ನನಗೆ ಅವನು ಮಾಡಿದಂತೆ ನಾನೂ ಅವನಿಗೆ ಮಾಡುವೆನು; ಅವನು ಮಾಡಿದ್ದಕ್ಕೆ ಸರಿಯಾಗಿ ಮುಯ್ಯಿ ತೀರಿಸುವೆನು ಎಂದು ಹೇಳಬೇಡ.
Cross references
ಆಗ ಯೆಹೂದ ದಲ್ಲಿ ಮೂರು ಸಾವಿರ ಜನವು ಏಟಾಮ್ ಬಂಡೆಯ ಮೇಲಕ್ಕೆ ಹೋಗಿ ಸಂಸೋನನಿಗೆ--ಫಿಲಿಷ್ಟಿಯರು ನಮ್ಮನ್ನು ಆಳುತ್ತಾ ಇದ್ದಾರೆಂದು ನಿನಗೆ ಗೊತ್ತಿಲ್ಲವೋ? ನೀನು ನಮಗೆ ಹೀಗೆ ಯಾಕೆ ಮಾಡಿದಿ? ಅಂದರು.
ಅಬ್ಷಾಲೋಮನು ತನ್ನ ಸಹೋದರನಾದ ಅಮ್ನೋನನ ಸಂಗಡ ಒಳ್ಳೇದಾ ದರೂ ಕೆಟ್ಟದ್ದಾದರೂ ಮಾತನಾಡದೆ ಇದ್ದನು. ಅವನು ತನ್ನ ಸಹೋದರಿಯಾದ ತಾಮಾರಳನ್ನು ಬಲವಂತ ಮಾಡಿದ್ದರಿಂದ ಅಬ್ಷಾಲೋಮನು ಅವನನ್ನು ಹಗೆ ಮಾಡಿದನು.
ನೀನು--ಕೇಡಿಗೆ ಮುಯ್ಯಿ ತೀರಿಸುವೆನು ಅನ್ನಬೇಡ; ಕರ್ತನನ್ನು ನಿರೀಕ್ಷಿಸು; ಆಗ ಆತನು ನಿನ್ನನ್ನು ರಕ್ಷಿಸುವನು.
ನಿನ್ನ ಶತ್ರು ಹಸಿದಿದ್ದರೆ ತಿನ್ನುವ ದಕ್ಕೆ ಅವನಿಗೆ ರೊಟ್ಟಿ ಕೊಡು; ಅವನು ಬಾಯಾರಿದ್ದರೆ ಕುಡಿಯುವದಕ್ಕೆ ನೀರು ಕೊಡು.
ಆದರೆ ನಾನು ನಿಮಗೆ ಹೇಳುವದೇನಂದರೆ--ನೀವು ಕೆಟ್ಟದ್ದನ್ನು ಎದುರಿಸಬೇಡಿರಿ; ಯಾವನಾದರೂ ನಿನ್ನ ಬಲ ಗೆನ್ನೆಯ ಮೇಲೆ ಹೊಡೆದರೆ ಮತ್ತೊಂದನ್ನು ಸಹ ಅವನಿಗೆ ತಿರುಗಿಸು.
ಯಾರಿಗೂ ಕೆಟ್ಟದ್ದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿ ಯಾವದು ಗೌರವ ವಾದದ್ದೋ ಅದನ್ನೇ ಮಾಡುವವರಾಗಿರ್ರಿ.
ಯಾರೂ ಅಪಕಾರಕ್ಕೆ ಅಪಕಾರ ಮಾಡದಂತೆ ನೋಡಿ ಕೊಳ್ಳಿರಿ; ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಂಡಿರುವದಲ್ಲದೆ ಎಲ್ಲರಿಗೂ ಹಿತ ವನ್ನು ಮಾಡುವವರಾಗಿರ್ರಿ.