Home Bibles ಸಾಮೇತಿಗಳು 21:6 · ಕನ್ನಡ ಬೈಬಲ್
ಸಾಮೇತಿಗಳು 21:6 · ಕನ್ನಡ ಬೈಬಲ್

ಸುಳ್ಳಿನ ನಾಲಿಗೆಯಿಂದ ಸಂಪಾ ದಿಸುವ ಸಂಪತ್ತು ಮೃತ್ಯುವನ್ನು ಹುಡುಕುವವರಿಂದ ಬಡಿಯಲ್ಪಟ್ಟ ವ್ಯರ್ಥತ್ವವಾಗಿದೆ.

Cross references

ಸಾಮೇತಿಗಳು 8:36

ಆದರೆ ನನಗೆ ವಿರೋಧವಾಗಿ ಪಾಪಮಾಡುವವನು ತನ್ನ ಸ್ವಂತ ಪ್ರಾಣಕ್ಕೆ ಕೇಡುಮಾಡಿಕೊಳ್ಳುತ್ತಾನೆ. ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.

ಸಾಮೇತಿಗಳು 10:2

ಕೆಟ್ಟತನದ ಸಂಪತ್ತುಗಳು ಪ್ರಯೋಜನವಿಲ್ಲ; ನೀತಿಯು ಮರಣದಿಂದ ಬಿಡಿಸುತ್ತದೆ.

ಸಾಮೇತಿಗಳು 13:11

ವ್ಯರ್ಥತ್ವದಿಂದ ಹೊಂದಿದ ಐಶ್ವರ್ಯವು ಕಡಿಮೆ ಯಾಗುವದು; ಪ್ರಯಾಸದಿಂದ ಕೂಡಿಸುವವನು ವೃದ್ಧಿ ಗೊಳ್ಳುವನು.

ಸಾಮೇತಿಗಳು 20:14

ಇದು ನಿಷ್ಪ್ರಯೋಜಕವಾದದ್ದು, ಇದು ನಿಷ್ಪ್ರಯೋಜಕವಾದದ್ದು ಎಂದು ಕೊಳ್ಳು ವವನು ಹೇಳುತ್ತಾನೆ. ಅವನು ಹೋದ ಮೇಲೆ ಹೊಗ ಳುತ್ತಾನೆ.

ಸಾಮೇತಿಗಳು 20:21

ಮೊದಲು ಸ್ವಾಸ್ತ್ಯವನ್ನೂ ತ್ವರೆ ಯಾಗಿ ಹೊಂದಬಹುದು; ಅದರ ಕೊನೆಯು ಆಶೀ ರ್ವದಿಸಲ್ಪಡುವದಿಲ್ಲ.

ಸಾಮೇತಿಗಳು 22:8

ಕೆಟ್ಟತನವನ್ನು ಬಿತ್ತುವವನು ವ್ಯರ್ಥ ವನ್ನು ಕೊಯ್ಯುವನು; ಅವನ ಕೋಪದ ದಂಡವು ಬಿದ್ದುಹೋಗುವದು.

ಸಾಮೇತಿಗಳು 30:8

ವ್ಯರ್ಥತ್ವವನ್ನೂ ಸುಳ್ಳುಗಳನ್ನೂ ನನ್ನಿಂದ ದೂರವಾಗಿ ತೆಗೆದುಹಾಕು. ಬಡತನವಾಗಲಿ ಐಶ್ವರ್ಯವಾಗಲಿ ನನಗೆ ಕೊಡಬೇಡ; ನನಗೆ ತಕ್ಕಷ್ಟು ಆಹಾರವನ್ನು ಭೋಜನ ಮಾಡಿಸು;

ಯೆರೆಮಿಯ 17:11

ಹೀಗಿರುವದರಿಂದ ಈಗ ಯೆಹೂದದ ಮನುಷ್ಯ ರಿಗೂ ಯೆರೂಸಲೇಮಿನ ನಿವಾಸಿಗಳಿಗೂ ನೀನು ಹೇಳಬೇಕಾದದ್ದೇನಂದರೆ, ಕರ್ತನು ಹೀಗೆ ಹೇಳುತ್ತಾನೆ --ಇಗೋ, ನಾನು ನಿಮಗೆ ವಿರೋಧವಾಗಿ ಕೆಟ್ಟದ್ದನ್ನು ಕಲ್ಪಿಸುತ್ತಾ ಇದ್ದೇನೆ; ನಿಮಗೆ ವಿರೋಧವಾಗಿ ಉಪಾಯವನ್ನು ಆಲೋಚಿಸುತ್ತಾ ಇದ್ದೇನೆ; ನಿಮ್ಮ ನಿಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ಹಿಂತಿರುಗಿರಿ, ನಿಮ್ಮ ಮಾರ್ಗಗಳನ್ನೂ ಕ್ರಿಯೆಗಳನ್ನೂ ಒಳ್ಳೇದಾಗ ಮಾಡಿರಿ ಎಂಬದು.

ಯೆಹೆಜ್ಕೇಲ 18:31

ನೀವು ಮಾಡುವ ದುಷ್ಟತ್ವಗಳನ್ನೆಲ್ಲಾ ನಿಮ್ಮಿಂದ ಬಿಟ್ಟುಬಿಡಿರಿ; ಹೊಸ ಹೃದಯವನ್ನೂ ಹೊಸ ಆತ್ಮವನ್ನೂ ನೀವು ಪಡಕೊಳ್ಳಿರಿ; ಯಾಕಂದರೆ ಓ ಇಸ್ರಾಯೇಲಿನ ಮನೆತನದವರೇ, ನೀವು ಸಾಯುವದೇಕೆ?ಸಾಯುವವನ ಸಾವಿನಲ್ಲಿ ನನಗೆ ಸಂತೋಷವಿಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ; ಆದಕಾರಣ ತಿರುಗಿಕೊಂಡು ಬಾಳಿರಿ.

1 ತಿಮೋಥೆಯ 6:9

ಆದರೆ ಐಶ್ವರ್ಯವಂತರಾಗ ಬೇಕೆಂದು ಮನಸ್ಸು ಮಾಡುವವರು ಶೋಧನೆಯಲ್ಲಿಯೂ ಉರ್ಲಿನಲ್ಲಿಯೂ ಸಿಕ್ಕಿಕೊಂಡು ಅನೇಕ ಬುದ್ಧಿಹೀನತೆಯ ಮತ್ತು ಹಾನಿಕರವಾದ ದುರಾಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ನಾಶನಗಳಲ್ಲಿ ಮುಳುಗಿಸುತ್ತವೆ.

ತೀತ 1:11

ಅವರು ನೀಚಲಾಭವನ್ನು ಹೊಂದುವದಕ್ಕಾಗಿ ಮಾಡಬಾರದ ಉಪದೇಶವನ್ನು ಮಾಡಿ ಇಡೀ ಕುಟುಂಬಗಳನ್ನೇ ಹಾಳುಮಾಡುತ್ತಾರಾದದರಿಂದ ಅವರ ಬಾಯಿಗಳನ್ನು ಮುಚ್ಚಿಸತಕ್ಕದ್ದು.

2 ಪೇತ್ರ 2:3

ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತು ಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸ ಬೇಕೆಂದಿರುವರು. ಅಂಥವರಿಗೆ ಬಹಳ ಕಾಲದಿಂದಿದ್ದ ತೀರ್ಪು ತಡವಾಗುವದಿಲ್ಲ. ಅವರಿಗಾಗುವ ನಾಶನವು ತೂಕಡಿಸುವದಿಲ್ಲ.

Interlinear

Choose Theme