Home Bibles ಸಾಮೇತಿಗಳು 11:21 · ಕನ್ನಡ ಬೈಬಲ್
ಸಾಮೇತಿಗಳು 11:21 · ಕನ್ನಡ ಬೈಬಲ್

ಕೈಗೆ ಕೈ ಕೊಟ್ಟರೂ ದುಷ್ಟನು ಶಿಕ್ಷಿಸಲ್ಪಡದೆ ಇರುವದಿಲ್ಲ; ನೀತಿವಂತರ ವಂಶವು ತಪ್ಪಿಸಿಕೊಳ್ಳುವದು.

Cross references

ಆದಿಕಾಂಡ 17:7

ಇದಲ್ಲದೆ ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ದೇವರಾಗಿರುವದಕ್ಕೆ ನನಗೂ ನಿನಗೂ ನಿನ್ನ ತರುವಾಯ ಬರುವ ತಲ ತಲಾಂತರಗಳಲ್ಲಿ ನಿನ್ನ ಸಂತಾನಕ್ಕೂ ಮಧ್ಯದಲ್ಲಿ ನನ್ನ ಒಡಂಬಡಿಕೆಯನ್ನು ನಿತ್ಯವಾದ ಒಡಂಬಡಿಕೆಯಾಗಿ ಸ್ಥಾಪಿಸುತ್ತೇನೆ.

ನಿರ್ಗಮಕಾಂಡ 23:2

ಕೆಟ್ಟದ್ದನ್ನು ಮಾಡು ವಂತೆ ಬಹುಮಂದಿಯನ್ನು ಹಿಂಬಾಲಿಸಬೇಡ; ಇಲ್ಲವೆ ಬಹುಮಂದಿಯೊಂದಿಗೆ ನ್ಯಾಯಕ್ಕೆ ಪ್ರತಿಕೂಲವಾಗಿ ವ್ಯಾಜ್ಯದಲ್ಲಿ ಉತ್ತರಕೊಡಬೇಡ.

ನಿರ್ಗಮಕಾಂಡ 23:7

ಸುಳ್ಳಿನ ವಿಷಯಗಳಿಂದ ನೀನು ದೂರ ವಿರು; ನಿರಪರಾಧಿಯನ್ನೂ ನೀತಿವಂತನನ್ನೂ ಕೊಲ್ಲ ಬೇಡ, ಯಾಕಂದರೆ ನಾನು ದುಷ್ಟನನ್ನು ನೀತಿವಂತ ನೆಂದು ನಿರ್ಣಯಿಸುವದಿಲ್ಲ.

ಯೋಬ 36:17

ಆದರೆ ನೀನು ದುಷ್ಟನ ನ್ಯಾಯವನ್ನು ಪೂರೈಸಿದಿ; ನ್ಯಾಯವೂ ತೀರ್ಪೂ ನಿನ್ನನ್ನು ಹಿಡಿಯುವವು.

ಕೀರ್ತನೆಗಳು 37:26

ಅವನು ಯಾವಾಗಲೂ ದಯಾಳುವಾಗಿ ಸಾಲ ಕೊಡುತ್ತಾನೆ; ಅವನ ಸಂತತಿಯು ಆಶೀರ್ವಾದ ಹೊಂದುವದು.

ಕೀರ್ತನೆಗಳು 112:1

ನೀವು ಕರ್ತನನ್ನು ಸ್ತುತಿಸಿರಿ. ಕರ್ತನಿಗೆ ಭಯಪಟ್ಟು ಆತನ ಆಜ್ಞೆಗಳಲ್ಲಿ ಬಹಳವಾಗಿ ಸಂತೋಷಿಸುವ ಮನುಷ್ಯನು ಧನ್ಯನು.

ಕೀರ್ತನೆಗಳು 112:2

ಅವನ ಸಂತತಿಯು ಭೂಮಿಯಲ್ಲಿ ಪರಾಕ್ರಮಶಾಲಿ ಯಾಗಿರುವದು. ಯಥಾರ್ಥರ ಸಂತತಿಯು ಆಶೀ ರ್ವಾದ ಹೊಂದುವದು.

ಸಾಮೇತಿಗಳು 12:21

ನೀತಿವಂತನಿಗೆ ಯಾವ ಕೇಡೂ ಸಂಭವಿಸದು; ದುಷ್ಟರಾದರೋ ಕೇಡಿನಿಂದ ತುಂಬಿಕೊಳ್ಳುವರು.

ಸಾಮೇತಿಗಳು 13:22

ಒಳ್ಳೆಯವನು ಮೊಮ್ಮಕ್ಕಳಿಗೆ ಆಸ್ತಿಯನ್ನು ಬಿಡುವನು; ಪಾಪಿಯ ಸೊತ್ತು ನೀತಿ ವಂತರಿಗೆ ಇಡಲ್ಪಟ್ಟಿದೆ.

ಸಾಮೇತಿಗಳು 16:5

ಹೃದಯದಲ್ಲಿ ಗರ್ವಿಷ್ಠನಾದ ಪ್ರತಿಯೊಬ್ಬನೂ ಕರ್ತನಿಗೆ ಅಸಹ್ಯ. ಕೈಗೆ ಕೈ ಕೊಟ್ಟರೂ ದುಷ್ಟನು ಶಿಕ್ಷಿಸಲ್ಪಡದೆ ಇರುವದಿಲ್ಲ.

ಯೆಶಾಯ 27:4

ರೌದ್ರವು ನನ್ನಲ್ಲಿ ಇಲ್ಲ; ಯಾವನಾದರೂ ಮುಳ್ಳು ದತ್ತೂರಿಗಳನ್ನು ನನಗೆ ವಿರೋಧವಾಗಿ ಯುದ್ಧಕ್ಕೆ ಇಟ್ಟರೆ ನಾನು ಅವುಗಳನ್ನು ಹಾದು ಹೋಗಿ ಅವುಗಳನ್ನು ಒಟ್ಟಿಗೆ ಸುಡುವೆನು.

ಅಪೋಸ್ತಲರ ಕೃತ್ಯಗಳು 2:39

ಯಾಕಂದರೆ ಆ ವಾಗ್ದಾನವು ನಿಮಗೂ ನಿಮ್ಮ ಮಕ್ಕಳಿಗೂ ದೂರವಾಗಿರುವವರೆಲ್ಲರಿಗೂ ಅಂತೂ ನಮ್ಮ ದೇವರಾದ ಕರ್ತನು ಕರೆಯುವವರೆಲ್ಲರಿಗೂ ಮಾಡಿಯದೆ ಎಂದು ಹೇಳಿದನು.

Interlinear

Choose Theme