Home Bibles ಸಾಮೇತಿಗಳು 28:2 · ಕನ್ನಡ ಬೈಬಲ್
ಸಾಮೇತಿಗಳು 28:2 · ಕನ್ನಡ ಬೈಬಲ್

ದೇಶದ ದೋಷಕ್ಕಾಗಿ ಅನೇಕ ಪ್ರಭುಗಳು ಇರುತ್ತಾರೆ; ಆದರೆ ಮನುಷ್ಯನ ವಿವೇಕದಿಂದಲೂ ತಿಳುವಳಿಕೆಯಿಂದಲೂ ಅದರ ಸ್ಥಿತಿಯು ವಿಸ್ತರಿಸುತ್ತದೆ.

Cross references

ಆದಿಕಾಂಡ 45:5

ಆದರೆ ನೀವು ನನ್ನನ್ನು ಇಲ್ಲಿಗೆ ಮಾರಿದ್ದಕ್ಕಾಗಿ ಈಗ ವ್ಯಸನಪಟ್ಟು ನಿಮ್ಮ ಮೇಲೆ ನೀವೇ ಸಿಟ್ಟು ಮಾಡಿಕೊಳ್ಳಬೇಡಿರಿ. ಪ್ರಾಣ ಸಂರಕ್ಷಣೆಗಾಗಿ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದ್ದಾನೆ.

1 ಅರಸುಗಳು 15:25

ಯೆಹೂದದ ಅರಸನಾದ ಆಸನ ಎರಡನೇ ವರುಷದಲ್ಲಿ ಯಾರೊಬ್ಬಾಮನ ಮಗನಾದ ನಾದಾಬನು ಇಸ್ರಾಯೇಲಿನ ಮೇಲೆ ಆಳಲು ಆರಂಭಿಸಿ ಎರಡು ವರುಷ ಆಳಿದನು.

1 ಅರಸುಗಳು 15:28

ಯೆಹೂದದ ಅರಸನಾದ ಆಸನ ಮೂರ ನೇ ವರುಷದಲ್ಲಿ ಬಾಷನು ನಾದಾಬನನ್ನು ಕೊಂದು ಹಾಕಿ ಅವನಿಗೆ ಬದಲಾಗಿ ಆಳಿದನು.

1 ಅರಸುಗಳು 16:8

ಯೆಹೂದದ ಅರಸನಾದ ಆಸನ ಇಪ್ಪತ್ತಾರನೇ ವರುಷದಲ್ಲಿ ಬಾಷನ ಮಗನಾದ ಏಲನು ಇಸ್ರಾಯೇ ಲಿನ ಮೇಲೆ ತಿರ್ಚದಲ್ಲಿ ಎರಡು ವರುಷ ಆಳಲಾರಂಭಿ ಸಿದನು.

1 ಅರಸುಗಳು 16:21

ಆಗ ಇಸ್ರಾಯೇಲಿನ ಜನರು ಎರಡು ಭಾಗವಾಗಿ ವಿಭಾಗಿಸಲ್ಪಟ್ಟು ಅರ್ಧ ಜನರು ಗೀನತನ ಮಗನಾದ ತಿಬ್ನಿಯನ್ನು ಅರಸನನ್ನಾಗಿ ಮಾಡಲು ಅವನ ಹಿಂದೆ ಹೋದರು. ಅರ್ಧ ಜನರು ಒಮ್ರಿಯ ಹಿಂದೆ ಹೋದರು.

2 ಅರಸುಗಳು 15:8

ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಮೂವತ್ತೆಂಟನೇ ವರುಷದಲ್ಲಿ ಯಾರೊಬ್ಬಾಮನ ಮಗ ನಾದ ಜೆಕರ್ಯ ಇಸ್ರಾಯೇಲಿನ ಮೇಲೆ ಸಮಾರ್ಯ ದಲ್ಲಿ ಆರು ತಿಂಗಳು ಆಳಿದನು.

2 ದಿನವೃತ್ತಾಂತ 32:20

ಇದರ ನಿಮಿತ್ತ ಅರಸನಾದ ಹಿಜ್ಕೀಯನೂ ಆಮೋ ಚನ ಮಗನಾಗಿರುವ ಪ್ರವಾದಿಯಾದ ಯೆಶಾಯನೂ ಪ್ರಾರ್ಥನೆಮಾಡಿ ಪರಲೋಕಕ್ಕೆ ಕೂಗಿದರು.

2 ದಿನವೃತ್ತಾಂತ 36:1

ಆಗ ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನನ್ನು, ತಕ್ಕೊಂಡು ಯೆರೂಸಲೇಮಿನಲ್ಲಿ ಅವನ ತಂದೆಗೆ ಬದ ಲಾಗಿ ಅವನನ್ನು ಅರಸನಾಗಿ ಮಾಡಿದರು.

ಯೋಬ 22:28

ನೀನು ಏನಾದರೂ ನಿರ್ಣಯಿಸಿದರೆ ಅದು ನಿನಗೆ ಸ್ಥಿರವಾಗುವದು ಮತ್ತು ನಿನ್ನ ಮಾರ್ಗಗಳಲ್ಲಿ ಬೆಳಕು ಮೂಡುವದು.

ಸಭಾಪ್ರಸಂಗಿ 9:15

ಆಗ ಅದ ರಲ್ಲಿ ಒಬ್ಬ ಜ್ಞಾನಿಯಾದ ಬಡಮನುಷ್ಯನು ಕಾಣಿಸಿ ಕೊಂಡು ಅವನು ತನ್ನ ಜ್ಞಾನದಿಂದ ಆ ಪಟ್ಟಣವನ್ನು ತಪ್ಪಿಸಿದನು. ಆದರೂ ಆ ಬಡಮನುಷ್ಯನನ್ನು ಯಾವನೂ ಜ್ಞಾಪಕಮಾಡಿಕೊಳ್ಳಲಿಲ್ಲ.

ಯೆಶಾಯ 3:1

ಇಗೋ, ಕರ್ತನು, ಸೈನ್ಯಗಳ ಕರ್ತನೆಂಬ ನಾನು ಜೀವನಕ್ಕೆ ಆಧಾರವಾದ ಅನ್ನಪಾನ ಗಳನ್ನೆಲ್ಲಾ ಯೆರೂಸಲೇಮಿನಿಂದಲೂ ಯೆಹೂದ ದಿಂದಲೂ ತೆಗೆದುಬಿಡುವೆನು.

ಯೆಶಾಯ 58:12

ಆಗ ನಿನ್ನವರು ಪುರಾತನ ಕಾಲದ ಹಾಳಾದ ಸ್ಥಳಗಳನ್ನು ಕಟ್ಟುವರು, ತಲತಲಾ ಂತರಕ್ಕಿದ್ದ ಅಸ್ತಿವಾರಗಳನ್ನು ನೀನು ಎಬ್ಬಿಸುವಿ; ಸೀಳಿ ದ್ದನ್ನು ಸರಿ ಮಾಡುವವನೆಂದೂ ನಿವಾಸಿಗಳಿಗಾಗಿ ಹಾದಿಗಳನ್ನು ತಿರಿಗಿ ಸರಿಮಾಡುವವನೆಂದೂ ನೀನು ಕರೆಯಲ್ಪಡುವಿ.

ದಾನಿಯೇಲ 4:27

ಆದದರಿಂದ ಓ ಅರಸನೇ, ನನ್ನ ಆಲೋಚನೆಯು ನಿನಗೆ ಸಮ್ಮತಿ ಯಾಗಿ ನಿನ್ನ ಪಾಪಗಳನ್ನು ನೀತಿಯಿಂದ ಅಳಿಸಿ ನಿನ್ನ ಅನ್ಯಾಯಗಳನ್ನು ಬಡವರಿಗೆ ದಯೆ ತೋರಿಸುವದ ರಿಂದ ಬಿಟ್ಟುಬಿಡು. ಒಂದು ವೇಳೆ ಇದರಿಂದ ನಿನ್ನ ನೆಮ್ಮದಿಯು ಹೆಚ್ಚಾಗಬಹುದು.

ಹೊಶೇಯ 13:11

ನನ್ನ ಕೋಪದಲ್ಲಿ ನಿನಗೆ ಅರಸನನ್ನು ಕೊಟ್ಟೆನು, ನನ್ನ ರೌದ್ರದಲ್ಲಿ ಅವನನ್ನು ತೆಗೆದುಹಾಕಿದೆನು.

Interlinear

Choose Theme