Home Bibles ಸಾಮೇತಿಗಳು 26:2 · ಕನ್ನಡ ಬೈಬಲ್
ಸಾಮೇತಿಗಳು 26:2 · ಕನ್ನಡ ಬೈಬಲ್

ಅಲೆದಾಡುವ ಪಕ್ಷಿಯಂತೆಯೂ ಹಾರಾ ಡುವ ಬಾನಕ್ಕಿಯಂತೆಯೂ ಕಾರಣವಿಲ್ಲದ ನಾಶವು ಬರುವದಿಲ್ಲ.

Cross references

ಅಂಕೆಗಳ ಪುಸ್ತಕ 23:8

ದೇವರು ಶಪಿಸದವನನ್ನು ನಾನು ಹೇಗೆ ಶಪಿಸಲಿ? ಕರ್ತನು ಎದುರಿಸದವನನ್ನು ನಾನು ಹೇಗೆ ಎದುರಿ ಸಲಿ?

ದ್ವಿತೀಯೋಪದೇಶಕಾಂಡ 23:4

ನೀವು ಐಗುಪ್ತವನ್ನು ಬಿಟ್ಟು ಬರುವಾಗ ಅವರು ನಿಮಗೆ ರೊಟ್ಟಿಯನ್ನೂ ನೀರನ್ನೂ ಕೊಡುವದಕ್ಕೆ ಎದು ರಾಗಿ ಬರಲಿಲ್ಲ; ನಿಮ್ಮನ್ನು ಶಪಿಸುವದಕ್ಕೆ ಮೆಸೊಪೊ ತಾಮ್ಯದಲ್ಲಿರುವ ಪೆತೋರಿನಿಂದ ಬೆಯೋರನ ಮಗ ನಾದ ಬಿಳಾಮನನ್ನು ಕೂಲಿ ಕೊಟ್ಟು ನಿಮಗೆ ವಿರೋಧ ವಾಗಿ ತರಿಸಿದರು.

1 ಸಮುವೇಲ 14:28

ಆಗ ಜನರಲ್ಲಿ ಒಬ್ಬನು ಅವನಿಗೆ--ಈ ಹೊತ್ತು ಆಹಾರ ತಿನ್ನುವವನು ಶಪಿಸಲ್ಪಡಲಿ ಎಂದು ನಿನ್ನ ತಂದೆಯು ಜನರಿಗೆ ಕಟ್ಟುನಿಟ್ಟಾಗಿ ಆಣೆ ಇಟ್ಟಿದ್ದಾನೆ. ಅದಕ್ಕೋಸ್ಕರ ಜನರು ದಣಿದು ಹೋಗಿದ್ದಾರೆ ಅಂದನು.

1 ಸಮುವೇಲ 17:43

ನೀನು ಕೋಲು ಹಿಡುಕೊಂಡು ನನ್ನ ಬಳಿಗೆ ಬರುವ ಹಾಗೆ ನಾನು ನಾಯಿಯೋ ಎಂದು ಹೇಳಿ ಆ ಫಿಲಿಷ್ಟಿಯನು ತನ್ನ ದೇವರುಗಳಿಂದ ದಾವೀದನನ್ನು ಶಪಿಸಿದನು.

2 ಸಮುವೇಲ 16:8

ಕರ್ತನು ಸೌಲನ ಮನೆಯವರ ರಕ್ತವನ್ನು ಸೌಲನಿಗೆ ಪ್ರತಿಯಾಗಿ ಅರಸನಾದ ನಿನ್ನ ಮೇಲೆ ತಿರಿಗಿ ಬರಮಾಡಿ ರಾಜ್ಯವನ್ನು ನಿನ್ನ ಮಗನಾದ ಅಬ್ಷಾಲೋಮನ ಕೈಯಲ್ಲಿ ಒಪ್ಪಿಸಿಕೊಟ್ಟನು; ನೀನು ರಕ್ತದ ಮನುಷ್ಯನಾದದರಿಂದ ಇಗೋ, ನಿನ್ನ ಕೇಡಿನಲ್ಲಿ ಸಿಕ್ಕಿಕೊಂಡಿ ಅಂದನು.

2 ಸಮುವೇಲ 16:12

ಒಂದು ವೇಳೆ ಕರ್ತನು ನನ್ನ ಶ್ರಮೆಯನ್ನು ನೋಡಿ ಈ ದಿನ ದಲ್ಲಿ ಅವನು ಮಾಡಿದ ದೂಷಣೆಗೆ ಪ್ರತಿಯಾಗಿ ನನಗೆ ಒಳ್ಳೆಯದನ್ನು ಮಾಡಬಹುದು ಅಂದನು.

ನೆಹೆಮ್ಯ 13:2

ಯಾಕಂದರೆ ಅವರು ರೊಟ್ಟಿಯನ್ನೂ ನೀರನ್ನೂ ತಂದು ಇಸ್ರಾಯೇಲ್‌ ಮಕ್ಕಳನ್ನು ಎದುರುಗೊಳ್ಳದೆ ಅವರನ್ನು ಶಪಿಸಿ ಅವರಿಗೆ ವಿರೋಧವಾಗಿ ಬಿಳಾಮ ನನ್ನು ಕೂಲಿಗೆ ಕರಕೊಂಡರು. ಆದರೆ ನಮ್ಮ ದೇವರು ಆ ಶಾಪವನ್ನು ಆಶೀರ್ವಾದವಾಗಿ ಮಾಡಿದನು ಅಂದನು.

ಕೀರ್ತನೆಗಳು 109:28

ಅವರು ಶಪಿಸಲಿ; ಆದರೆ ನೀನು ಆಶೀರ್ವದಿಸು; ಅವರು ಎದ್ದು ನಾಚಿಕೆಪಡಲಿ; ಆದರೆ ನಿನ್ನ ಸೇವಕನು ಸಂತೋ ಷಿಸಲಿ.

ಸಾಮೇತಿಗಳು 27:8

ತನ್ನ ಸ್ಥಳವನ್ನು ಬಿಟ್ಟು ಅಲೆಯುವ ಮನುಷ್ಯನು ತನ್ನ ಗೂಡನ್ನು ಬಿಟ್ಟು ಅಲೆಯುವ ಪಕ್ಷಿ ಯಂತೆ ಇದ್ದಾನೆ.

Interlinear

Choose Theme