Home Bibles ಸಾಮೇತಿಗಳು 23:18 · ಕನ್ನಡ ಬೈಬಲ್
ಸಾಮೇತಿಗಳು 23:18 · ಕನ್ನಡ ಬೈಬಲ್

ಖಂಡಿತವಾಗಿಯೂ ಅಂತ್ಯವು ಬರು ತ್ತದೆ; ನಿನ್ನ ನಿರೀಕ್ಷೆಯು ನಿರರ್ಥಕವಾಗದು.

Cross references

ಕೀರ್ತನೆಗಳು 9:18

ಆತನು ಬಡವನನ್ನು ಸದಾಕಾಲಕ್ಕೆ ಮರೆಯುವದಿಲ್ಲ. ಬಡವರ ನಿರೀಕ್ಷೆ ಎಂದೆಂದಿಗೂ ನಾಶವಾಗುವದಿಲ್ಲ.

ಕೀರ್ತನೆಗಳು 37:37

ಸಂಪೂರ್ಣನನ್ನು ಗಮನಿಸು, ಯಥಾರ್ಥನನ್ನು ನೋಡು; ಆ ಮನುಷ್ಯನ ಅಂತ್ಯವು ಸಮಾಧಾನವಾಗಿದೆ.

ಸಾಮೇತಿಗಳು 24:14

ಹೀಗೆ ನಿನ್ನ ಪ್ರಾಣಕ್ಕೆ ಜ್ಞಾನದ ತಿಳುವಳಿಕೆಯು ಇರುವದು; ಅದು ಸಿಕ್ಕಿದಾಗ ಬಹುಮಾನವಿರುವದು; ನಿನ್ನ ನಿರೀಕ್ಷೆಯು ನಿರರ್ಥಕವಾಗುವದಿಲ್ಲ.

ಸಾಮೇತಿಗಳು 24:20

ಕೆಡುಕನಿಗೆ ಪ್ರತಿ ಫಲವು ಇರುವದಿಲ್ಲ; ದುಷ್ಟರ ದೀಪವು ಆರಿಹೋಗು ವದು.

ಯೆರೆಮಿಯ 29:11

ನಿನ್ನನ್ನು ರಕ್ಷಿಸುವದಕ್ಕೆ ನಾನು ನಿನ್ನ ಸಂಗಡ ಇದ್ದೇನೆಂದು ಕರ್ತನು ಅನ್ನುತ್ತಾನೆ; ನಿನ್ನನ್ನು ಎಲ್ಲಿ ಚದುರಿಸಿದೆನೋ ಆ ಎಲ್ಲಾ ಜನಾಂಗ ಗಳನ್ನು ನಾನು ನಿರ್ಮೂಲ ಮಾಡಿದಾಗ್ಯೂ ನಿನ್ನನ್ನು ನಿರ್ಮೂಲ ಮಾಡುವದಿಲ್ಲ; ಮಿತಿಯಲ್ಲಿ ನಿನ್ನನ್ನು ಶಿಕ್ಷಿಸುವೆನು. ಆದರೆ ನಾನು ಶಿಕ್ಷಿಸದೆ ಬಿಡುವದಿಲ್ಲ.

ಲೂಕ 16:25

ಆದರೆ ಅಬ್ರಹಾ ಮನು--ಮಗನೇ, ನೀನು ನಿನ್ನ ಜೀವಿತಕಾಲದಲ್ಲಿ ನಿನ್ನ ಒಳ್ಳೆಯವುಗಳನ್ನು ಹೊಂದಿದಿ; ಅದೇ ರೀತಿಯಲ್ಲಿ ಲಾಜರನು ಕೆಟ್ಟವುಗಳನ್ನು ಹೊಂದಿದ್ದನ್ನು ನೆನಪಿಗೆ ತಂದುಕೋ. ಆದರೆ ಈಗ ಅವನು ಆದರಣೆ ಹೊಂದುತ್ತಾ ಇದ್ದಾನೆ; ನೀನು ಯಾತನೆಪಡುತ್ತಾ ಇದ್ದೀ.

ರೋಮಾಪುರದವರಿಗೆ 6:21

ನೀವು ಆಗ ಮಾಡಿ ದವುಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯುಂಟಷ್ಟೆ; ಅವುಗಳ ಅಂತ್ಯವು ಮರಣವೇ.

ಫಿಲಿಪ್ಪಿಯವರಿಗೆ 1:20

ಹೇಗೆಂದರೆ, ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವದರಿಂದ ಬದುಕಿದರೂ ಸರಿಯೇ ಸತ್ತರೂ ಸರಿಯೇ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನಗೆ ಬಹಳ ಅಭಿಲಾಷೆಯೂ ನಿರೀಕ್ಷೆಯೂ ಉಂಟು.

ಹೆಬ್ರಿಯರಿಗೆ 10:35

ಆದದರಿಂದ ನಿಮ್ಮ ಭರವಸವನ್ನು ಬಿಟ್ಟುಬಿಡಬೇಡಿರಿ; ಅದಕ್ಕೆ ನಷ್ಟ ಪರಿಹಾರದ ದೊಡ್ಡ ಪ್ರತಿಫಲ ಉಂಟು.

Interlinear

Choose Theme