Home Bibles ಸಾಮೇತಿಗಳು 26:21 · ಕನ್ನಡ ಬೈಬಲ್
ಸಾಮೇತಿಗಳು 26:21 · ಕನ್ನಡ ಬೈಬಲ್

ಕೆಂಡಗಳಿಗೆ ಇದ್ದಲು, ಬೆಂಕಿಗೆ ಕಟ್ಟಿಗೆ; ಹಾಗೆಯೇ ಜಗಳವನ್ನು ಕೆರಳಿಸುವಂತೆ ಕಲಹಮಾಡುವವನು ಇರುವನು.

Cross references

2 ಸಮುವೇಲ 20:1

ಬೆನ್ಯಾವಿಾನನ ಕುಲದವನಾದ ಬಿಕ್ರೀಯಮಗನಾಗಿರುವ ಶೆಬನೆಂಬ ಹೆಸರುಳ್ಳ ಬೆಲಿಯಾಳನವನಾದ ಒಬ್ಬನು ಅಲ್ಲಿದ್ದನು. ಅವನು ತುತೂರಿಯನ್ನು ಊದಿ--ನಮಗೆ ದಾವೀದನಲ್ಲಿ ಪಾಲಿಲ್ಲ; ಇಷಯನ ಮಗನಲ್ಲಿ ನಮಗೆ ಬಾಧ್ಯತೆಯೂ ಇಲ್ಲ. ಓ ಇಸ್ರಾಯೇಲ್ಯರೇ, ನಿಮ್ಮ ನಿಮ್ಮ ಗುಡಾರಗಳಿಗೆ ಹೋಗಿರಿ ಅಂದನು.

1 ಅರಸುಗಳು 12:2

(ಅರಸನಾದ ಸೊಲೊಮೋನನ ಸಮ್ಮುಖ ದಿಂದ ಓಡಿಹೋಗಿ ಐಗುಪ್ತದಲ್ಲಿ ವಾಸವಾಗಿದ್ದು) ಇನ್ನೂ ಐಗುಪ್ತದಲ್ಲಿದ್ದ ನೆಬಾಟನ ಮಗನಾದ ಯಾರೊಬ್ಬಾಮನು ಇದನ್ನು ಕೇಳಿದಾಗ ಅವರು ಅವ ನನ್ನು ಕರೇಕಳುಹಿಸಿದರು.

1 ಅರಸುಗಳು 12:20

ಯಾರೊಬ್ಬಾಮನು ತಿರುಗಿ ಬಂದಿದ್ದಾನೆಂದು ಕೇಳಿದಾಗ ಇಸ್ರಾಯೇಲ್ಯ ರೆಲ್ಲರು ಸಭೆಗೆ ಅವನನ್ನು ಕರೇಕಳುಹಿಸಿ ಸಮಸ್ತ ಇಸ್ರಾ ಯೇಲಿನ ಮೇಲೆ ಅವನನ್ನು ಅರಸನನ್ನಾಗಿ ಮಾಡಿದರು. ಯೆಹೂದನ ಗೋತ್ರ ಹೊರತಾಗಿ ದಾವೀದನ ಮನೆ ಯನ್ನು ಹಿಂಬಾಲಿಸುವವರು ಯಾರೂ ಇರಲಿಲ್ಲ.

ಕೀರ್ತನೆಗಳು 120:4

ಪರಾ ಕ್ರಮಶಾಲಿಯ ಹದವಾದ ಬಾಣಗಳು ಮತ್ತು ಜಾಲಿ ಮರದ ಕೆಂಡಗಳು ನಿನಗೆ ಕೊಡಲ್ಪಡಲಿ.

ಸಾಮೇತಿಗಳು 10:12

ದ್ವೇಷವು ಜಗಳಗಳನ್ನು ಎಬ್ಬಿಸುತ್ತದೆ; ಪ್ರೀತಿಯು ಎಲ್ಲಾ ಪಾಪಗಳನ್ನು ಮುಚ್ಚು ತ್ತದೆ.

ಸಾಮೇತಿಗಳು 15:18

ಕೋಪಿಷ್ಠನು ವಿವಾದವನ್ನು ಎಬ್ಬಿಸುವನು; ದೀರ್ಘ ಶಾಂತನು ವಿವಾದವನ್ನು ಶಮನಪಡಿಸುತ್ತಾನೆ.

ಸಾಮೇತಿಗಳು 29:22

ಕೋಪಿಷ್ಠನು ಜಗಳ ವನ್ನೆಬ್ಬಿಸುತ್ತಾನೆ; ರೋಷಗೊಂಡವನು ದೋಷದಲ್ಲಿ ತುಂಬಿರುತ್ತಾನೆ.

ಸಾಮೇತಿಗಳು 30:33

ಹಾಲು ಕರೆಯುವದರಿಂದ ನಿಜವಾಗಿಯೂ ಬೆಣ್ಣೆ ಬರುತ್ತದೆ; ಮೂಗು ಹಿಂಡುವದರಿಂದ ರಕ್ತ ಬರುತ್ತದೆ; ಹಾಗೆಯೇ ಕೋಪವನ್ನೆಬ್ಬಿಸುವದರಿಂದ ಜಗಳ ಬರುತ್ತದೆ.

Interlinear

Choose Theme