Home Bibles ಸಾಮೇತಿಗಳು 2:18 · ಕನ್ನಡ ಬೈಬಲ್
ಸಾಮೇತಿಗಳು 2:18 · ಕನ್ನಡ ಬೈಬಲ್

ಅವಳ ಮನೆಯು ಮರಣದ ಕಡೆಗೆ, ಅವಳ ದಾರಿ ಗಳು ಮೃತರ ಕಡೆಗೆ ಇಳಿಸುತ್ತವೆ.

Cross references

ಸಾಮೇತಿಗಳು 1:32

ಅಜ್ಞಾನಿ ಗಳ ವಿಮುಖವು ಅವರನ್ನು ಕೊಲ್ಲುವದು, ಜ್ಞಾನ ಹೀನರ ಏಳಿಗೆ ಅವರನ್ನು ನಾಶಪಡಿಸುವದು.ನನಗೆ ಕಿವಿಗೊಡುವವನಾದರೋ ಜೀವಿಸಿ ಯಾವ ಕೇಡಿನ ಭಯವಿಲ್ಲದೆ ನೆಮ್ಮದಿಯಲ್ಲಿರುವನು.

ಸಾಮೇತಿಗಳು 5:4

ಆದರೆ ಅವಳ ಅಂತ್ಯವು ಮಾಚಿ ಪತ್ರೆಯಂತೆ ಕಹಿಯೂ ಇಬ್ಬಾಯಿ ಕತ್ತಿಯಂತೆ ಹರಿತವೂ ಇರುತ್ತದೆ.

ಸಾಮೇತಿಗಳು 6:26

ಒಬ್ಬ ವೇಶ್ಯೆಯ ಮೂಲಕ ಮನುಷ್ಯನು ರೊಟ್ಟಿಯ ತುಂಡಿಗೆ ಈಡಾಗುವನು; ವ್ಯಭಿಚಾರಿಣಿಯು ಅಮೂಲ್ಯವಾದ ಜೀವವನ್ನು ಬೇಟೆಯಾಡುವಳು.

ಸಾಮೇತಿಗಳು 7:22

ಎತ್ತು ವಧೆಯ ಸ್ಥಾನಕ್ಕೆ ಹೋಗುವಂತೆ ಇಲ್ಲವೆ ಮೂರ್ಖನು ಶಿಕ್ಷೆಯ ದಂಡನೆಗೆ ಹೋಗುವಂತೆ

ಸಾಮೇತಿಗಳು 7:26

ಬಹು ಜನರನ್ನು ಅವಳು ಗಾಯಪಡಿಸಿ ಬೀಳಿಸಿ ದ್ದಾಳೆ; ಹೌದು, ಬಲಿಷ್ಠರಾದ ಅನೇಕ ಪುರುಷರು ಅವಳಿಂದ ಹತರಾಗಿದ್ದಾರೆ.ಅವಳ ಮನೆಯು ಪಾತಾಳದ ದಾರಿ, ಅದು ಮೃತ್ಯುವಿನ ಕೊಠಡಿಗೆ ಇಳಿದುಹೋಗುತ್ತದೆ.

ಸಾಮೇತಿಗಳು 7:27

ಅವಳ ಮನೆಯು ಪಾತಾಳದ ದಾರಿ, ಅದು ಮೃತ್ಯುವಿನ ಕೊಠಡಿಗೆ ಇಳಿದುಹೋಗುತ್ತದೆ.

ಸಾಮೇತಿಗಳು 9:18

ಆದರೆ ಸತ್ತವರು ಅಲ್ಲಿದ್ದಾರೆಂದೂ ಪಾತಾಳದ ಅಗಾಧಗಳಲ್ಲಿ ಅವಳ ಅಥಿತಿಗಳು ಇದ್ದಾ ರೆಂದೂ ಅವನಿಗೆ ತಿಳಿಯದು.

1 ಕೊರಿಂಥದವರಿಗೆ 6:9

ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು

ಗಲಾತ್ಯದವರಿಗೆ 5:19

ಶರೀರದ ಕೃತ್ಯಗಳು ಸ್ಪಷ್ಟವಾಗಿ ತೋರಿಬಂದಿವೆ; ಅವು ಯಾವವೆಂದರೆ--ವ್ಯಭಿಚಾರ ಜಾರತ್ವ ಅಶುದ್ಧತ್ವ ಬಂಡುತನ

ಎಫೆಸದವರಿಗೆ 5:5

ಯಾವ ಜಾರನಾಗಲಿ, ಅಶುದ್ಧನಾಗಲಿ, ವಿಗ್ರಹಾರಾಧಕನಂತಿರುವ ಲೋಭಿಯಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯನಾಗುವದಿಲ್ಲವೆಂದು ನೀವು ಬಲ್ಲಿರಲ್ಲವೇ.

ಪ್ರಕಟನೆ 21:8

ಆದರೆ ಭಯ ಗ್ರಸ್ಥರು, ನಂಬಿಕೆಯಿಲ್ಲದವರು, ಅಸಹ್ಯವಾದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾ ರಾಧಕರು ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳು ಉರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.

ಪ್ರಕಟನೆ 22:15

ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆ ಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು.

Interlinear

Choose Theme