Home Bibles ಸಾಮೇತಿಗಳು 14:12 · ಕನ್ನಡ ಬೈಬಲ್
ಸಾಮೇತಿಗಳು 14:12 · ಕನ್ನಡ ಬೈಬಲ್

ಒಬ್ಬ ಮನುಷ್ಯನಿಗೆ ಸರಿಯೆಂದು ತೋರುವ ಮಾರ್ಗ ವಿದೆ. ಅದರ ಅಂತ್ಯವು ಮರಣದ ಮಾರ್ಗಗಳೇ.

Cross references

1 ಅರಸುಗಳು 12:26

ಆದರೆ ಯಾರೊಬ್ಬಾಮನು ತನ್ನ ಹೃದಯದಲ್ಲಿ--ಈಗ ರಾಜ್ಯವು ದಾವೀದನ ಮನೆಗೆ ಹಿಂತಿರುಗುವದು.

1 ಅರಸುಗಳು 12:28

ಎಂದು ಅರಸನು ಆಲೋ ಚನೆ ಕೇಳಿಕೊಂಡು ಎರಡು ಬಂಗಾರದ ಹೋರಿಗ ಳನ್ನು ಮಾಡಿಸಿ ಜನರಿಗೆ--ಯೆರೂಸಲೇಮಿನ ವರೆಗೂ ಹೋಗುವದು ನಿಮಗೆ ಕಷ್ಟವಾಗಿದೆ. ಓ ಇಸ್ರಾಯೇಲೇ, ಇಗೋ, ಐಗುಪ್ತದಿಂದ ನಿನ್ನನ್ನು ಬರಮಾಡಿದ ನಿನ್ನ ಈ ದೇವರುಗಳು ಅಂದನು.

ಸಾಮೇತಿಗಳು 12:15

ಅವಿವೇಕಿಯ ಮಾರ್ಗ ವು ತನ್ನ ಕಣ್ಣುಗಳಿಗೆ ನೆಟ್ಟಗಾಗಿದೆ; ಆಲೋಚನೆಗೆ ಕಿವಿಗೊಡುವವನು ಜ್ಞಾನಿಯಾಗಿದ್ದಾನೆ.

ಸಾಮೇತಿಗಳು 16:25

ಮನುಷ್ಯರಿಗೆ ಸರಿಯಾಗಿ ತೋರುವ ಒಂದು ಮಾರ್ಗ ಉಂಟು; ಅದರ ಅಂತ್ಯವು ಮರಣದ ಮಾರ್ಗವೇ.

ಸಾಮೇತಿಗಳು 30:12

ತಮ್ಮ ಮಲಿನತ್ವದಿಂದ ಇನ್ನು ತೊಳೆಯಲ್ಪಡದೆ ತಮ್ಮ ದೃಷ್ಟಿಯಲ್ಲಿ ಶುದ್ಧವಾಗಿರುವ ಒಂದು ವಂಶಾವಳಿಯು ಇದೆ.

ಮತ್ತಾಯ 7:13

ಇಕ್ಕಟ್ಟಾದ ದ್ವಾರದೊಳಗೆ ನೀವು ಪ್ರವೇಶಿಸಿರಿ; ಯಾಕಂದರೆ ನಾಶನಕ್ಕೆ ನಡಿಸುವ ದ್ವಾರವು ಅಗಲವೂ ಮಾರ್ಗವು ವಿಶಾಲವೂ ಆಗಿದೆ. ಅದರೊಳಗೆ ಪ್ರವೇಶಿಸುವವರು ಬಹು ಜನ.

ಲೂಕ 13:24

ಇಕ್ಕಟ್ಟಾದ ಬಾಗಲಿನಿಂದ ಒಳಗೆ ಪ್ರವೇಶಿಸುವದಕ್ಕೆ ಪ್ರಯಾಸಪಡಿರಿ; ಯಾಕಂ ದರೆ ಅನೇಕರು ಒಳಗೆ ಪ್ರವೇಶಿಸುವದಕ್ಕೆ ಪ್ರಯತ್ನಿಸಿ ದರೂ ಆಗುವದಿಲ್ಲ ಎಂದು ನಾನು ನಿಮಗೆ ಹೇಳು ತ್ತೇನೆ.

ರೋಮಾಪುರದವರಿಗೆ 6:21

ನೀವು ಆಗ ಮಾಡಿ ದವುಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯುಂಟಷ್ಟೆ; ಅವುಗಳ ಅಂತ್ಯವು ಮರಣವೇ.

ಗಲಾತ್ಯದವರಿಗೆ 6:3

ಏನೂ ಅಲ್ಲದವ ನೊಬ್ಬನು ತಾನು ಏನೋ ಆಗಿದ್ದೇನೆಂದು ಭಾವಿಸಿ ಕೊಂಡರೆ ತನ್ನನ್ನು ತಾನೇ ಮೋಸಪಡಿಸಿಕೊಳ್ಳುತ್ತಾನೆ.

ಎಫೆಸದವರಿಗೆ 5:6

ಹುರುಳಿಲ್ಲದ ಮಾತುಗಳಿಂದ ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಯಾಕಂದರೆ ಇಂಥವುಗಳಿಂದ ದೇವರ ಕೋಪವು ಆತನಿಗೆ ಅವಿಧೇಯರಾದ ಮಕ್ಕಳ ಮೇಲೆ ಬರುತ್ತದೆ.

ಯಾಕೋಬ 1:22

ನೀವು ವಾಕ್ಯದ ಪ್ರಕಾರ ನಡೆಯುವವರಾಗಿರ್ರಿ; ಅದನ್ನು ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸ ಬೇಡಿರಿ.

Interlinear

Choose Theme