ನೀತಿಯು ಜೀವಕ್ಕೆ ಒಲಿಯುತ್ತದೆ; ಕೆಟ್ಟದ್ದನ್ನು ಹಿಂದಟ್ಟುವವನು ತನ್ನ ಮರ ಣಕ್ಕೆ ಹಿಂದಟ್ಟುತ್ತಾನೆ.
Cross references
ನೀನು ಬದುಕಿ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶವನ್ನು ಸ್ವಾಧೀನಪಡಿಸಿಕೊಳ್ಳುವ ಹಾಗೆ ನೀತಿಯನ್ನೇ ಅನುಸರಿಸಬೇಕು.
ಇದರ ನಿಮಿತ್ತ ನೀನು ಏರಿದ ಮಂಚದಿಂದ ಇಳಿಯದೆ ನಿಶ್ಚಯವಾಗಿ ಸಾಯುವಿ ಎಂದು ಕರ್ತನು ಹೇಳುತ್ತಾನೆ ಅಂದನು. ಆಗ ಎಲೀಯನು ಹೊರಟುಹೋದನು.
ಹಾಗೆಯೇ ಅವನು ಎದ್ದು ಅವನ ಸಂಗಡ ಅರಸನ ಬಳಿಗೆ ಇಳಿದು ಹೋಗಿ ಅವನಿಗೆ--ಆತನ ವಾಕ್ಯವನ್ನು ವಿಚಾರಿಸಲು ಇಸ್ರಾಯೇಲಿನಲ್ಲಿ ದೇವರು ಇಲ್ಲವೆಂದು ನೀನು ಎಕ್ರೋ ನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸಲು ಜನ ರನ್ನು ಕಳುಹಿಸಿದ ಕಾರಣ ನೀನು ಏರಿದ ಮಂಚ ದಿಂದ ಇಳಿಯದೆ ನಿಶ್ಚಯವಾಗಿ ಸಾಯುವಿ ಎಂದು ಕರ್ತನು ಹೇಳುತ್ತಾನೆ ಅಂದನು.
ಅವರ ಪಾದಗಳು ಕೇಡಿಗೆ ಓಡುತ್ತವೆ, ರಕ್ತವನ್ನು ಸುರಿಸುವದಕ್ಕೆ ಆತುರ ಪಡುತ್ತವೆ.
ಎತ್ತು ವಧೆಯ ಸ್ಥಾನಕ್ಕೆ ಹೋಗುವಂತೆ ಇಲ್ಲವೆ ಮೂರ್ಖನು ಶಿಕ್ಷೆಯ ದಂಡನೆಗೆ ಹೋಗುವಂತೆ
ಆದರೆ ನನಗೆ ವಿರೋಧವಾಗಿ ಪಾಪಮಾಡುವವನು ತನ್ನ ಸ್ವಂತ ಪ್ರಾಣಕ್ಕೆ ಕೇಡುಮಾಡಿಕೊಳ್ಳುತ್ತಾನೆ. ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.
ನೀತಿವಂತರ ಪ್ರಯಾಸವು ಜೀವಕ್ಕಾಗಿಯೂ ದುಷ್ಟರ ಫಲವು ಪಾಪಕ್ಕಾಗಿಯೂ ಇವೆ.
ಉಗ್ರತೆಯ ದಿನದಲ್ಲಿ ಐಶ್ವರ್ಯವು ಲಾಭಕರವಾಗುವದಿಲ್ಲ; ನೀತಿಯು ಮರಣ ದಿಂದ ಬಿಡಿಸುತ್ತದೆ.
ನೀತಿಯ ಮಾರ್ಗದಲ್ಲಿ ಜೀವ ವಿದೆ; ಅದರ ದಾರಿಯಲ್ಲಿ ಮರಣವೇ ಇಲ್ಲ.
ಕರ್ತನ ಭಯವು ಜೀವಕ್ಕೆ ಒಲಿಯುತ್ತದೆ; ಅದನ್ನು ಹೊಂದಿದ ವನು ತೃಪ್ತನಾಗಿ ನೆಲೆಗೊಳ್ಳುವನು; ಅವನಿಗೆ ಕೇಡು ಸಂಭವಿಸುವದಿಲ್ಲ.
ನೀತಿಯನ್ನೂ ಕರುಣೆಯನ್ನೂ ಹಿಂಬಾಲಿಸುವವನು; ಜೀವವನ್ನೂ ನೀತಿಯನ್ನೂ ಕೀರ್ತಿಯನ್ನೂ ಕಂಡು ಕೊಳ್ಳುತ್ತಾನೆ.
ಆದರೆ ಪ್ರತಿ ಯೊಂದು ಜನಾಂಗದವರಲ್ಲಿ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವನು ಆತನಿಗೆ ಮೆಚ್ಚಿಕೆಯಾ ಗಿದ್ದಾನೆ.
ಕಲಹಪ್ರಿಯ ರಾಗಿದ್ದು ಸತ್ಯಕ್ಕೆ ವಿಧೇಯರಾಗದೆ ಅನೀತಿಗೆ ವಿಧೇಯ ರಾಗಿ
ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.
ಚಿಕ್ಕ ಮಕ್ಕಳೇ, ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಆತನು ಹೇಗೆ ನೀತಿವಂತ ನಾಗಿದ್ದಾನೋ ಹಾಗೆಯೇ ನೀತಿಯನ್ನನುಸರಿಸುವವನು ನೀತಿವಂತನಾಗಿದ್ದಾನೆ.
ಇವರು ದೇವರ ಮಕ್ಕಳೆಂಬದೂ ಅವರು ಸೈತಾನನ ಮಕ್ಕಳೆಂಬದೂ ಇದರಿಂದ ವ್ಯಕ್ತವಾಗುತ್ತದೆ. ನೀತಿಯನ್ನು ಅನುಸರಿಸದವನೂ ತನ್ನ ಸಹೋದರನನ್ನು ಪ್ರೀತಿಸದವನೂ ದೇವರಿಗೆ ಸಂಬಂಧಪಟ್ಟವನಲ್ಲ.