ಪಾತಾಳವೂ ನಾಶನವೂ ಕರ್ತನ ಎದುರಿನಲ್ಲಿವೆ; ಹಾಗಾದರೆ ಮನುಷ್ಯರ ಹೃದಯಗಳು ಇನ್ನೂ ಎಷ್ಟೋ ಹೆಚ್ಚಾಗಿ ಆತನ ಮುಂದೆ ಇವೆಯಲ್ಲವೇ.
Cross references
ಆದರೆ ಕರ್ತನು ಸಮುವೇಲನಿಗೆ--ನೀನು ಅವನ ರೂಪವನ್ನೂ ಅವನ ದೇಹದ ಉದ್ದವನ್ನೂ ದೃಷ್ಟಿಸಬೇಡ; ಅವನನ್ನು ನಾನು ತಿರಸ್ಕರಿಸಿದೆನು; ಕರ್ತನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ಮಾತ್ರ ನೋಡದೆ ಹೃದಯವನ್ನೇ ನೋಡುವನು ಅಂದನು.
ನೀನು ನಮ್ಮ ತಂದೆಗಳಿಗೆ ಕೊಟ್ಟ ದೇಶದಲ್ಲಿ ಅವರು ಬದು ಕುವ ವರೆಗೆ ಅವರು ನಿನಗೆ ಭಯಪಟ್ಟು ನಿನ್ನ ಮಾರ್ಗ ದಲ್ಲಿ ನಡೆಯುವ ಹಾಗೆ
ಆತನ ಮುಂದೆ ನರಕವು ಬೆತ್ತಲೆಯಾಗಿದೆ; ನಾಶನಕ್ಕೆ ಮರೆ ಇಲ್ಲ.
ದುಷ್ಟರ ದುಷ್ಟತನವು ಮುಗಿದು ಹೋಗಲಿ, ಆದರೆ ನೀತಿವಂತನನ್ನು ದೃಢಪಡಿಸು. ನೀತಿಯುಳ್ಳ ದೇವರು ಹೃದಯವನ್ನೂ ಅಂತರಿಂದ್ರಿ ಯಗಳನ್ನೂ ಶೋಧಿಸುತ್ತಾನಲ್ಲಾ.
ದೇವರು ಅದನ್ನು ವಿಚಾರಿಸನೋ? ಆತನು ಹೃದಯದ ಮರ್ಮ ಗಳನ್ನು ತಿಳಿದಿದ್ದಾನೆ.
ನಾನು ಆಕಾಶಕ್ಕೆ ಏರಿಹೋದರೆ ನೀನು ಅಲ್ಲಿ ಇದ್ದೀ; ಪಾತಾಳದಲ್ಲಿ ನನ್ನ ಹಾಸಿಗೆಯನ್ನು ಮಾಡಿಕೊಂಡರೆ ಅಗೋ, ನೀನು ಅಲ್ಲಿ ಇದ್ದೀ.
ಪಾತಾಳಕ್ಕೂ ನಾಶನಕ್ಕೂ ತೃಪ್ತಿ ಇಲ್ಲವೇ ಇಲ್ಲ; ಹಾಗೆಯೇ ಮನುಷ್ಯ ಕಣ್ಣುಗಳು ಎಂದಿಗೂ ತೃಪ್ತಿಹೊಂದುವದಿಲ್ಲ.
ಅದು ನನ್ನ ಸ್ವರಕ್ಕೆ ವಿಧೇಯವಾಗದೆ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರೆ ನಾನು ಅದಕ್ಕೆ ಮೇಲನ್ನು ಮಾಡುತ್ತೇನೆಂದು ಹೇಳಿದ ಒಳ್ಳೇದನ್ನು ಕುರಿತು ಪಶ್ಚಾತ್ತಾಪಪಡುವೆನು.
ಆದರೆ ಯೇಸು ತನ್ನನ್ನು ಅವರಿಗೆ ವಶಪಡಿಸಿ ಕೊಳ್ಳಲಿಲ್ಲ; ಯಾಕಂದರೆ ಆತನು ಎಲ್ಲರನ್ನೂ ಅರಿತ ವನಾಗಿದ್ದನು.ಆತನು ಮನುಷ್ಯರ ಅಂತರಂಗವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿಕೊಡಬೇಕಾದ ಅವಶ್ಯವಿರಲಿಲ್ಲ.
ಆತನು ಮೂರನೆಯ ಸಾರಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ಕೇಳಿದನು. ಆತನು ಮೂರನೆಯ ಸಾರಿ--ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು--ಕರ್ತನೇ, ನಿನಗೆ ಎಲ್ಲವುಗಳು ತಿಳಿದವೆ; ನಾನು ನಿನ
ನಾವು ಯಾವಾತನಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ ಆತನ ದೃಷ್ಟಿಗೆ ಸಮಸ್ತವೂ ಮುಚ್ಚುಮರೆಯಿಲ್ಲ ದ್ದಾಗಿಯೂ ಬೈಲಾದದ್ದಾಗಿಯೂ ಆದರೆ ಆತನ ಸನ್ನಿಧಿಯಲ್ಲಿ ಅಗೋಚರವಾಗಿರುವ ಸೃಷ್ಟಿಯು ಒಂದೂ ಇಲ್ಲ.
ಸತ್ತವನಾದೆನು,ಈಗ ಬದುಕುವವನಾಗಿದ್ದೇನೆ. ಇಗೋ, ನಾನು ಎಂದೆಂ ದಿಗೂ ಬದುಕುವವನಾಗಿದ್ದೇನೆ. ಆಮೆನ್. ನರಕದ ಮತ್ತು ಮರಣದ ಬೀಗದ ಕೈಗಳೂ ನನ್ನಲ್ಲಿ ಅವೆ.