Home Bibles ಸಾಮೇತಿಗಳು 14:29 · ಕನ್ನಡ ಬೈಬಲ್
ಸಾಮೇತಿಗಳು 14:29 · ಕನ್ನಡ ಬೈಬಲ್

ಕೋಪಕ್ಕೆ ನಿಧಾನಿಸು. ದೀರ್ಘಶಾಂತನು ದೊಡ್ಡವಿವೇಕಿ; ಆತ್ಮದಲ್ಲಿ ಆತುರಪಡುವವನು ಮೂಢ ತೆಯನ್ನು ವೃದ್ಧಿಮಾಡುವನು.

Cross references

ಅಂಕೆಗಳ ಪುಸ್ತಕ 12:3

(ಆದರೆ ಮೋಶೆ ಎಂಬವನು ಭೂಮುಖದ ಮೇಲಿರುವ ಸಕಲ ಮನುಷ್ಯರೆಲ್ಲರಿಗಿಂತ ಬಹು ಸಾತ್ವಿಕನಾಗಿದ್ದನು.)

ಸಾಮೇತಿಗಳು 4:8

ಆಕೆಯನ್ನು ನೀನು ಮೇಲೆತ್ತಿದರೆ ಆಕೆಯು ನಿನ್ನನ್ನು ಮೇಲೆತ್ತುವಳು; ಆಕೆಯನ್ನು ನೀನು ಅಪ್ಪಿ ಕೊಂಡರೆ ಆಕೆಯು ನಿನ್ನನ್ನು ಘನತೆಗೆ ತರುವಳು.

ಸಾಮೇತಿಗಳು 14:17

ಮುಂಗೋಪಿಯು ಬುದ್ಧಿಹೀನನಾಗಿ ವರ್ತಿಸುತ್ತಾನೆ; ಕುಯುಕ್ತಿಯುಳ್ಳವನು ಹಗೆಮಾಡು ತ್ತಾನೆ.

ಸಾಮೇತಿಗಳು 15:18

ಕೋಪಿಷ್ಠನು ವಿವಾದವನ್ನು ಎಬ್ಬಿಸುವನು; ದೀರ್ಘ ಶಾಂತನು ವಿವಾದವನ್ನು ಶಮನಪಡಿಸುತ್ತಾನೆ.

ಸಾಮೇತಿಗಳು 16:32

ದೀರ್ಘಶಾಂತನು ಶೂರನಿಗಿಂತಲೂ ಶ್ರೇಷ್ಠನು, ತನ್ನ ಮನಸ್ಸನ್ನು ಆಳುವವನು ಪಟ್ಟಣವನ್ನು ಗೆದ್ದವನಿಗಿಂತಲೂ ಉತ್ತಮನು.ಉಡಿಲಲ್ಲಿ ಚೀಟು ಹಾಕಬಹುದು; ಅದನ್ನು ಸ್ಥಿತಿಗೆ ತರುವಂತದ್ದು ಕರ್ತನದೇ.

ಸಾಮೇತಿಗಳು 19:11

ಮನುಷ್ಯನ ವಿವೇಕವು ಅವನ ಕೋಪವನ್ನು ಅಡ್ಡಿಮಾಡುತ್ತದೆ. ದೋಷವನ್ನು ಲಕ್ಷಿ ಸದೆ ಇರುವದು ಅವನಿಗೆ ಘನತೆಯಾಗಿದೆ.

ಸಾಮೇತಿಗಳು 22:24

ಸಿಟ್ಟುಗಾರನೊಂದಿಗೆ ಸ್ನೇಹಮಾಡಬೇಡ; ಕೋಪಿ ಷ್ಠನ ಸಂಗಡ ನೀನು ಹೋಗಬೇಡ.

ಸಾಮೇತಿಗಳು 25:8

ನಿನ್ನ ನೆರೆಯವನು ನಿನ್ನನ್ನು ಅವಮಾನಕ್ಕೆ ಗುರಿಮಾಡಿದಾಗ ಕಡೆಯಲ್ಲಿ ಏನು ಮಾಡಬೇಕೆಂಬದು ನೀನು ತಿಳಿಯ ದಂತೆ ದುಡುಕಿನಿಂದ ಕಲಹಮಾಡುವದಕ್ಕಾಗಿ ಹೋಗ ಬೇಡ.

ಸಾಮೇತಿಗಳು 25:28

ತನ್ನ ಸ್ವಂತ ಮನಸ್ಸನ್ನು ಆಳದಿರುವವನು ಮುರಿ ಯಲ್ಪಟ್ಟು ಬಿದ್ದುಹೋಗಿ, ಗೋಡೆಗಳಿಲ್ಲದ ಪಟ್ಟಣಕ್ಕೆ ಸಮಾನ.

ಸಭಾಪ್ರಸಂಗಿ 7:8

ಒಂದು ಸಂಗತಿಯ ಪ್ರಾರಂಭ ಕ್ಕಿಂತ ಅದರ ಅಂತ್ಯವೇ ಲೇಸು; ಆತ್ಮದಲ್ಲಿ ಗರ್ವಿಷ್ಠ ನಿಗಿಂತ ತಾಳ್ಮೆಯುಳ್ಳವನೇ ಉತ್ತಮ.

ಸಭಾಪ್ರಸಂಗಿ 7:9

ಕೋಪಿಸಿಕೊಳ್ಳು ವದಕ್ಕೆ ನಿನ್ನ ಮನಸ್ಸಿನಲ್ಲಿ ಆತುರಪಡದಿರು; ಕೋಪವು ಮೂಢರ ಎದೆಯಲ್ಲಿ ನೆಲೆಗೊಳ್ಳುತ್ತದೆ.

ಸಭಾಪ್ರಸಂಗಿ 10:6

ಮೂರ್ಖತನವು ಬಹಳ ಎತ್ತರವಾದ ಸ್ಥಳದಲ್ಲಿಡಲ್ಪಡುತ್ತದೆ. ಸಿರಿತನವು ಕೆಳಗಿನ ಸ್ಥಳದಲ್ಲಿ ಕೂತುಕೊಳ್ಳುವದು.

ದಾನಿಯೇಲ 3:19

ಆಗ ನೆಬೂಕದ್ನೆಚ್ಚರನು ಉಗ್ರದಿಂದ ತುಂಬಿದವನಾಗಿ ಅವನ ಮುಖದ ರೂಪವು ಶದ್ರಕ್‌ ಮೇಷಕ್‌ಅಬೇದ್‌ ನೇಗೋ ಎಂಬ ವರಿಗೆ ವಿರೋಧವಾಗಿ ಬೇರೆಯಾಯಿತು. ಆಗ ಅವನು ಮಾತನಾಡಿ ಆ ಆವಿಗೆಯನ್ನು ಸಾಧಾರಣವಾದ ಉರಿ ಗಿಂತ ಏಳರಷ್ಟು ಹೆಚ್ಚಾಗಿ ಉರಿಹಾಕಬೇಕೆಂದು ಆಜ್ಞಾಪಿ ಸಿದನು.

ಮತ್ತಾಯ 2:16

ಆಗ ಜ್ಞಾನಿಗಳು ತನ್ನನ್ನು ಪರಿಹಾಸ್ಯ ಮಾಡಿ ದರೆಂದು ಹೆರೋದನು ತಿಳಿದು ಅತಿ ರೋಷಗೊಂಡ ವನಾಗಿ ತಾನು ಅವರ ಮೂಲಕ ಪರಿಷ್ಕಾರವಾಗಿ ಶೋಧಿಸಿದ ಕಾಲಕ್ಕನುಸಾರ ಬೆತ್ಲೆಹೇಮಿನಲ್ಲಿಯೂ ಅದರ ಎಲ್ಲಾ ಪ್ರಾಂತ್ಯಗಳ ಮೇರೆಗಳಲ್ಲಿಯೂ ಎರಡು ವರುಷ ಮತ್ತು ಅದರೊಳಗಿದ್ದ ಎಲ್ಲಾ ಮಕ್ಕ

ಮತ್ತಾಯ 11:29

ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತು ಕೊಳ್ಳಿರಿ; ಯಾಕಂದರೆ ನಾನು ಸಾತ್ವಿಕನೂ ದೀನ ಮನಸ್ಸುಳ್ಳವನೂ ಆಗಿರುವದರಿಂದ ನೀವು ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.ಯಾಕಂದರೆ ನನ್ನ ನೊಗವು ಮೃದುವಾದದ್ದೂ ನನ್ನ ಹೊರೆಯು ಹಗುರವಾದದ್ದೂ ಆಗಿದೆ ಎಂದು ಹೇಳಿದನು.

1 ಕೊರಿಂಥದವರಿಗೆ 13:4

ಪ್ರೀತಿ ಬಹು ತಾಳ್ಮೆಯುಳ್ಳದ್ದು, ಕರುಣೆಯುಳ್ಳದ್ದು; ಪ್ರೀತಿಯು ಹೊಟ್ಟೇಕಿಚ್ಚು ಪಡುವದಿಲ್ಲ, ಹೊಗಳಿ ಕೊಳ್ಳುವದಿಲ್ಲ, ಉಬ್ಬಿಕೊಳ್ಳುವದಿಲ್ಲ,

ಯಾಕೋಬ 1:19

ಆದದರಿಂದ ನನ್ನ ಪ್ರಿಯ ಸಹೋದರರೇ, ಪ್ರತಿ ಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತನಾಡುವದರಲ್ಲಿ ಮತ್ತು ಕೋಪಿಸುವದರಲ್ಲಿ ನಿಧಾನವಾಗಿಯೂ ಇರಲಿ.

ಯಾಕೋಬ 3:17

ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.

Interlinear

Choose Theme