Home Bibles ಸಾಮೇತಿಗಳು 18:3 · ಕನ್ನಡ ಬೈಬಲ್
ಸಾಮೇತಿಗಳು 18:3 · ಕನ್ನಡ ಬೈಬಲ್

ದುಷ್ಟನು ಬಂದಾಗ ತಾತ್ಸಾರವೂ ಅವಮಾನದೊಂದಿಗೆ ನಿಂದೆಯೂ ಬರುತ್ತವೆ.

Cross references

1 ಸಮುವೇಲ 20:30

ಆಗ ಸೌಲನು ಯೋನಾತಾನನ ಮೇಲೆ ಕೋಪಗೊಂಡು ಅವನಿಗೆ--ವಕ್ರವಾಗಿ ಎದುರು ಬೀಳುವ ಸ್ತ್ರೀಯ ಮಗನೇ, ನಿನಗೆ ನಾಚಿಕೆಯಾಗುವ ಹಾಗೆಯೂ ನಿನ್ನ ತಾಯಿಯ ಬೆತ್ತಲೆತನಕ್ಕೆ ನಾಚಿಕೆ ಯಾಗುವ ಹಾಗೆಯೂ ಇಷಯನ ಮಗನನ್ನು ನೀನು ಆದುಕೊಂಡಿದ್ದೀ ಎಂದು ನಾನರಿಯೆನೋ?

ನೆಹೆಮ್ಯ 4:4

ನಮ್ಮ ದೇವರೇ, ಕೇಳು; ಯಾಕಂದರೆ ನಾವು ತಿರಸ್ಕರಿಸಲ್ಪಟ್ಟವರಾಗಿದ್ದೇವೆ. ನೀನು ಅವರ ನಿಂದೆಯನ್ನು ಅವರ ತಲೆಗಳ ಮೇಲೆ ತಿರುಗುವಂತೆ ಮಾಡಿ ಸೆರೆಯ ದೇಶದಲ್ಲಿ ಅವರನ್ನು ಕೊಳ್ಳೆಯಾಗಿ ಒಪ್ಪಿಸು.

ಕೀರ್ತನೆಗಳು 69:9

ನಿನ್ನ ಆಲಯದ ಆಸಕ್ತಿಯು ನನ್ನನ್ನು ತಿಂದುಬಿಟ್ಟಿದೆ; ನಿನ್ನನ್ನು ನಿಂದಿಸುವವರ ನಿಂದೆಗಳು ನನ್ನ ಮೇಲೆ ಬಿದ್ದಿವೆ.

ಕೀರ್ತನೆಗಳು 69:20

ನಿಂದೆಯು ನನ್ನ ಹೃದಯವನ್ನು ಮುರಿದದೆ; ಭಾರದಿಂದ ನಾನು ತುಂಬಿದವನಾಗಿದ್ದೇನೆ, ಕನಿಕರಕ್ಕೋಸ್ಕರ ಕೆಲವರನ್ನು ನಿರೀಕ್ಷಿಸಿದೆನು, ಆದರೆ ಒಬ್ಬರೂ ಕಾಣಲಿಲ್ಲ. ಆದರಿಸುವವರಿಗೋಸ್ಕರ ಸಹ ಎದುರು ನೋಡಿದೆನು: ಆದರೆ ಯಾರೂ ಸಿಕ್ಕಲಿಲ್ಲ.

ಕೀರ್ತನೆಗಳು 123:3

ನಮ್ಮನ್ನು ಕರುಣಿಸು; ಓ ಕರ್ತನೇ, ನಮ್ಮನ್ನು ಕರುಣಿಸು; ಬಹಳವಾಗಿ ತಿರ ಸ್ಕಾರದಿಂದ ತುಂಬಿದ್ದೇವೆ.ಭೋಗಿಗಳ ಹಾಸ್ಯದಿಂದ ನಮ್ಮ ಹೃದಯವು ತುಂಬಿಯದೆ, ಗರ್ವಿಷ್ಟರ ನಿಂದೆ ಯಿಂದ ನಮ್ಮ ಮನಸ್ಸು ಬೇಸತ್ತು ಹೋಯಿತು.

ಸಾಮೇತಿಗಳು 11:2

ಗರ್ವ ಬಂದಾಗ ನಾಚಿಕೆಯೂ ಬರುತ್ತದೆ; ದೀನರಲ್ಲಿ ಜ್ಞಾನವಿದೆ.

ಸಾಮೇತಿಗಳು 13:5

ನೀತಿವಂತನು ಸುಳ್ಳನ್ನು ಹಗೆಮಾಡುತ್ತಾನೆ; ದುಷ್ಟನು ಹೇಸಿಗೆಯಾಗಿದ್ದು ಅವಮಾನಕ್ಕೆ ಗುರಿಯಾಗು ವನು.

ಸಾಮೇತಿಗಳು 22:10

ಪರಿಹಾಸ್ಯ ಮಾಡುವವ ನನ್ನು ಹೊರಗೆ ತಳ್ಳಿಬಿಟ್ಟರೆ ಕಲಹವು ನಿಲ್ಲುವದು; ಹೌದು, ವಿವಾದವೂ ನಿಂದೆಯೂ ನಿಂತುಹೋಗು ವವು.

ಸಾಮೇತಿಗಳು 29:16

ದುಷ್ಟರು ವೃದ್ಧಿಯಾದಾಗ ದೋಷವು ಹೆಚ್ಚುತ್ತದೆ; ನೀತಿವಂತರು ಅವರ ಬೀಳುವಿಕೆಯನ್ನು ಕಣ್ಣಾರೆ ನೋಡುವರು.

ಮತ್ತಾಯ 27:39

ಅಲ್ಲಿ ಹೋಗುತ್ತಿದ್ದವರು ಆತನನ್ನು ದೂಷಿಸಿ ತಮ್ಮ ತಲೆಗಳನ್ನು ಅಲ್ಲಾಡಿಸುತ್ತಾ--

1 ಪೇತ್ರ 4:4

ತಾವು ಮಾಡುವ ಅಪರಿಮಿತವಾದ ಪಟಿಂಗತನದಲ್ಲಿ ನೀವು ಅವರೊಂದಿಗೆ ಸೇರದೆ ಇದ್ದದ್ದಕ್ಕೆ ಅವರು ಆಶ್ಚರ್ಯ ಪಟ್ಟು ನಿಮ್ಮನ್ನು ದೂಷಿಸುತ್ತಾರೆ.

1 ಪೇತ್ರ 4:14

ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಸಂತೋಷಪಡಿರಿ; ಯಾಕಂದರೆ ಮಹಿಮೆ ಯುಳ್ಳ ದೇವರ ಆತ್ಮನು ನಿಮ್ಮ ಮೇಲೆ ನೆಲೆಗೊಂಡಿ ದ್ದಾನಲ್ಲಾ. ಅವರ ವಿಷಯದಲ್ಲಿ ಆತನು ದೂಷಿಸ ಲ್ಪಡುತ್ತಾನೆ; ಆದರೆ ನಿಮ್ಮ ವಿಷಯದಲ್ಲಿ ಆತನು ಮಹಿಮೆ ಹೊಂದುತ್ತಾನೆ.

Interlinear

Choose Theme