭರವಸವಿಡುವವರು ಚೀಯೋನ್‌ ಪರ್ವತದ ಹಾಗಿ ದ್ದಾರೆ; ಅದು ಕದಲದೆ ಯುಗಯುಗಕ್ಕೂ ಇರುವದು.

ಸಾಮೇತಿಗಳು 2:21

ಯಥಾ ರ್ಥವಂತರು ದೇಶದಲ್ಲಿ ವಾಸಿಸುವರು. ಸಂಪೂರ್ಣರು ಅದರಲ್ಲಿ ನೆಲೆಯಾಗಿ ಇರುವರು.ದುಷ್ಟರಾದರೋ ಭೂಮಿಯಿಂದ ತೆಗೆದುಹಾಕಲ್ಪಡುವರು, ಅಪರಾಧಿ ಗಳು ಬೇರು ಸಹಿತವಾಗಿ ಅದರಿಂದ ಕೀಳಲ್ಪಡುವರು.

ಸಾಮೇತಿಗಳು 2:22

ದುಷ್ಟರಾದರೋ ಭೂಮಿಯಿಂದ ತೆಗೆದುಹಾಕಲ್ಪಡುವರು, ಅಪರಾಧಿ ಗಳು ಬೇರು ಸಹಿತವಾಗಿ ಅದರಿಂದ ಕೀಳಲ್ಪಡುವರು.

ಸಾಮೇತಿಗಳು 10:25

ಹೇಗೆ ಬಿರುಗಾಳಿಯು ಬೀಸುವದೋ ಹಾಗೆಯೇ ದುಷ್ಟರು ಇಲ್ಲವಾಗುವರು. ನೀತಿವಂತನು ಶಾಶ್ವತವಾದ ಅಸ್ತಿವಾರ ವಾಗಿದ್ದಾನೆ.

ಯೆಹೆಜ್ಕೇಲ 33:24

ಮನುಷ್ಯಪುತ್ರನೇ, ಇಸ್ರಾಯೇಲಿನ ದೇಶದ ಹಾಳು ಪ್ರದೇಶಗಳಲ್ಲಿ ವಾಸಿಸುವರು-- ಅಬ್ರಹಾಮನೇ ಒಬ್ಬನಾಗಿದ್ದು ದೇಶವನ್ನು ಸ್ವತಂತ್ರಿಸಿ ಕೊಂಡನು, ಆದರೆ ನಾವು ಬಹಳ ಜನರಾಗಿದ್ದು ದೇಶವು ನಮಗೆ ಸ್ವಾಸ್ತ್ಯವಾಗಿ ಕೊಡಲ್ಪಟ್ಟಿದೆ ಎಂದು ಹೇಳುತ್ತಾರೆ.

ಮೀಕ 2:9

ನನ್ನ ಜನರ ಸ್ತ್ರೀಯರನ್ನು ಅವರ ರಮ್ಯ ವಾದ ಮನೆಗಳೊಳಗಿಂದ ಹೊರಡಿಸಿದ್ದೀರಿ; ಅವರ ಮಕ್ಕಳಿಂದ ನನ್ನ ಮಹಿಮೆಯನ್ನು ಎಂದೆಂದಿಗೂ ತೆಗೆದಿ ದ್ದೀರಿ.

ಮತ್ತಾಯ 21:41

ಅವರು ಆತನಿಗೆ--ಅವನು ಆ ದುಷ್ಟ ಮನುಷ್ಯರನು ಕ್ರೂರವಾಗಿ ಸಂಹರಿಸುವನು; ಮತ್ತು ತಕ್ಕಕಾಲದಲ್ಲಿ ತನಗೆ ಫಲಗಳನ್ನು ಸಲ್ಲಿಸುವ ಬೇರೆ ಒಕ್ಕಲಿಗರಿಗೆ ತನ್ನ ದ್ರಾಕ್ಷೇತೋಟವನ್ನು ವಾರಕ್ಕೆ ಕೊಡುವನು ಎಂದು ಹೇಳಿದರು.

ರೋಮಾಪುರದವರಿಗೆ 8:35

ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ ಸಂಕಟವೋ ಹಿಂಸೆಯೋ ಬರಗಾಲವೋ ವಸ್ತ್ರವಿಲ್ಲದಿರುವದೋ ಗಂಡಾಂತರವೋ ಖಡ್ಗವೋ?

2 ಪೇತ್ರ 1:10

ಆದದರಿಂದ ಸಹೋದರರೇ, ನಿಮ್ಮ ಕರೆಯುವಿಕೆ ಯನ್ನೂ ಆಯ್ಕೆಯನ್ನೂ ದೃಢಪಡಿಸಿಕೊಳ್ಳುವದಕ್ಕೆ ಜಾಗ್ರತೆಯಾಗಿರಿ. ಯಾಕಂದರೆ ಇವುಗಳನ್ನು ನೀವು ಮಾಡಿದರೆ ಎಂದಿಗೂ ತಪ್ಪಿಹೋಗುವದಿಲ್ಲ

Interlinear

Choose Theme