Home Bibles ಸಾಮೇತಿಗಳು 24:8 · ಕನ್ನಡ ಬೈಬಲ್
ಸಾಮೇತಿಗಳು 24:8 · ಕನ್ನಡ ಬೈಬಲ್

ಕೇಡನ್ನು ಕಲ್ಪಿಸುವವನು ಕುಚೋದ್ಯಗಾರ ನೆಂದು ಕರೆಯಲ್ಪಡುವನು.

Cross references

1 ಅರಸುಗಳು 2:44

ಇದಲ್ಲದೆ ಅರಸನು ಶಿಮ್ಮಿಗೆ--ನೀನು ನನ್ನ ತಂದೆಯಾದ ದಾವೀ ದನಿಗೆ ಮಾಡಿದ ಕೆಟ್ಟತನವನ್ನೆಲ್ಲಾ ನಿನ್ನ ಹೃದಯಕ್ಕೆ ತಿಳಿದದೆ. ಕರ್ತನು ನಿನ್ನ ಕೆಟ್ಟತನವನ್ನು ನಿನ್ನ ತಲೆಯ ಮೇಲೆ ಬರಮಾಡುವನು.

ಕೀರ್ತನೆಗಳು 21:11

ಅವರು ನಿನಗೆ ವಿರೋಧವಾಗಿ ಕೇಡನ್ನು ಯತ್ನಿಸಿದರು; ಪೂರೈಸಲಾ ರದ ಯುಕ್ತಿಯನ್ನು ಕಲ್ಪಿಸಿದರು.

ಸಾಮೇತಿಗಳು 6:14

ಅವನ ಹೃದಯದಲ್ಲಿ ಮೂರ್ಖ ತನವಿದೆ. ಯಾವಾಗಲೂ ಅವನು ಕೇಡನ್ನು ಕಲ್ಪಿಸು ತ್ತಾನೆ. ಅವನು ವೈಷಮ್ಯವನ್ನು ಬಿತ್ತುತ್ತಾನೆ.

ಸಾಮೇತಿಗಳು 6:18

ದುಷ್ಟ ಭಾವನೆಗಳನ್ನು ಕಲ್ಪಿಸುವ ಹೃದಯ, ಕೇಡಿಗೆ ಓಡಾಡುವದರಲ್ಲಿ ತ್ವರೆಪಡುವ ಕಾಲುಗಳು,

ಸಾಮೇತಿಗಳು 14:22

ಕೆಟ್ಟದ್ದನ್ನು ಕಲ್ಪಿಸುವವರು ತಪ್ಪು ಮಾಡುತ್ತಾರಲ್ಲವೇ? ಒಳ್ಳೆಯದನ್ನು ಕಲ್ಪಿಸುವವರಿಗೆ ಕರುಣೆಯೂ ಸತ್ಯವೂ ಇರುವವು.

ಸಾಮೇತಿಗಳು 24:2

ಅವರ ಹೃದಯವು ನಾಶನವನ್ನು ಅಭ್ಯಾಸಿಸುತ್ತದೆ; ಅವರ ತುಟಿಗಳು ಹಾನಿ ಯನ್ನು ಪ್ರಸ್ತಾಪಿಸುತ್ತವೆ.

ಸಾಮೇತಿಗಳು 24:9

ಬುದ್ಧಿಹೀನನ ಆಲೋ ಚನೆಯು ಪಾಪ; ಪರಿಹಾಸ್ಯಗಾರನು ಮನುಷ್ಯರಿಗೆ ಅಸಹ್ಯ.

ಯೆಶಾಯ 10:7

ಅದರ ಅಭಿಪ್ರಾಯವೋ ಹಾಗಲ್ಲ; ಇಲ್ಲವೇ ಅದರ ಹೃದಯವು ಈ ಪ್ರಕಾರ ಆಲೋಚಿಸುವದಿಲ್ಲ; ಜನಾಂಗಗಳನ್ನು ಕಡಿದು ಬಿಡುವದು ಕೊಂಚವಾಗಿ ಅಲ್ಲ. ಆದರೆ ನಾಶಮಾಡುವದು ಅವನ ಹೃದಯದಲ್ಲಿ ಇದೆ.

ಯೆಶಾಯ 32:7

ಜಿಪುಣನ ಆಯುಧಗಳು ಕೆಟ್ಟವುಗಳೇ, ದರಿದ್ರನು ನ್ಯಾಯವಾದದ್ದನ್ನು ಮಾತನಾಡಿದರೂ ಅವನು ಬಡವ ರನ್ನು ಸುಳ್ಳು ಮಾತುಗಳಿಂದ ಕೆಡಿಸುವದಕ್ಕೆ ಕುಯುಕ್ತಿ (ದೋಷ)ಗಳನ್ನು ಕಲ್ಪಿಸುವನು.

ಯೆಹೆಜ್ಕೇಲ 38:10

ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇದೂ ಸಹ ಆಗುವದು, ಅದೇ ಸಮಯದಲ್ಲಿ ನಿನ್ನ ಮನಸ್ಸಿಗೆ ಕೆಲವು ಸಂಗತಿಗಳು ಬರುವವು ನೀನು ಒಂದು ಕೆಟ್ಟಯೋಚನೆಯನ್ನು ಯೋಚಿಸುವಿ,

ನಹೂಮ 1:11

ಕರ್ತನಿಗೆ ವಿರೋಧವಾಗಿ ದುರಾ ಲೋಚನೆ ಮಾಡಿ ಕೇಡನ್ನು ಯೋಚಿಸುವವನು ನಿನ್ನೊಳ ಗಿಂದ ಹೊರಟಿದ್ದಾನೆ.

ರೋಮಾಪುರದವರಿಗೆ 1:30

ಚಾಡಿಹೇಳುವವರೂ ದೇವರನ್ನು ಹಗೆ ಮಾಡುವವರೂ ಧಿಕ್ಕರಿಸುವವರೂ ಅಹಂಕಾರಿಗಳೂ ಉಬ್ಬಿಕೊಳ್ಳುವವರೂ ಕೆಟ್ಟವುಗಳನ್ನು ಕಲ್ಪಿಸುವವರೂ ತಂದೆತಾಯಿಗಳಿಗೆ ಅವಿಧೇಯರೂ

Interlinear

Choose Theme