ತನ್ನ ಸ್ಥಳವನ್ನು ಬಿಟ್ಟು ಅಲೆಯುವ ಮನುಷ್ಯನು ತನ್ನ ಗೂಡನ್ನು ಬಿಟ್ಟು ಅಲೆಯುವ ಪಕ್ಷಿ ಯಂತೆ ಇದ್ದಾನೆ.
Cross references
ಕಾಯಿನನು ಕರ್ತನ ಸನ್ನಿಧಿಯಿಂದ ಹೊರಟು ಏದೆನಿನ ಪೂರ್ವದಿಕ್ಕಿನಲ್ಲಿದ್ದ ನೋದು ಎಂಬ ದೇಶ ದಲ್ಲಿ ವಾಸಿಸಿದನು.
ಆಗ ಅಬ್ರಾಮನು ಸಾರಯಳಿಗೆ--ಇಗೋ, ನಿನ್ನ ದಾಸಿಯು ನಿನ್ನ ಕೈಯಲ್ಲಿ ಇದ್ದಾಳೆ; ನೀನು ಮೆಚ್ಚುವದನ್ನು ಮಾಡು ಅಂದನು. ಆಗ ಸಾರಯಳು ಅವಳನ್ನು ಬಾಧಿಸಿದ್ದರಿಂದ ಅವಳು ಸಾರಯಳ ಬಳಿಯಿಂದ ಓಡಿಹೋದಳು.
ಆದರೆ ಗಾದ್ ಪ್ರವಾದಿಯು ದಾವೀದನಿಗೆ--ನೀನು ಗವಿಯಲ್ಲಿರದೆ ಯೆಹೂದ ದೇಶಕ್ಕೆ ಹೊರಟು ಬಾ ಅಂದನು. ಆಗ ದಾವೀದನು ಹೊರಟು ಹೆರೆತ್ ಎಂಬ ಅರಣ್ಯಕ್ಕೆ ಬಂದನು.
ದಾವೀದನು ತನ್ನ ಹೃದಯದಲ್ಲಿ--ನಾನು ಎಂದಿಗಾದರೂ ಒಂದು ದಿನ ಸೌಲನ ಕೈಯಿಂದ ಮಡಿದುಹೋಗುತ್ತೇನೆ. ನಾನು ತ್ವರೆಯಾಗಿ ಫಿಲಿಷ್ಟಿಯರ ದೇಶಕ್ಕೆ ತಪ್ಪಿಸಿಕೊಂಡು ಓಡಿಹೋಗುವ ದಕ್ಕಿಂತ ನನಗೆ ಉತ್ತಮವಾದ ಕಾರ್ಯವಿಲ್ಲ. ಸೌಲನು ನನ್ನನ್ನು ಇಸ್ರಾಯೇಲಿನಲ್ಲಿ ಇನ್ನು ಹುಡುಕಲು ದಿಕ್ಕು ಕಾಣದೆ ಹೋಗುವನು. ಈ ಪ್ರಕಾರ ನಾನು ಅವನ ಕೈಯಿಂದ ತಪ್ಪಿಸಿಕೊಂಡು ಹೋಗುವೆನು ಅಂದು ಕೊಂಡನು.
ಫರೋಹನು ಅವನಿಗೆ -- ಯಾಕೆ? ಇಗೋ, ನೀನು ನಿನ್ನ ದೇಶಕ್ಕೆ ಹೋಗಬೇಕೆಂಬುವ ಹಾಗೆ ನೀನು ನನ್ನ ಸಂಗಡ ಇರುವಾಗ ನಿನಗೆ ಏನು ಕೊರತೆಯಾಯಿತು ಅಂದಾಗ ಅವನು--ಏನೂ ಇಲ್ಲ; ಆದರೆ ಹೇಗಾದರೂ ನಾನು ಅಲ್ಲಿಗೆ ಹೋಗುತ್ತೇನೆ ಅಂದನು.
ಅವನು ಅಲ್ಲಿರುವ ಒಂದು ಗವಿಗೆ ಬಂದು ಅಲ್ಲಿ ವಾಸಿಸಿದನು. ಆಗ ಇಗೋ, ಅವನಿಗೆ ಕರ್ತನ ವಾಕ್ಯ ಉಂಟಾಗಿ ಅವನಿಗೆ--ಎಲೀಯನೇ, ಇಲ್ಲಿ ಏನು ಮಾಡುತ್ತಿ ಅಂದನು.
ಅದಕ್ಕೆ ನಾನು--ನನ್ನಂಥಾ ಮನು ಷ್ಯನು ಓಡಿಹೋಗುವನೋ? ನನ್ನಂಥವನು ಬದುಕ ಬೇಕೆಂದು ಮಂದಿರದೊಳಕ್ಕೆ ಹೋಗುವವನಾರು? ನಾನು ಒಳಗೆ ಹೋಗುವದಿಲ್ಲ ಅಂದೆನು.
ಅದು ತನ್ನ ಮೊಟ್ಟೆಗಳನ್ನು ಭೂಮಿ ಯಲ್ಲಿ ಬಿಟ್ಟು ದೂಳಿನಲ್ಲಿ ಅವುಗಳನ್ನು ಬಿಸಿಮಾಡು ತ್ತದೆ.
ವಿವೇ ಕದ ಮಾರ್ಗವನ್ನು ಬಿಟ್ಟು, ತಿರುಗುವವನು ಸತ್ತವರ ಕೂಟದಲ್ಲಿ ಇರುವಂಥವನಾಗಿದ್ದಾನೆ.
ಅಲೆದಾಡುವ ಪಕ್ಷಿಯಂತೆಯೂ ಹಾರಾ ಡುವ ಬಾನಕ್ಕಿಯಂತೆಯೂ ಕಾರಣವಿಲ್ಲದ ನಾಶವು ಬರುವದಿಲ್ಲ.
ಗೂಡಿನಿಂದ ಹೊರಗೆ ಬಂದ ಹಕ್ಕಿಗಳು ಅಲೆದಾಡುವ ಹಾಗೆ ಮೋವಾಬಿನ ಕುಮಾರ್ತೆಯರು ಅರ್ನೋನ್ ನದಿಯ ಹಾಯ್ಗಡಗಳಲ್ಲಿ ಇರುವರು.
ಆದರೆ ಯೋನನು ಕರ್ತನ ಸಮ್ಮುಖದಿಂದ ತಾರ್ಷೀಷಿಗೆ ಓಡಿ ಹೋಗುವದಕ್ಕೆ ಎದ್ದು ಯೊಪ್ಪಕ್ಕೆ ಇಳಿದು ತಾರ್ಷೀಷಿಗೆ ಹೋಗುವ ಹಡಗನ್ನು ಕಂಡು ಅದರ ಪ್ರಯಾಣದ ತೆರವನ್ನು ಕೊಟ್ಟು ಕರ್ತನ ಸಮ್ಮುಖದಿಂದ ಅವರ ಸಂಗಡ ತಾರ್ಷಿಷಿಗೆ ಹೋಗುವದಕ್ಕೆ ಅದನ್ನು ಹತ್ತಿದನು.
ಆಗ ಆ ಮನುಷ್ಯರು ಬಹಳ ಭಯಪಟ್ಟು--ಇದನ್ನು ಯಾಕೆ ಮಾಡಿದ್ದೀ ಎಂದು ಅವನಿಗೆ ಹೇಳಿದರು, ಕರ್ತನ ಸಮ್ಮುಖದಿಂದ ಓಡಿ ಹೋಗುತ್ತಾನೆಂದು ಆ ಮನುಷ್ಯರಿಗೆ ತಿಳಿದಿತ್ತು; ಅವನು ಅವರಿಗೆ ಹೇಳಿದ್ದನು.
ದೇವರು ಕರೆದಾಗ ಪ್ರತಿಯೊಬ್ಬನು ಯಾವ ಸ್ಥಿತಿಯಲ್ಲಿದ್ದನೋ ಆ ಸ್ಥಿತಿಯಲ್ಲಿಯೇ ಇರಬೇಕು.
ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚು ತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರ ಗಳಾದ ಇವರ ಪಾಲಿಗೆ ಕಾರ್ಗತ್ತಲೆಯು ಸದಾಕಾಲ ಇಟ್ಟಿರುವದು.