ನಂಬಿಗಸ್ತನಾದ ಮನು ಷ್ಯನು ಆಶೀರ್ವಾದಗಳಲ್ಲಿ ತುಂಬಿತುಳುಕುವನು; ಆದರೆ ಧನವಂತನಾಗಲು ಆತುರಪಡುವವನು ನಿರ್ದೋಷಿ ಯಾಗಿರುವದಿಲ್ಲ.
Cross references
ಅಹೀಮೆಲೆಕನು ಅರಸನಿಗೆ ಪ್ರತ್ಯುತ್ತರವಾಗಿ--ನಿನ್ನ ಎಲ್ಲಾ ಸೇವಕರಲ್ಲಿ ದಾವೀದನ ಹಾಗೆ ನಂಬಿಗಸ್ತನಾದವನು ಯಾವನಿ ದ್ದಾನೆ? ಅವನು ಅರಸನಿಗೆ ಅಳಿಯನೂ ನಿನ್ನ ಆಜ್ಞೆಗಳ ಹಾಗೆ ಮಾಡಿಕೊಂಡು ಬರುವವನೂ ನಿನ್ನ ಮನೆಯಲ್ಲಿ ಘನವುಳ್ಳವನೂ ಆಗಿದ್ದಾನೆ.
ಆದರೆ ದೇವರ ಮನುಷ್ಯನಾದ ಎಲೀಷನ ಸೇವಕ ನಾಗಿರುವ ಗೇಹಜಿಯು--ಇಗೋ, ನನ್ನ ಯಜಮಾ ನನು ಈ ಅರಾಮ್ಯನಾದ ನಾಮಾನನು ತಕ್ಕೊಂಡು ಬಂದದ್ದನ್ನು ಅವನ ಕೈಯಿಂದ ತಕ್ಕೊಳ್ಳದೆ ಸುಮ್ಮನೆ ಕಳುಹಿಸಿದ್ದಾನೆ. ಆದರೆ ಕರ್ತನ ಜೀವದಾಣೆ, ನಾನು ಅವನ ಹಿಂದೆ ಓಡಿಹೋಗಿ ಅವನ ಕೈಯಿಂದ ಏನಾ ದರೂ ತಕ್ಕೊಳ್ಳುವೆನು ಅಂದುಕೊಂಡನು.
ಆಗ ನಾನು ನನ್ನ ಸಹೋದರನಾದ ಹನಾನಿಗೂ ಅರಮನೆಯ ಅಧಿಪತಿಯಾದ ಹನನ್ಯ ನಿಗೂ ಯೆರೂಸಲೇಮಿನ ಕಾವಲನ್ನು ಒಪ್ಪಿಸಿದೆನು. ಇವನು ಸತ್ಯವುಳ್ಳವನಾಗಿಯೂ ಅನೇಕರಿಗಿಂತ ಹೆಚ್ಚಾಗಿ ದೇವರಿಗೆ ಭಯಪಡುವವನಾಗಿಯೂ ಇದ್ದನು.
ದೇಶದಲ್ಲಿರುವ ನಂಬಿಗಸ್ತರು ನನ್ನ ಸಂಗಡ ವಾಸಿ ಸುವ ಹಾಗೆ ನನ್ನ ಕಣ್ಣುಗಳು ಅವರ ಮೇಲೆ ಅವೆ; ಸಂಪೂರ್ಣವಾದ ಮಾರ್ಗದಲ್ಲಿ ನಡೆದು ಕೊಳ್ಳುವ ವನೇ ನನ್ನನ್ನು ಸೇವಿಸುವನು.
ಯಥಾರ್ಥರಿಗೆ ಕತ್ತಲಲ್ಲಿ ಬೆಳಕು ಹುಟ್ಟುತ್ತದೆ; ಆತನು ಕೃಪೆಯೂ ಅಂತಃಕರಣವೂ ನೀತಿ ಯೂ ಉಳ್ಳಾತನೇ.
ನೀತಿವಂತರ ತಲೆಯ ಮೇಲೆ ಆಶೀರ್ವಾದಗಳು ಇವೆ; ಆದರೆ ದುಷ್ಟನ ಬಾಯಿಯನ್ನು ಬಲಾತ್ಕಾರವು ಮುಚ್ಚುತ್ತದೆ.
ವ್ಯರ್ಥತ್ವದಿಂದ ಹೊಂದಿದ ಐಶ್ವರ್ಯವು ಕಡಿಮೆ ಯಾಗುವದು; ಪ್ರಯಾಸದಿಂದ ಕೂಡಿಸುವವನು ವೃದ್ಧಿ ಗೊಳ್ಳುವನು.
ಬಡವರನ್ನು ಹಾಸ್ಯಮಾಡುವವನು ತನ್ನ ಸೃಷ್ಟಿ ಕರ್ತ ನನ್ನೇ ನಿಂದಿಸುತ್ತಾನೆ; ವಿಪತ್ತುಗಳಿಗೆ ಸಂತೋಷಿಸು ವವನು ಶಿಕ್ಷೆಯನ್ನು ಹೊಂದಲೇಬೇಕು.
ಅನೇಕರಲ್ಲಿ ಪ್ರತಿಯೊ ಬ್ಬನು ತಮ್ಮ ಸ್ವಂತ ಸೌಜನ್ಯವನ್ನು ಸಾರುವನು; ನಂಬಿ ಗಸ್ತನಾದ ಮನುಷ್ಯನನ್ನು ಯಾರು ಕಂಡುಕೊಳ್ಳಬಲ್ಲರು?
ಮೊದಲು ಸ್ವಾಸ್ತ್ಯವನ್ನೂ ತ್ವರೆ ಯಾಗಿ ಹೊಂದಬಹುದು; ಅದರ ಕೊನೆಯು ಆಶೀ ರ್ವದಿಸಲ್ಪಡುವದಿಲ್ಲ.
ಐಶ್ವರ್ಯ ವಂತನಾಗುವದಕ್ಕೆ ಪ್ರಯಾಸಪಡಬೇಡ; ನಿನ್ನ ಸ್ವಂತ ಜ್ಞಾನವನ್ನು ಬಿಟ್ಟುಬಿಡು.
ಧನ ವಂತನಾಗಲು ಆತುರಪಡುವವನು ಕೆಟ್ಟ ಕಣ್ಣುಳ್ಳವ ನಾಗಿದ್ದಾನೆ; ತನಗೆ ಬಡತನವು ಬರುವದನ್ನು ಅವನು ಯೋಚಿಸುವದಿಲ್ಲ.
ಕರ್ತನು--ಹಾಗಾದರೆ ತಕ್ಕಕಾಲದಲ್ಲಿ ಅವರ ಪಾಲಿನ ಆಹಾರವನ್ನು ಕೊಡುವದಕ್ಕಾಗಿ ಒಡೆಯನು ತನ್ನ ಮನೆಯಮೇಲೆ ನೇಮಿಸುವ ನಂಬಿಗಸ್ತನೂ ವಿವೇಕಿಯೂ ಆಗಿರುವ ಮನೇವಾರ್ತೆಯವನು ಯಾರು?
ತರುವಾಯ ಆತನು ತನ್ನ ಶಿಷ್ಯರಿಗೂ
ಯಾವನು ಸ್ವಲ್ಪವಾದದ್ದರಲ್ಲಿ ನಂಬಿಗಸ್ತ ನಾಗಿರುವನೋ ಅವನು ಬಹಳವಾದದ್ದರಲ್ಲಿಯೂ ನಂಬಿಗಸ್ತನಾಗಿದ್ದಾನೆ; ಯಾವನು ಸ್ವಲ್ಪವಾದದ್ದರಲ್ಲಿ ಅನ್ಯಾಯಗಾರನಾಗಿರುವನೋ ಅವನು ಬಹಳವಾದದ್ದ ರಲ್ಲಿಯೂ ಅನ್ಯಾಯಗಾರನಾಗಿದ್ದಾನೆ.
ಹೀಗಿರಲು ಮನೆವಾರ್ತೆಯವನು ನಂಬಿಗಸ್ತನಾಗಿ ಕಂಡುಬರುವದು ಅವಶ್ಯವಾಗಿದೆ.
ಆದರೆ ಐಶ್ವರ್ಯವಂತರಾಗ ಬೇಕೆಂದು ಮನಸ್ಸು ಮಾಡುವವರು ಶೋಧನೆಯಲ್ಲಿಯೂ ಉರ್ಲಿನಲ್ಲಿಯೂ ಸಿಕ್ಕಿಕೊಂಡು ಅನೇಕ ಬುದ್ಧಿಹೀನತೆಯ ಮತ್ತು ಹಾನಿಕರವಾದ ದುರಾಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ನಾಶನಗಳಲ್ಲಿ ಮುಳುಗಿಸುತ್ತವೆ.
ನಿನ್ನನ್ನು ಸಂಕಟಪಡಿಸುವವುಗಳಲ್ಲಿ ಯಾವ ದಕ್ಕೂ ಹೆದರಬೇಡ. ಇಗೋ, ನೀವು ಶೋಧಿಸಲ್ಪಡು ವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವನು; ಹತ್ತು ದಿವಸಗಳ ತನಕ ನಿಮಗೆ ಸಂಕಟವಿ ರುವದು. ನೀನು ಸಾಯಬೇಕಾದರೂ ನಂಬಿಗಸ್ತ ನಾಗಿರು; ನಾನು ನಿನಗೆ
ನಿನ್ನ ಕ್ರಿಯೆಗಳನ್ನೂ ನೀನು ವಾಸಮಾಡುವ ಸ್ಥಳವನ್ನೂ ಬಲ್ಲೆನು; ಅದು ಸೈತಾನನ ಆಸನವಿರುವ ಸ್ಥಳವಾಗಿದೆ; ನೀನು ನನ್ನ ಹೆಸರನ್ನು ಬಿಗಿಯಾಗಿ ಹಿಡುಕೊಂಡಿದ್ದೀ; ನಿಮ್ಮಲ್ಲಿರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತನಾದ ಹತಸಾಕ್ಷಿಯಾದ ಅಂತಿಪನು ಕೊಲ್ಲಲ್ಪಟ್ಟ ದಿನಗಳಲ್ಲಿ ಯಾದರೂ ನ