Home Bibles ಸಾಮೇತಿಗಳು 19:22 · ಕನ್ನಡ ಬೈಬಲ್
ಸಾಮೇತಿಗಳು 19:22 · ಕನ್ನಡ ಬೈಬಲ್

ಮನುಷ್ಯನ ಆಕಾಂಕ್ಷೆಯು ಆತನ ದಯೆಯೇ; ಬಡವನು ಸುಳ್ಳುಗಾರನಿಗಿಂತ ಒಳ್ಳೆಯವನು.

Cross references

1 ದಿನವೃತ್ತಾಂತ 29:2

ಆದರೆ ನಾನು ನನ್ನ ಸಮಸ್ತ ಶಕ್ತಿಯಿಂದ ನನ್ನ ದೇವರ ಮನೆಯ ನಿಮಿತ್ತ ಬಂಗಾರದ ಕೆಲಸ ಕ್ಕೋಸ್ಕರ ಬಂಗಾರವನ್ನೂ ಬೆಳ್ಳಿಯ ಕೆಲಸಕ್ಕೋಸ್ಕರ ಬೆಳ್ಳಿಯನ್ನೂ ತಾಮ್ರದ ಕೆಲಸಕ್ಕೋಸ್ಕರ ತಾಮ್ರವನ್ನೂ ಕಬ್ಬಿಣದ ಕೆಲಸಕ್ಕೋಸ್ಕರ ಕಬ್ಬಿಣವನ್ನೂ ಮರದ ಕೆಲಸ ಕ್ಕೋಸ್ಕರ ಮರವನ್ನೂ ನೆಡುವ ನಿಮಿತ್ತ ಗೋಮೇಧಿಕ ಕಲ್ಲುಗಳನ್ನೂ ಕಾಡಿಗೆ ಬಣ್ಣವಾದಂಥ ಚಿತ್ರವಾದಂಥ ಕಲ್ಲುಗಳನ್ನೂ ಸಕಲ ಅಮೂಲ್ಯವಾದ ಕಲ್ಲುಗಳನ್ನೂ ಅಮೃತ ಶಿಲೆಗಳನ್ನೂ ಬಹಳವಾಗಿ ಸಿದ್ಧಮಾಡಿದ್ದೇನೆ.

1 ದಿನವೃತ್ತಾಂತ 29:17

ನನ್ನ ಕರ್ತನೇ, ನೀನು ಹೃದಯವನ್ನು ಶೋಧಿಸಿ ಯಥಾರ್ಥವಾದವು ಗಳಲ್ಲಿ ಸಂತೋಷವಾಗಿದ್ದೀ ಎಂದು ನಾನು ಬಲ್ಲೆನು. ನಾನು ಯಥಾರ್ಥವಾದ ಹೃದಯದಿಂದ ಇವುಗಳನ್ನೆಲ್ಲಾ ಮನಃಪೂರ್ವಕವಾಗಿ ಅರ್ಪಿಸಿದ್ದೇನೆ. ಇದಲ್ಲದೆ ಇಲ್ಲಿ ರುವ ನಿನ್ನ ಜನರು ನಿನಗೆ ಮನಃಪೂರ್ವಕವಾಗಿ ಅರ್ಪಿ ಸುವದನ್ನು ಈಗ ಸಂತೋಷವಾಗಿ ಕಂಡೆನು.

2 ದಿನವೃತ್ತಾಂತ 6:8

ಆಗ ಕರ್ತನು ನನ್ನ ತಂದೆಯಾದ ದಾವೀ ದನಿಗೆ--ನನ್ನ ಹೆಸರಿಗೆ ಆಲಯವನ್ನು ಕಟ್ಟಿಸಲು ನಿನಗೆ ಮನಸ್ಸಾಗಿತ್ತಲ್ಲಾ? ನಿನಗೆ ಮನಸ್ಸಾಗಿರುವದರಿಂದ ಒಳ್ಳೇದು ಮಾಡಿದಿ.

ಯೋಬ 6:15

ನನ್ನ ಸಹೋದರರು ಹಳ್ಳದ ಹಾಗೆ ಮೋಸ ಮಾಡಿದ್ದಾರೆ; ಹಳ್ಳಗಳ ಪ್ರವಾಹದಂತೆ ಹಾದು ಹೋಗುತ್ತಾರೆ.

ಯೋಬ 17:5

ತನ್ನ ಸ್ನೇಹಿತರನ್ನು ಹೊಗಳಿ ಮಾತನಾಡುವವನ ಮಕ್ಕಳ ಕಣ್ಣುಗಳು ಕ್ಷೀಣವಾಗುವವು.

ಕೀರ್ತನೆಗಳು 62:9

ನಿಶ್ಚಯವಾಗಿ ಅಲ್ಪರು ವ್ಯರ್ಥರೇ, ಘನವಂತರು ಸುಳ್ಳೇ; ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿದರೆ ಧೂಳಿ ಗಿಂತಲೂ ಲಘುವಾಗಿದ್ದಾರೆ.

ಸಾಮೇತಿಗಳು 19:1

ತನ್ನ ನಿರ್ದೋಷತ್ವದಲ್ಲಿ ನಡೆಯುವ ಬಡವನು ತನ್ನ ತುಟಿಗಳಲ್ಲಿ ವಕ್ರತೆಯುಳ್ಳ ಬುದ್ಧಿಹೀನನಿಗಿಂತಲೂ ಉತ್ತಮ.

ಮಾರ್ಕ 12:41

ಯೇಸು ಬೊಕ್ಕಸದ ಎದುರಾಗಿ ಕೂತುಕೊಂಡು ಜನರು ಹೇಗೆ ಬೊಕ್ಕಸದಲ್ಲಿ ಹಣ ಹಾಕುತ್ತಿದ್ದಾ ರೆಂಬದನ್ನು ನೋಡುತ್ತಿದ್ದನು; ಅನೇಕ ಐಶ್ವರ್ಯವಂತರು ಹೆಚ್ಚೆಚ್ಚಾಗಿ ಹಾಕಿದರು.

ಮಾರ್ಕ 14:6

ಆದರೆ ಯೇಸು --ಈಕೆಯನ್ನು ಬಿಟ್ಟುಬಿಡಿರಿ; ಈಕೆಗೆ ನೀವು ಯಾಕೆ ತೊಂದರೆ ಕೊಡುತ್ತೀರಿ? ಈಕೆಯು ನನಗೆ ಒಳ್ಳೇ ಕಾರ್ಯವನ್ನು ಮಾಡಿದ್ದಾಳೆ.

2 ಕೊರಿಂಥದವರಿಗೆ 8:2

ಆ ಸಭೆಗಳವರು ಬಹಳ ಹಿಂಸೆಯನ್ನು ತಾಳುವವರಾದರೂ ವಿಪರೀತ ವಾದ ಬಡತನದಲ್ಲಿದ್ದರೂ ಬಹು ಆನಂದದಿಂದ ತುಂಬಿದವರಾಗಿ ಅತ್ಯಂತ ಔದಾರ್ಯವುಳ್ಳವರಾದರು.

2 ಕೊರಿಂಥದವರಿಗೆ 8:12

ಒಬ್ಬನು ಕೊಡುವದಕ್ಕೆ ಮನಸ್ಸಿದ್ದರೆ ಅವನು ತನಗೆ ಇಲ್ಲದ್ದಕ್ಕನುಸಾರವಾಗಿ ಅಲ್ಲ, ಆದರೆ ಇರುವದಕ್ಕನುಸಾರವಾಗಿಯೇ ಕೊಟ್ಟರೆ ಅದು ಸಮರ್ಪ ಕವಾಗಿರುವದು.

ತೀತ 1:2

ಸುಳ್ಳಾಡದ ದೇವರು ಲೋಕದಾರಂಭಕ್ಕೆ ಮೊದಲೇ ವಾಗ್ದಾನ ಮಾಡಿದ ನಿತ್ಯಜೀವದ ನಿರೀಕ್ಷೆಯನ್ನು

Interlinear

Choose Theme