Home Bibles ಸಾಮೇತಿಗಳು 20:7 · ಕನ್ನಡ ಬೈಬಲ್
ಸಾಮೇತಿಗಳು 20:7 · ಕನ್ನಡ ಬೈಬಲ್

ನೀತಿವಂತನು ತನ್ನ ಯಥಾರ್ಥತೆಯಲ್ಲಿ ನಡೆಯುತ್ತಾನೆ; ಅವನು ಗತಿಸಿದ ಮೇಲೆ ಅವನ ಮಕ್ಕಳು ಆಶೀರ್ವದಿ ಸಲ್ಪಡುವರು.

Cross references

ಆದಿಕಾಂಡ 17:7

ಇದಲ್ಲದೆ ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ದೇವರಾಗಿರುವದಕ್ಕೆ ನನಗೂ ನಿನಗೂ ನಿನ್ನ ತರುವಾಯ ಬರುವ ತಲ ತಲಾಂತರಗಳಲ್ಲಿ ನಿನ್ನ ಸಂತಾನಕ್ಕೂ ಮಧ್ಯದಲ್ಲಿ ನನ್ನ ಒಡಂಬಡಿಕೆಯನ್ನು ನಿತ್ಯವಾದ ಒಡಂಬಡಿಕೆಯಾಗಿ ಸ್ಥಾಪಿಸುತ್ತೇನೆ.

ಯೋಬ 1:1

ಊಚ್‌ ಎಂಬ ದೇಶದಲ್ಲಿ ಒಬ್ಬ ಮನುಷ್ಯನು ಇದ್ದನು. ಅವನ ಹೆಸರು ಯೋಬ. ಆ ಮನುಷ್ಯನು ಸಂಪೂರ್ಣನೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೇಡನ್ನು ಬಿಟ್ಟು ತೊಲ ಗುವವನೂ ಆಗಿದ್ದನು.

ಕೀರ್ತನೆಗಳು 15:2

ಯಥಾರ್ಥವಾಗಿ ನಡೆದು ನೀತಿಯನ್ನು ನಡಿಸಿ ತನ್ನ ಹೃದಯದಲ್ಲಿ ಸತ್ಯವನ್ನಾಡುವವನೇ.

ಕೀರ್ತನೆಗಳು 26:1

ಓ ಕರ್ತನೇ, ನನಗೆ ನ್ಯಾಯತೀರಿಸು; ಯಾಕಂದರೆ ನಾನು ನನ್ನ ಯಥಾರ್ಥತ್ವ ದಲ್ಲಿ ನಡೆದುಕೊಂಡಿದ್ದೇನೆ. ನಾನು ಕರ್ತನಲ್ಲಿ ಭರ ವಸವಿಟ್ಟಿದ್ದೇನೆ; ನಾನು ಕದಲುವದಿಲ್ಲ.

ಕೀರ್ತನೆಗಳು 26:11

ನಾನಾದರೋ ನನ್ನ ಯಥಾರ್ಥತ್ವದಲ್ಲಿ ನಡೆಯು ತ್ತೇನೆ: ನನ್ನನ್ನು ವಿಮೋಚಿಸು; ನನಗೆ ಕರುಣೆಯುಳ್ಳ ವನಾಗಿರು.ನನ್ನ ಪಾದವು ಸಮಸ್ಥಳದಲ್ಲಿ ನಿಲ್ಲುತ್ತದೆ; ಸಭೆಗಳಲ್ಲಿ ನಾನು ಕರ್ತನನ್ನು ಸ್ತುತಿಸುವೆನು.

ಕೀರ್ತನೆಗಳು 37:26

ಅವನು ಯಾವಾಗಲೂ ದಯಾಳುವಾಗಿ ಸಾಲ ಕೊಡುತ್ತಾನೆ; ಅವನ ಸಂತತಿಯು ಆಶೀರ್ವಾದ ಹೊಂದುವದು.

ಕೀರ್ತನೆಗಳು 112:2

ಅವನ ಸಂತತಿಯು ಭೂಮಿಯಲ್ಲಿ ಪರಾಕ್ರಮಶಾಲಿ ಯಾಗಿರುವದು. ಯಥಾರ್ಥರ ಸಂತತಿಯು ಆಶೀ ರ್ವಾದ ಹೊಂದುವದು.

ಸಾಮೇತಿಗಳು 13:22

ಒಳ್ಳೆಯವನು ಮೊಮ್ಮಕ್ಕಳಿಗೆ ಆಸ್ತಿಯನ್ನು ಬಿಡುವನು; ಪಾಪಿಯ ಸೊತ್ತು ನೀತಿ ವಂತರಿಗೆ ಇಡಲ್ಪಟ್ಟಿದೆ.

ಸಾಮೇತಿಗಳು 14:2

ತನ್ನ ಯಥಾರ್ಥತೆಯಲ್ಲಿ ನಡೆಯುವವನು ಕರ್ತನಿಗೆ ಭಯಪಡುತ್ತಾನೆ; ತನ್ನ ಮಾರ್ಗಗಳಲ್ಲಿ ವಕ್ರತೆಯುಳ್ಳವನು ಆತನನ್ನು ಅಸಡ್ಡೆಮಾಡುತ್ತಾನೆ.

ಸಾಮೇತಿಗಳು 14:26

ಕರ್ತನ ಭಯವೇ ಬಲವಾದ ಭರವಸವು; ಆತನ ಮಕ್ಕಳಿಗೆ ಆಶ್ರಯ ಸ್ಥಳವು ಇರುವದು.

ಸಾಮೇತಿಗಳು 19:1

ತನ್ನ ನಿರ್ದೋಷತ್ವದಲ್ಲಿ ನಡೆಯುವ ಬಡವನು ತನ್ನ ತುಟಿಗಳಲ್ಲಿ ವಕ್ರತೆಯುಳ್ಳ ಬುದ್ಧಿಹೀನನಿಗಿಂತಲೂ ಉತ್ತಮ.

ಯೆಶಾಯ 33:15

ನೀತಿಯಲ್ಲಿ ನಡೆದು ಯಥಾರ್ಥವಾಗಿ ನುಡಿದು ದೋಚಿಕೊಂಡ ಲಾಭ ಬೇಡವೆಂದು ಲಂಚ ಮುಟ್ಟದಂತೆ ಕೈ ಒದರಿ ರಕ್ತಕ್ಕೆ ಕಿವಿಗೊಡದೆ ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತ ಸ್ಥಳದಲ್ಲಿ ವಾಸಿಸುವನು.

ಲೂಕ 1:6

ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ ನ್ಯಾಯವಿಧಿಗಳನ್ನು ತಪ್ಪಿಲ್ಲದೆ ಕೈಕೊಂಡು ದೇವರ ಮುಂದೆ ನೀತಿವಂತರಾಗಿದ್ದರು.

ಅಪೋಸ್ತಲರ ಕೃತ್ಯಗಳು 2:39

ಯಾಕಂದರೆ ಆ ವಾಗ್ದಾನವು ನಿಮಗೂ ನಿಮ್ಮ ಮಕ್ಕಳಿಗೂ ದೂರವಾಗಿರುವವರೆಲ್ಲರಿಗೂ ಅಂತೂ ನಮ್ಮ ದೇವರಾದ ಕರ್ತನು ಕರೆಯುವವರೆಲ್ಲರಿಗೂ ಮಾಡಿಯದೆ ಎಂದು ಹೇಳಿದನು.

2 ಕೊರಿಂಥದವರಿಗೆ 1:12

ನಾವು ಮನುಷ್ಯಜ್ಞಾನದಿಂದಲ್ಲ, ಆದರೆ ಸರಳತೆಯಿಂದಲೂ ಭಕ್ತಿಯ ನಿಷ್ಕಪಟದಿಂದಲೂ ದೇವರ ಕೃಪೆಯಿಂದಲೂ ಲೋಕದಲ್ಲಿ ಮತ್ತು ಇನ್ನೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸಿನ ಸಾಕ್ಷಿಯೇ ನಮ ಗಿರುವ ಸಂತೋಷವಾಗಿದೆ.

ತೀತ 2:11

ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟು ಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು.

3 ಯೋಹಾನ 1:3

ಸಹೋದರರು ಬಂದಾಗ ನಿನ್ನಲ್ಲಿರುವ ಸತ್ಯವನ್ನು ಸಾಕ್ಷೀಕರಿಸಿದ್ದರಿಂದ ನಾನು ಬಹಳವಾಗಿ ಸಂತೋಷಪಟ್ಟೆನು.

Interlinear

Choose Theme