Proverbs
Chapter 20
ಕನ್ನಡ ಬೈಬಲ್1ದ್ರಾಕ್ಷಾರಸವು ಪರಿಹಾಸ್ಯಕರವಾಗಿದೆ; ಮಾದಕ ಮದ್ಯವು ಉದ್ರೇಕಿಸುತ್ತದೆ. ಇದ ರಿಂದ ಮೋಸಹೋದವನು ಜ್ಞಾನಿಯಲ್ಲ.
2ಅರಸನ ಭಯವು ಸಿಂಹದ ಗರ್ಜನೆಯಂತಿದೆ; ಅವನಿಗೆ ಕೋಪ ವನ್ನೆಬ್ಬಿಸುವವನು ತನ್ನ ಪ್ರಾಣಕ್ಕೆ ವಿರೋಧವಾಗಿ ಪಾಪ ಮಾಡುತ್ತಾನೆ.
3ಕಲಹವನ್ನು ತಡೆಯುವವನು ಮಾನಕ್ಕೆ ಯೋಗ್ಯನು; ಪ್ರತಿಯೊಬ್ಬ ಬುದ್ಧಿಹೀನನು ತಲೆಹಾಕು ತ್ತಾನೆ.
4ಮೈಗಳ್ಳನು ಚಳಿಯ ನಿಮಿತ್ತವಾಗಿ ಉಳುವದಿಲ್ಲ; ಆದಕಾರಣ ಸುಗ್ಗಿಯಲ್ಲಿ ಅವನು ಬೇಡಿಕೊಂಡರೂ ಏನೂ ಸಿಕ್ಕುವದಿಲ್ಲ.
5ಮನುಷ್ಯನ ಹೃದಯದ ಆಲೋ ಚನೆಯು ಆಳವಾದ (ಬಾವಿಯ) ನೀರಿನಂತಿದೆ; ವಿವೇ ಕಿಯು ಅದನ್ನು ಸೇದುವನು.
6ಅನೇಕರಲ್ಲಿ ಪ್ರತಿಯೊ ಬ್ಬನು ತಮ್ಮ ಸ್ವಂತ ಸೌಜನ್ಯವನ್ನು ಸಾರುವನು; ನಂಬಿ ಗಸ್ತನಾದ ಮನುಷ್ಯನನ್ನು ಯಾರು ಕಂಡುಕೊಳ್ಳಬಲ್ಲರು?
7ನೀತಿವಂತನು ತನ್ನ ಯಥಾರ್ಥತೆಯಲ್ಲಿ ನಡೆಯುತ್ತಾನೆ; ಅವನು ಗತಿಸಿದ ಮೇಲೆ ಅವನ ಮಕ್ಕಳು ಆಶೀರ್ವದಿ ಸಲ್ಪಡುವರು.
8ನ್ಯಾಯತೀರ್ಪಿನ ಸಿಂಹಾಸನದ ಮೇಲೆ ಕೂತಿರುವ ಅರಸನು ತನ್ನ ಕಣ್ಣು ದೃಷ್ಟಿಯಿಂದ ಸಕಲ ಕೆಟ್ಟತನವನ್ನು ಚದರಿಸುವನು.
9ನನ್ನ ಹೃದಯವನ್ನು ಶುದ್ಧಿಮಾಡಿಕೊಂಡಿದ್ದೇನೆ, ನನ್ನ ಪಾಪದಿಂದ ನಾನು ಶುದ್ಧನು ಎಂದು ಯಾರು ಹೇಳಬಲ್ಲರು?
10ವಿಧ ವಿಧವಾದ ತೂಕಗಳೂ ತರತರವಾದ ಅಳತೆಗಳೂ ಇವೆರಡೂ ಸಮವಾಗಿಯೇ ಕರ್ತನಿಗೆ ಅಸಹ್ಯ.
11ತನ್ನ ಕೆಲಸವು ಶುದ್ಧವೋ ಇಲ್ಲವೆ ನ್ಯಾಯವೋ ಎಂಬದು ತನ್ನ ಕ್ರಿಯೆಗಳಿಂದಲೇ ಹುಡುಗನು ತೋರ್ಪಡಿಸಿ ಕೊಳ್ಳುತ್ತಾನೆ.
12ಕೇಳುವ ಕಿವಿ ನೋಡುವ ಕಣ್ಣು, ಇವೆರಡನ್ನು ಕರ್ತನು ಮಾಡಿದ್ದಾನೆ.
13ನೀನು ಬಡ ತನಕ್ಕೆ ಬಾರದಂತೆ ನಿದ್ರೆಯಲ್ಲಿ ಆಸಕ್ತಿಯುಳ್ಳವನಾಗಿರ ಬೇಡ; ನಿನ್ನ ಕಣ್ಣುಗಳನ್ನು ತೆರೆದರೆ ನೀನು ರೊಟ್ಟಿ ಯಿಂದ ತೃಪ್ತನಾಗುವಿ.
14ಇದು ನಿಷ್ಪ್ರಯೋಜಕವಾದದ್ದು, ಇದು ನಿಷ್ಪ್ರಯೋಜಕವಾದದ್ದು ಎಂದು ಕೊಳ್ಳು ವವನು ಹೇಳುತ್ತಾನೆ. ಅವನು ಹೋದ ಮೇಲೆ ಹೊಗ ಳುತ್ತಾನೆ.
15ಬಂಗಾರವೂ ಮಾಣಿಕ್ಯಗಳ ರಾಶಿಯೂ ಇವೆ. ತಿಳುವಳಿಕೆಯ ತುಟಿಗಳು ಅಮೂಲ್ಯವಾದ ರತ್ನ ವಾಗಿವೆ.
16ಪರರ ಹೊಣೆಯಾಗಿರುವ ಬಟ್ಟೆಯನ್ನು ತೆಗೆದುಕೋ; ಪರಸ್ತ್ರೀಗೋಸ್ಕರ ಅವನಿಂದ ಒತ್ತೆ ತೆಗೆ ದುಕೋ.
17ಮೋಸದಿಂದ ಸಿಕ್ಕಿದ ರೊಟ್ಟಿಯು ಮನು ಷ್ಯನಿಗೆ ರುಚಿ; ಆಮೇಲೆ ಅವನ ಬಾಯಿಯು ಮರಳಿ ನಿಂದ ತುಂಬುವದು.
18ಪ್ರತಿಯೊಂದು ಉದ್ದೇಶವು ಆಲೋಚನೆಯಿಂದ ಸಫಲವಾಗುವದು; ಹಿತವಾದ ಸಲಹೆಯಿಂದ ಯುದ್ಧಮಾಡು.
19ತಿರುಗುವ ಚಾಡಿ ಕೋರನು ಗುಟ್ಟುಗಳನ್ನು ರಟ್ಟುಮಾಡುತ್ತಾನೆ. ಆದ ಕಾರಣ ತನ್ನ ತುಟಿಗಳಿಂದ ಮುಖಸ್ತುತಿ ಮಾಡುವವನ ಗೊಡವೆಗೆ ಹೋಗಬೇಡ.
20ತನ್ನ ತಂದೆ ತಾಯಿಯನ್ನಾ ಗಲಿ ಶಪಿಸುವವನ ದೀಪವು ಮಂಕಾದ ಕತ್ತಲೆಯಲ್ಲಿ ಆರಿಹೋಗುವದು.
21ಮೊದಲು ಸ್ವಾಸ್ತ್ಯವನ್ನೂ ತ್ವರೆ ಯಾಗಿ ಹೊಂದಬಹುದು; ಅದರ ಕೊನೆಯು ಆಶೀ ರ್ವದಿಸಲ್ಪಡುವದಿಲ್ಲ.
22ನೀನು--ಕೇಡಿಗೆ ಮುಯ್ಯಿ ತೀರಿಸುವೆನು ಅನ್ನಬೇಡ; ಕರ್ತನನ್ನು ನಿರೀಕ್ಷಿಸು; ಆಗ ಆತನು ನಿನ್ನನ್ನು ರಕ್ಷಿಸುವನು.
23ವಿಧವಿಧವಾದ ತೂಕ ಗಳು ಕರ್ತನಿಗೆ ಅಸಹ್ಯವಾಗಿವೆ; ಮೋಸದ ತಕ್ಕಡಿಯು ಒಳ್ಳೇದಲ್ಲ.
24ಮನುಷ್ಯನ ನಡೆಗಳು ಕರ್ತನಿಂದಲೇ; ಹಾಗಾದರೆ ಒಬ್ಬ ಮನುಷ್ಯನು ತನ್ನ ಮಾರ್ಗವನ್ನು ಹೇಗೆ ತಿಳುಕೊಳ್ಳಬಲ್ಲನು?
25ಪರಿಶುದ್ಧವಾದದ್ದನ್ನು ನುಂಗಿದವನಾಗಿ ತರುವಾಯ ವಿಚಾರಿಸುವದಕ್ಕಾಗಿ ಆಣೆಯಿಟ್ಟು ಕೊಳ್ಳುವದು ಒಬ್ಬ ಮನುಷ್ಯನಿಗೆ ಉರ್ಲಾ ಗಿದೆ.
26ಜ್ಞಾನಿಯಾದ ಅರಸನು ದುಷ್ಟರನ್ನು ಚದರಿಸಿ ಅವರ ಮೇಲೆ ಚಕ್ರವನ್ನು ಎಳೆಯುತ್ತಾನೆ.
27ಮನುಷ್ಯನ ಆತ್ಮವು ಹೊಟ್ಟೆಯ ಒಳಭಾಗಗಳನ್ನು ಶೋಧಿಸುವಂಥ ಕರ್ತನ ದೀಪವಾಗಿವೆ.
28ಕರುಣೆಯೂ ಸತ್ಯವೂ ಅರಸನನ್ನು ಕಾಯುತ್ತದೆ; ಕರುಣೆಯಿಂದಲೇ ಅವನ ಸಿಂಹಾಸನವು ಸ್ಥಿರಗೊಳ್ಳುತ್ತದೆ.
29ಯೌವನಸ್ಥರ ಘನತೆಯು ಅವರ ಬಲವೇ; ಮುದುಕರ ಅಲಂಕಾರವು ನರೆತ ತಲೆಯೇ.ನೀಲಿಯಾದ ಗಾಯವು ದುಷ್ಟ ತ್ವವನ್ನು ತೊಳೆಯುತ್ತದೆ; ಹಾಗೆಯೇ ಏಟುಗಳು ಹೊಟ್ಟೆಯ ಒಳಭಾಗಗಳನ್ನು ಶುದ್ಧಮಾಡುತ್ತವೆ.
30ನೀಲಿಯಾದ ಗಾಯವು ದುಷ್ಟ ತ್ವವನ್ನು ತೊಳೆಯುತ್ತದೆ; ಹಾಗೆಯೇ ಏಟುಗಳು ಹೊಟ್ಟೆಯ ಒಳಭಾಗಗಳನ್ನು ಶುದ್ಧಮಾಡುತ್ತವೆ.
Bible Study with Steffi App
Download Free ↗
Memorize verses with spaced repetition. Free, no ads, 15+ languages.