ದುಷ್ಟ ಸೇವಕನು ಕೇಡಿಗೆ ಬೀಳುತ್ತಾನೆ; ನಂಬಿಕೆಯಾದ ರಾಯಭಾರಿಯು ಆರೋಗ್ಯದಾಯಕ.
Cross references
ಕೊಲ್ಲಲ್ಪಟ್ಟವರಲ್ಲದೆ ಮಿದ್ಯಾನಿನ ಅರಸರನ್ನು ಕೊಂದು ಹಾಕಿದರು. ಯಾರಂದರೆ, ಮಿದ್ಯಾ ನಿನ ಐದು ಮಂದಿ ಅರಸರಾಗಿರುವ ಎವೀ, ರೆಕೆಮ್, ಚೂರ್, ಹೂರ್, ರೆಬಾ, ಬೆಯೋರನ ಮಗನಾದ ಬಿಳಾಮನನ್ನೂ ಕತ್ತಿಯಿಂದ ಕೊಂದುಹಾಕಿದರು.
ಹಲ್ಲುಗಳಿಗೆ ಹುಳಿಯೂ ಕಣ್ಣುಗಳಿಗೆ ಹೊಗೆಯೂ ಹೇಗೋ ಹಾಗೆಯೇ ತನ್ನನ್ನು ಕಳುಹಿಸು ವವರಿಗೆ ಸೋಮಾರಿಯೂ ಇರುವನು.
ಸುಗ್ಗಿಯ ಕಾಲದಲ್ಲಿ ಹಿಮಶೀತದ ಹಾಗೆ ತನ್ನನ್ನು ಕಳುಹಿಸುವವರಿಗೆ ನಂಬಿಗಸ್ಥನಾದ ಸೇವಕನಿ ದ್ದಾನೆ. ತನ್ನ ಯಜಮಾನರ ಪ್ರಾಣವನ್ನು ಅವನು ನವಚೈತನ್ಯಗೊಳಿಸುತ್ತಾನೆ.
ಉತ್ತರದ ಗಾಳಿಯು ಮಳೆಯನ್ನು ನೂಕುತ್ತದೆ; ಅದರಂತೆಯೇ ಚಾಡಿಯ ನಾಲಿಗೆ ಕೋಪದ ಮುಖ ಮಾಡುವದೆ.
ಬುದ್ಧಿಹೀನನ ಮೂಲಕ ವರ್ತಮಾನ ಕಳುಹಿಸುವವನು ಪಾದಗಳನ್ನು ಕಡಿದು ಕೇಡನ್ನು ಕುಡಿಯುತ್ತಾನೆ.
ನಾನು ದುಷ್ಟನಿಗೆ--ನೀನು ನಿಶ್ಚಯವಾಗಿ ಸಾಯುವಿ ಯೆಂದು ಹೇಳುವಾಗ ನೀನು ಅವನನ್ನು ಎಚ್ಚರಿಸದೆ ಅವನನ್ನು ಬದುಕಿಸುವ ಹಾಗೆ ದುಷ್ಟನನ್ನು ಅವನ ದುಷ್ಟಮಾರ್ಗದ ವಿಷಯದಲ್ಲಿ ಎಚ್ಚರಿಸಿ ಮಾತನಾಡದೆ ಹೋದರೆ ಆ ದುಷ್ಟನು ತನ್ನ ಅಕ್ರಮದಲ್ಲೇ ಸಾಯು ವನು. ಆದರೆ ಅವನ ರಕ್ತವನ್ನು ನಿನ್ನ ಕೈಯಿಂದ ದುಷ್ಟತ್ವ ಕ್ಕಾಗಿ ನಾನು ವಿಚಾರಿಸುವೆನು.
ಓ ಮನುಷ್ಯಪುತ್ರನೇ, ನಿನ್ನನ್ನು ನಾನು ಇಸ್ರಾಯೇಲಿನ ಮನೆತನದವರಿಗೆ ಕಾವಲುಗಾರನನ್ನಾಗಿ ಇಟ್ಟಿದ್ದೇನೆ; ಆದದರಿಂದ ನೀನು ನನ್ನ ಬಾಯಿಯ ವಾಕ್ಯವನ್ನು ಕೇಳು, ನನ್ನಿಂದ ಅವರನ್ನು ಎಚ್ಚರಿಸು.
ಹೀಗಿರಲು ಮನೆವಾರ್ತೆಯವನು ನಂಬಿಗಸ್ತನಾಗಿ ಕಂಡುಬರುವದು ಅವಶ್ಯವಾಗಿದೆ.
ನಾವು ದೇವರ ವಾಕ್ಯವನ್ನು ಕಲಬೆರಿಕೆ ಮಾಡುವವರಾದ ಹೆಚ್ಚು ಪಾಲಿನ ಜನರ ಹಾಗಿರದೆ ನಿಷ್ಕಪಟಿಗಳಾಗಿ ದೇವರಿಂದ ಹೊಂದಿದ ವರಿಗೆ ತಕ್ಕ ಹಾಗೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸಮಕ್ಷಮದಲ್ಲಿಯೇ ಮಾತನಾಡುತ್ತೇವೆ.
ದೇವರೇ ನಮ್ಮ ಮೂಲಕ ನಿಮ್ಮನ್ನು ಬೇಡಿ ಕೊಳ್ಳುತ್ತಾನೋ ಎಂಬಂತೆ ನಾವು ಈಗ ಕ್ರಿಸ್ತನ ರಾಯಭಾರಿಗಳಾಗಿದ್ದೇವೆ. ದೇವರೊಂದಿಗೆ ಸಮಾ ಧಾನವಾಗಿರೆಂದು ಕ್ರಿಸ್ತನಿಗೆ ಬದಲಾಗಿ ನಾವು ನಿಮ್ಮನ್ನು ಬೇಡಿಕೊಳ್ಳುತ್ತೇವೆ.ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
ನನಗೆ ಬಲವನ್ನು ದಯಪಾಲಿಸಿದಾತನು ನಮ್ಮ ಕರ್ತನಾದ ಕ್ರಿಸ್ತ ಯೇಸುವೇ; ಆತನು ನನ್ನನ್ನು ನಂಬಿಗಸ್ತನೆಂದು ಎಣಿಸಿ ಈ ಸೇವೆಯಲ್ಲಿ ನೇಮಿಸಿ ಕೊಂಡದ್ದಕ್ಕಾಗಿ ನಾನು ಆತನಿಗೆ ಸ್ತೋತ್ರ ಸಲ್ಲಿಸುತ್ತೇನೆ.
ಅನೇಕ ಸಾಕ್ಷಿಗಳ ಮುಂದೆ ನೀನು ನನ್ನಿಂದ ಕೇಳಿದವುಗಳನ್ನೇ ಇತರರಿಗೆ ಸಹ ಬೋಧಿಸ ಶಕ್ತರಾದ ನಂಬಿಗಸ್ತ ಮನುಷ್ಯರಿಗೆ ಒಪ್ಪಿಸಿಕೊಡು.