Home Bibles ಸಾಮೇತಿಗಳು 15:4 · ಕನ್ನಡ ಬೈಬಲ್
ಸಾಮೇತಿಗಳು 15:4 · ಕನ್ನಡ ಬೈಬಲ್

ಹಿತವಾದ ನಾಲಿಗೆಯು ಜೀವವೃಕ್ಷ; ಅದರಲ್ಲಿ ಮೂರ್ಖತ್ವವು ಆತ್ಮಕ್ಕೆ ಒಡಕು.

Cross references

ಆದಿಕಾಂಡ 3:22

ಇದ ಲ್ಲದೆ ಕರ್ತನಾದ ದೇವರು--ಇಗೋ, ಮನುಷ್ಯನು ಒಳ್ಳೇದರ ಕೆಟ್ಟದರ ಭೇದವನ್ನು ತಿಳಿದು ನಮ್ಮಲ್ಲಿ ಒಬ್ಬನಂತಾದನು; ಈಗ ಅವನು ಕೈಚಾಚಿ ಜೀವವೃಕ್ಷದ ಫಲವನ್ನು ತೆಗೆದು ತಿಂದು ಎಂದೆಂದಿಗೂ ಬದುಕ ಬಾರದು ಅಂದನು.

ಕೀರ್ತನೆಗಳು 52:2

ಮೋಸ ಮಾಡುವ ಹದವಾದ ಕತ್ತಿಯ ಹಾಗೆ ನಿನ್ನ ನಾಲಿಗೆಯು ಕೇಡುಗಳನ್ನು ಕಲ್ಪಿಸುತ್ತದೆ.

ಕೀರ್ತನೆಗಳು 109:22

ನಾನು ದೀನನೂ ಬಡವನೂ ಆಗಿದ್ದೇನೆ. ನನ್ನ ಹೃದಯವು ಅಂತರಂಗದಲ್ಲಿ ಗಾಯಗೊಂಡಿದೆ.

ಸಾಮೇತಿಗಳು 3:18

ತನ್ನನ್ನು ಹಿಡಿದುಕೊಳ್ಳುವ ವರಿಗೆ ಆಕೆಯು ಜೀವದ ವೃಕ್ಷವಾಗಿದ್ದಾಳೆ; ಆಕೆಯನ್ನು ಭದ್ರವಾಗಿ ಇಟ್ಟುಕೊಳ್ಳುವ ಪ್ರತಿಯೊಬ್ಬನೂ ಧನ್ಯನು.

ಸಾಮೇತಿಗಳು 10:11

ನೀತಿವಂತನ ಬಾಯಿ ಯು ಜೀವಕರವಾದ ಬಾವಿ; ದುಷ್ಟನ ಬಾಯನ್ನು ಬಲಾತ್ಕಾರವು ಮುಚ್ಚುತ್ತದೆ.

ಸಾಮೇತಿಗಳು 12:18

ಕತ್ತಿಯ ಇರಿತದ ಹಾಗೆ ಮಾತನಾಡುವದು ಉಂಟು. ಜ್ಞಾನವಂತರ ನಾಲಿಗೆಯು ಆರೋಗ್ಯ.

ಸಾಮೇತಿಗಳು 16:24

ಮನೋಹರವಾದ ಮಾತುಗಳು ಜೇನು ತುಪ್ಪದಂತೆ ಪ್ರಾಣಕ್ಕೆ ಮಧುರವೂ ಎಲುಬು ಗಳಿಗೆ ಕ್ಷೇಮವೂ ಆಗಿವೆ.

ಸಾಮೇತಿಗಳು 18:8

ಚಾಡಿಕೋರನ ಮಾತುಗಳು ಗಾಯಗಳಂತೆ ಇದ್ದು ಹೊಟ್ಟೆಯೊಳಗೆ ಇಳಿದುಹೋಗುವವು.

ಸಾಮೇತಿಗಳು 18:14

ತನ್ನ ಬಲಹೀನತೆಯನ್ನು ಮನುಷ್ಯನ ಆತ್ಮವು ಸಹಿಸುವದು; ಗಾಯಪಟ್ಟ ಆತ್ಮವನ್ನು ಸಹಿಸುವವರು ಯಾರು?

ಸಾಮೇತಿಗಳು 26:22

ಚಾಡಿಕೋರನ ಮಾತುಗಳು ಗಾಯಗಳ ಹಾಗೆ ಹೊಟ್ಟೆಯೊಳಕ್ಕೆ ಇಳಿಯುತ್ತವೆ.

ಮಲಾಕಿ 4:2

ಆದರೆ ನನ್ನ ಹೆಸರಿಗೆ ಭಯಪಡುವವರಾದ ನಿಮಗೆ ನೀತಿಯ ಸೂರ್ಯನು ತನ್ನ ರೆಕ್ಕೆಗಳಲ್ಲಿ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು; ನೀವು ಹೊರಟು ಕೊಟ್ಟಿಗೆಯಿಂದ ಬಿಟ್ಟ ಕರುಗಳ ಹಾಗೆ ಕುಣಿದಾಡುವಿರಿ.

1 ತಿಮೋಥೆಯ 6:3

ಯಾವನಾದರೂ ಬೇರೆ ವಿಧವಾದ ಉಪದೇಶ ವನ್ನು ಮಾಡಿ ಅಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಸ್ವಸ್ಥವಾದ ಮಾತುಗಳಿಗೂ ಭಕ್ತ್ಯನುಸಾರವಾದ ಬೋಧನೆಗೂ ಸಮ್ಮತಿಸದೆ ಹೋದರೆ

ಪ್ರಕಟನೆ 2:7

ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನ ಮಧ್ಯದಲ್ಲಿರುವ ಜೀವವೃಕ್ಷದ ಹಣ್ಣನ್ನು ತಿನ್ನುವದಕ್ಕೆ ಕೊಡುವೆನು.

Interlinear

Choose Theme