ಸಾಮೇತಿಗಳು 24:33 · ಕನ್ನಡ ಬೈಬಲ್
ಇನ್ನು ಸ್ವಲ್ಪ ನಿದ್ರೆ, ಇನ್ನು ಸ್ವಲ್ಪ ತೂಕಡಿಕೆ, ನಿದ್ರೆಗಾಗಿ ಇನ್ನು ಕೊಂಚ ಕೈ ಮುದುರಿ ಕೊಳ್ಳುವದು;ಹೀಗೆ ನಿನ್ನ ಬಡತನವು ಪ್ರಯಾಣಿಕನ ಹಾಗೆಯೂ ನಿನ್ನ ಕೊರತೆಯು ಆಯುಧದಾರ ನಂತೆಯೂ ಬರುವವು.
Cross references
ಸಾಮೇತಿಗಳು 6:4
ನಿನ್ನ ಕಣ್ಣುಗಳಿಗೆ ನಿದ್ರೆಯನ್ನೂ ರೆಪ್ಪೆಗಳಿಗೆ ತೂಕಡಿಕೆಯನ್ನೂ ಕೊಡಬೇಡ.
ಸಾಮೇತಿಗಳು 6:11
ಹೀಗೆ ದಾರಿದ್ರ್ಯವು ಪ್ರಯಾಣ ಮಾಡು ವವನ ಹಾಗೂ ನಿನ್ನ ಕೊರತೆಯು ಯುದ್ಧಸ್ಥರ ಹಾಗೂ ಬರುವದು.
ಸಾಮೇತಿಗಳು 18:9
ಸೋಮಾರಿಯು ತನ್ನ ಕೆಲಸ ದಲ್ಲಿ ಬಹಳವಾಗಿ ಹಾಳುಮಾಡುವವನಿಗೆ ಸಹೋದ ರನು ಆಗಿದ್ದಾನೆ.
ಸಾಮೇತಿಗಳು 26:14
ಬಾಗಲು ತಿರುಗುಣಿಗಳ ಮೇಲೆ ಹೇಗೆ ತಿರುಗುತ್ತದೋ ಹಾಗೆಯೇ ಸೋಮಾರಿಯು ತನ್ನ ಹಾಸಿಗೆಯ ಮೇಲೆ ತಿರುಗುತ್ತಾನೆ.
ರೋಮಾಪುರದವರಿಗೆ 13:11
ಈಗ ನಿದ್ರೆಯಿಂದ ಎಚ್ಚರವಾಗತಕ್ಕ ಕಾಲವೆಂದು ಅರಿತುಕೊಳ್ಳಿರಿ; ನಾವು ಮೊದಲು ನಂಬಿದ ಕಾಲದಲ್ಲಿ ಇದ್ದದ್ದಕ್ಕಿಂತ ಈಗ ನಮ್ಮ ರಕ್ಷಣೆಯು ಹತ್ತಿರವಾಯಿತು.
ಎಫೆಸದವರಿಗೆ 5:14
ಆದದರಿಂದ-- ನಿದ್ರೆ ಮಾಡುವವನೇ, ಎಚ್ಚರವಾಗು, ಸತ್ತವರಿಂದ ಎದ್ದೇಳು; ಕ್ರಿಸ್ತನು ನಿನಗೆ ಪ್ರಕಾಶಕೊಡುವನು ಎಂದು ಆತನು ಹೇಳುತ್ತಾನೆ.
1 ತೆಸಲೋನಿಕದವರಿಗೆ 5:6
ಆದಕಾರಣ ನಾವು ಇತರರಂತೆ ನಿದ್ರೆಮಾಡದೆ ಎಚ್ಚರವಾಗಿರೋಣ, ಸ್ವಸ್ಥಚಿತ್ತರಾಗಿ ರೋಣ.