Home Bibles ಸಾಮೇತಿಗಳು 27:6 · ಕನ್ನಡ ಬೈಬಲ್
ಸಾಮೇತಿಗಳು 27:6 · ಕನ್ನಡ ಬೈಬಲ್

ಸ್ನೇಹಿತನು ಮಾಡುವ ಗಾಯಗಳು ನಂಬಿಕೆಯುಳ್ಳವುಗಳಾಗಿವೆ; ಶತ್ರುವಿನ ಮುದ್ದುಗಳು ಮೋಸಕರವಾಗಿವೆ.

Cross references

2 ಸಮುವೇಲ 12:7

ಆಗ ನಾತಾನನು ದಾವೀದನಿಗೆ--ನೀನೇ ಆ ಮನು ಷ್ಯನು. ಇಸ್ರಾಯೇಲಿನ ದೇವರಾದ ಕರ್ತನು--ನಾನು ನಿನ್ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿ ಅಭಿಷೇಕ ಮಾಡಿ ನಿನ್ನನ್ನು ಸೌಲನ ಕೈಗೆ ತಪ್ಪಿಸಿಬಿಟ್ಟು

2 ಸಮುವೇಲ 20:9

ಆಗ ಯೋವಾಬನು ಅಮಾಸನಿಗೆ--ನನ್ನ ಸಹೋದರನೇ, ಕ್ಷೇಮವೋ ಅಂದನು. ಯೋವಾಬನು ಮುದ್ದಿಡುವುದಕ್ಕೋಸ್ಕರ ತನ್ನ ಬಲಗೈಯಿಂದ ಅವನ ಗಡ್ಡವನ್ನು ಹಿಡಿದನು. ಆದರೆ ಅಮಾಸನು ಯೋವಾಬನ ಕೈಯಲ್ಲಿದ್ದ ಕತ್ತಿ ಯನ್ನು ಗಮನಿಸದಿದ್ದಾಗ ಯೋವಾಬನು ಅವನನ್ನು ಕರುಳುಗಳು ಹೊರಬರುವ ಹಾಗೆ ಅವನ ಪಕ್ಕೆಯ ಐದನೇ ಎಲುಬಿನಲ್ಲಿ ತಿವಿದನು.

ಯೋಬ 5:17

ಇಗೋ, ದೇವರು ಗದರಿಸುವ ಮನುಷ್ಯನು ಭಾಗ್ಯ ವಂತನು; ಸರ್ವಶಕ್ತನ ಶಿಕ್ಷೆಯನ್ನು ಅಲಕ್ಷ್ಯಮಾಡ ಬೇಡ.

ಕೀರ್ತನೆಗಳು 141:5

ನೀತಿವಂತನು ನನ್ನನ್ನು ಹೊಡೆಯಲಿ; ಅದು ಕರುಣೆಯೇ; ಅವನು ನನ್ನನ್ನು ಗದರಿಸಲಿ; ಅದು ನನ್ನ ತಲೆಗೆ ಶ್ರೇಷ್ಠ ಎಣ್ಣೆಯೇ. ಅದನ್ನು ನನ್ನ ತಲೆ ಬೇಡವೆನ್ನದಿರಲಿ; ಆದರೆ ಇನ್ನೂ ಅವರ ಕೇಡುಗಳಲ್ಲಿ ನನ್ನ ಪ್ರಾರ್ಥನೆ ಇರುವದು.

ಸಾಮೇತಿಗಳು 10:18

ಸುಳ್ಳಾಡುವ ತುಟಿಗಳಿಂದ ಹಗೆಯನ್ನಿಟ್ಟುಕೊಂಡ ವನೂ ಚಾಡಿಹೇಳುವವನೂ ಮೂರ್ಖನು.

ಸಾಮೇತಿಗಳು 26:23

ಉರಿಯುವ ತುಟಿ ಗಳೂ ಕೆಟ್ಟಹೃದಯವೂ ಬೆಳ್ಳಿಯ ಕಿಟ್ಟದಿಂದ ಮುಚ್ಚ ಲ್ಪಟ್ಟ ಬೋಕಿಯಂತೆ ಇದೆ.

ಮತ್ತಾಯ 26:48

ಆತನನ್ನು ಹಿಡು ಕೊಡುವದಕ್ಕಿದ್ದವನು ಅವರಿಗೆ--ನಾನು ಯಾವಾತನಿಗೆ ಮುದ್ದಿಡುತ್ತೇನೋ ಅವನೇ ಆತನು. ಆತನನ್ನು ಗಟ್ಟಿ ಯಾಗಿ ಹಿಡಿಯಿರಿ ಎಂದು ಗುರುತನ್ನು ಹೇಳಿದ್ದನು.

ಹೆಬ್ರಿಯರಿಗೆ 12:10

ಅವರು ನಿಜವಾಗಿಯೂ ಕೆಲವು ದಿವಸಗಳ ಪ್ರಯೋ ಜನವನ್ನು ಲಕ್ಷ್ಯಕ್ಕೆ ತೆಗೆದುಕೊಂಡು ತಮ್ಮ ಮನಸ್ಸಿಗೆ ತೋರಿದಂತೆ ನಮ್ಮನ್ನು ಶಿಕ್ಷಿಸಿದರು; ಆತನಾದರೋ ನಾವು ತನ್ನ ಪರಿಶುದ್ಧತೆಯಲ್ಲಿ ಪಾಲುಗಾರರಾಗ ಬೇಕೆಂದು ನಮ್ಮ ಪ್ರಯೋಜನಕ್ಕಾಗಿಯೇ ಶಿಕ್ಷಿಸುತ್ತಾನೆ.

ಪ್ರಕಟನೆ 3:19

ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ; ಆದದರಿಂದ ನೀನು ಆಸಕ್ತನಾಗಿರು; ಮಾನಸಾಂತರಪಡು.

Interlinear

Choose Theme