Home Bibles ಸಾಮೇತಿಗಳು 14:35 · ಕನ್ನಡ ಬೈಬಲ್
ಸಾಮೇತಿಗಳು 14:35 · ಕನ್ನಡ ಬೈಬಲ್

ಜ್ಞಾನ ವುಳ್ಳ ಸೇವಕನ ಕಡೆಗೆ ಅರಸನ ದಯೆ ಇದೆ; ನಾಚಿಕೆ ಪಡಿಸುವವನ ಕಡೆಗೆ ಅವನ ರೌದ್ರವಿದೆ.

Cross references

ಆದಿಕಾಂಡ 41:38

ಫರೋಹನು ತನ್ನ ಸೇವಕರಿಗೆಯೋಸೇಫನಂತೆ ದೇವರಾತ್ಮವುಳ್ಳ ಮನುಷ್ಯನು ಸಿಕ್ಕಾನೋ ಅಂದನು.

ಎಸ್ತೇರ್ 7:7

ಅರಸನು ಕೋಪವುಳ್ಳವನಾಗಿ ದ್ರಾಕ್ಷಾ ರಸದ ಔತಣದಿಂದ ಎದ್ದು ಅರಮನೆಯ ತೋಟಕ್ಕೆ ಹೋದನು. ಆದರೆ ಹಾಮಾನನು ರಾಣಿಯಾದ ಎಸ್ತೇ ರಳ ಮುಂದೆ ತನ್ನ ಪ್ರಾಣಕ್ಕೋಸ್ಕರ ಬೇಡಿಕೊಳ್ಳುತ್ತಾ ನಿಂತನು, ಯಾಕಂದರೆ ಅರಸನಿಂದ ತನಗೆ ಕೇಡು ನಿರ್ಣಯವಾಯಿತೆಂದು ತಿಳಿದನು.

ಕೀರ್ತನೆಗಳು 101:4

ಡೊಂಕಾದ ಹೃದಯವು ನನ್ನನ್ನು ಬಿಟ್ಟು ಹೋಗುವದು; ಕೆಟ್ಟವನನ್ನು ತಿಳಿಯು ವದಿಲ್ಲ.

ಸಾಮೇತಿಗಳು 10:5

ಬೇಸಿಗೆಯಲ್ಲಿ ಕೂಡಿಸುವವನು ಬುದ್ಧಿ ವಂತನಾದ ಮಗನು ಸುಗ್ಗಿಯಲ್ಲಿ ನಿದ್ರೆಮಾಡುವವನು ನಾಚಿಕೆಪಡಿಸುವ ಮಗನು.

ಸಾಮೇತಿಗಳು 16:13

ನೀತಿಯ ತುಟಿಗಳು ಅರಸರ ಆನಂದ. ನ್ಯಾಯ ವಾದದ್ದನ್ನು ಮಾತನಾಡುವವನನ್ನು ಅವರು ಪ್ರೀತಿಸು ತ್ತಾರೆ.

ಸಾಮೇತಿಗಳು 17:2

ನಾಚಿಕೆಪಡಿಸುವ ಮಗನ ಮೇಲೆ ಜ್ಞಾನಿ ಯಾದ ಸೇವಕನು ಆಳುವವನಾಗಿ ಸಹೋದರರಲ್ಲಿ ಬಾಧ್ಯತೆಗೆ ಪಾಲುಗಾರನಾಗುವನು.

ಸಾಮೇತಿಗಳು 19:12

ಅರಸನ ಕೋಪವು ಸಿಂಹದ ಘರ್ಜನೆಯಂತಿದೆ; ಅವನ ದಯೆಯು ಹುಲ್ಲಿನ ಮೇಲಿರುವ ಇಬ್ಬನಿಯಂತಿದೆ.

ಸಾಮೇತಿಗಳು 19:26

ತಂದೆಯನ್ನು ನಷ್ಟಪಡಿಸಿ ತಾಯಿಯನ್ನು ಓಡಿಸುವವನು ನಾಚಿಕೆಯನ್ನುಂಟು ಮಾಡಿ ನಿಂದೆಯನ್ನು ತರುತ್ತಾನೆ.

ಸಾಮೇತಿಗಳು 20:8

ನ್ಯಾಯತೀರ್ಪಿನ ಸಿಂಹಾಸನದ ಮೇಲೆ ಕೂತಿರುವ ಅರಸನು ತನ್ನ ಕಣ್ಣು ದೃಷ್ಟಿಯಿಂದ ಸಕಲ ಕೆಟ್ಟತನವನ್ನು ಚದರಿಸುವನು.

ಸಾಮೇತಿಗಳು 20:26

ಜ್ಞಾನಿಯಾದ ಅರಸನು ದುಷ್ಟರನ್ನು ಚದರಿಸಿ ಅವರ ಮೇಲೆ ಚಕ್ರವನ್ನು ಎಳೆಯುತ್ತಾನೆ.

ಸಾಮೇತಿಗಳು 22:11

ಹೃದಯ ಶುದ್ಧಿಯನ್ನು ಪ್ರೀತಿಸುವವನಿಗೆ ತನ್ನ ತುಟಿಗಳ ಕೃಪೆಗಾಗಿ ಅರಸನು ಅವನಿಗೆ ಸ್ನೇಹಿತ ನಾಗಿರುವನು.

ಸಾಮೇತಿಗಳು 25:5

ಅರಸನ ಸಮ್ಮುಖದಿಂದ ದುಷ್ಟರನ್ನು ತೆಗೆದುಹಾಕಿದರೆ ಅವನ ಸಿಂಹಾಸನವು ನೀತಿಯಲ್ಲಿ ಸ್ಥಿರವಾಗುವದು.

ಸಾಮೇತಿಗಳು 29:12

ಸುಳ್ಳಿಗೆ ಕಿವಿಗೊಡುವ ಅಧಿಕಾರಿಗೆ ಕಿವಿಗೊಟ್ಟರೆ ಅವನ ಸೇವಕರೆಲ್ಲರೂ ದುಷ್ಟರೇ.

ಮತ್ತಾಯ 24:45

ಹಾಗಾದರೆ ತನ್ನ ಮನೆಯಲ್ಲಿದ್ದವರಿಗೆ ತಕ್ಕ ಕಾಲ ದಲ್ಲಿ ಆಹಾರ ಕೊಡುವಂತೆ ಅವರ ಮೇಲೆ ತನ್ನ ಯಜಮಾನನು ನೇಮಿಸಿದ ಅಧಿಕಾರಿಯೂ ನಂಬಿಗಸ್ತನೂ ಜ್ಞಾನಿಯೂ ಆದ ಸೇವಕನು ಯಾರು?

ಮತ್ತಾಯ 25:21

ಆಗ ಅವನ ಯಜಮಾನನು ಅವನಿಗೆ--ನಂಬಿಗಸ್ತನಾದ ಒಳ್ಳೇ ಸೇವಕನೇ, ಒಳ್ಳೇದನ್ನು ಮಾಡಿದ್ದೀ. ಸ್ವಲ್ಪವಾದವುಗಳಲ್ಲಿ ನೀನು ನಂಬಿಗಸ್ತ ನಾದದ್ದರಿಂದ ನಾನು ನಿನ್ನನ್ನು ಬಹಳವಾದವುಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು; ನೀನು ನಿನ್ನ ಯಜಮಾನನ ಸಂತೋಷದಲ್ಲಿ ಪ್ರವೇಶಿಸು ಅಂದನು.

ಮತ್ತಾಯ 25:23

ಆಗ ಅವನ ಯಜಮಾನನು ಅವನಿಗೆ--ನಂಬಿಗಸ್ತನಾದ ಒಳ್ಳೇ ಸೇವಕನೇ, ಒಳ್ಳೇ ದನ್ನು ಮಾಡಿದ್ದೀ; ಸ್ವಲ್ಪವಾದವುಗಳಲ್ಲಿ ನೀನು ನಂಬಿಗ ಸ್ತನಾದದ್ದರಿಂದ ನಾನು ನಿನ್ನನ್ನು ಬಹಳವಾದವುಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು; ನೀನು ನಿನ್ನ ಯಜಮಾನನ ಸಂತೋಷದಲ್ಲಿ ಪ್ರವೇಶಿಸು ಅಂದನು.

ಲೂಕ 12:42

ಕರ್ತನು--ಹಾಗಾದರೆ ತಕ್ಕಕಾಲದಲ್ಲಿ ಅವರ ಪಾಲಿನ ಆಹಾರವನ್ನು ಕೊಡುವದಕ್ಕಾಗಿ ಒಡೆಯನು ತನ್ನ ಮನೆಯಮೇಲೆ ನೇಮಿಸುವ ನಂಬಿಗಸ್ತನೂ ವಿವೇಕಿಯೂ ಆಗಿರುವ ಮನೇವಾರ್ತೆಯವನು ಯಾರು?

Interlinear

Choose Theme