ಗುಂಡಿ ಯನ್ನು ತೋಡುವವನು ತಾನೇ ಅದರಲ್ಲಿ ಬೀಳುತ್ತಾನೆ; ಕಲ್ಲು ಹೊರಳಿಸುವವನ ಮೇಲೆಯೇ ಅದು ತಿರಿಗಿ ಹೊರಳುವದು.ಸುಳ್ಳು ನಾಲಿಗೆಯಿಂದ ಬಾಧಿಸಲ್ಪ ಟ್ಟವರನ್ನೇ ಅದು ಹಗೆಮಾಡುವದು; ಮುಖಸ್ತುತಿ ಮಾಡುವ ಬಾಯಿಯು ನಾಶನವನ್ನುಂಟುಮಾಡುತ್ತದೆ.
Cross references
ಅವರು ಮೊರ್ದೆಕೈ ಗೋಸ್ಕರ ಹಾಮಾನನು ಸಿದ್ಧ ಮಾಡಿಸಿದ್ದ ಗಲ್ಲಿನ ಮರದಲ್ಲಿ ಅವನನ್ನು ಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.
ಎಸ್ತೇರಳು ಅರಸನ ಮುಂದೆ ಬಂದಾಗ ಹಾಮಾನನು ಯೆಹೂದ್ಯರಿಗೆ ವಿರೋಧವಾಗಿ ಯೋಚಿಸಿದ ದುರಾಲೋಚನೆಯು ಅವನ ತಲೆಯ ಮೇಲೆ ಬರುವ ಹಾಗೆಯೂ ಅವನೂ ಅವನ ಮಕ್ಕಳೂ ಗಲ್ಲಿಗೆ ಹಾಕಲ್ಪಡುವ ಹಾಗೆಯೂ ಅರಸನು ಪತ್ರ ಗಳಿಂದ ಆಜ್ಞಾಪಿಸಿದನು;
ಅವನು ಕುಣಿಯನ್ನು ಅಗೆದಿದ್ದಾನೆ. ಆದರೆ ತಾನು ಅಗೆದ ಕುಣಿಯೊಳಗೆ ತಾನೇ ಬಿದ್ದಿದ್ದಾನೆ.
ಅವನ ಕೇಡು ಅವನ ಸ್ವಂತ ತಲೆಯ ಮೇಲೆ ತಿರುಗುವದು; ಅವನ ನೆತ್ತಿಯ ಮೇಲೆ ಅವನ ಬಲಾತ್ಕಾರವು ಇಳಿಯುವದು;ಕರ್ತನನ್ನು ಆತನ ನೀತಿಯ ಪ್ರಕಾರ ನಾನು ಕೊಂಡಾಡುವೆನು; ಮಹೋನ್ನತನಾದ ಕರ್ತನ ನಾಮ ವನ್ನು ಕೀರ್ತಿಸುವೆನು.
ಜನಾಂಗಗಳು ತಾವು ಅಗೆದ ಕುಣಿಯಲ್ಲಿ ತಾವೇ ಬಿದ್ದಿದ್ದಾರೆ; ಅವರು ಅಡಗಿಸಿಟ್ಟ ಬಲೆಯಲ್ಲಿ ಅವರ ಕಾಲು ಸಿಕ್ಕಿಕೊಂಡಿತು.
ದುಷ್ಟರು ಗರ್ವ ದಿಂದ ದೀನನನ್ನು ಹಿಂಸಿಸುತ್ತಾರೆ; ಅವರು ಕಲ್ಪಿಸಿದ ಯುಕ್ತಿಗಳಲ್ಲಿ ತಾವೇ ಹಿಡಿಯಲ್ಪಡಲಿ.
ಅವರು ನನ್ನ ಹೆಜ್ಜೆಗಳಿಗೆ ಬಲೆಯೊಡ್ಡಿದ್ದಾರೆ. ನನ್ನ ಪ್ರಾಣವು ಕುಗ್ಗಿಹೋಗಿದೆ; ನನ್ನ ಮುಂದೆ ಕುಣಿಯನ್ನು ಅಗೆದು ಅದರ ನಡುವೆ ತಾವೇ ಬಿದ್ದಿದ್ದಾರೆ. ಸೆಲಾ.
ದುಷ್ಟ ನನ್ನು ಅವನ ಸ್ವಂತ ಅಕ್ರಮಗಳೇ ಹಿಡಿಯುವವು; ತನ್ನ ಪಾಪಗಳ ಪಾಶಗಳಿಂದಲೇ ಅವನು ಬಂಧಿಸಲ್ಪಡು ವನು.ಶಿಕ್ಷಣವಿಲ್ಲದೆ ಅವನು ಸಾಯುವನು; ತನ್ನ ಮೂಢತ್ವದ ದೊಡ್ಡಸ್ತಿಕೆಯಲ್ಲಿ ತಪ್ಪಿಹೋಗುವನು.
ದುರ್ಮಾರ್ಗದಲ್ಲಿ ನೀತಿವಂತರನ್ನು ದಾರಿತಪ್ಪಿಸು ವವನು ತಾನೇ ತನ್ನ ಸ್ವಂತ ಕುಣಿಯೊಳಕ್ಕೆ ಬೀಳುವನು; ಯಥಾರ್ಥವಂತರಿಗಾದರೋ ಒಳ್ಳೆಯವುಗಳು ಸೊತ್ತಾ ಗುವವು.
ಯಾವನು ಕುಣಿಯನ್ನು ಅಗೆಯುವನೋ ಅದರಲ್ಲೇ ಅವನು ಬೀಳುವನು; ಯಾವನು ಬೇಲಿಯನ್ನು ಮುರಿ ಯುವನೋ ಅವನನ್ನು ಹಾವು ಕಚ್ಚುವದು.
ಯೆರೂಸಲೇಮು ಹಾಳಾಗಿದೆ, ಯೆಹೂ ದವು ಬಿದ್ದುಹೋಗಿದೆ, ಆದದರಿಂದ ಅವರ ನಡೆನುಡಿ ಗಳು ಕರ್ತನಿಗೆ ವಿರುದ್ಧವಾಗಿ ಆತನ ಪ್ರಭಾವದ ದೃಷ್ಟಿ ಯನ್ನು ಕೆರಳಿಸುತ್ತವಲ್ಲವೇ.
ಕೆಡುಕರಿಗೆ ಅಯ್ಯೋ! ಅವರಿಗೆ ಕೇಡೇ ಇರಲಿ; ಅವನ ಕೈಗಳ ಪ್ರತಿಫಲವು ಅವನಿಗೆ ಕೊಡಲ್ಪಡುವದು.