ತನ್ನ ತಂದೆ ತಾಯಿಯನ್ನಾಗಲಿ ದೋಚಿಕೊಂಡು--ಇದು ದೋಷವಲ್ಲ ಎಂದು ಹೇಳುವವನು ಕೆಡುಕನಿಗೆ ಜೊತೆಗಾರನು.
Cross references
ಅವನು ತನ್ನ ತಾಯಿಗೆ--ನಿನ್ನ ಬಳಿಯಿಂದ ಸಾವಿರದ ನೂರು ರೂಪಾಯಿಗಳಷ್ಟು ಬೆಳ್ಳಿಯು ತೆಗೆಯಲ್ಪಟ್ಟಾಗ ನೀನು ಆ ಬೆಳ್ಳಿಯನ್ನು ಕುರಿತು ಶಪಿಸಿ ನನ್ನ ಕಿವಿಗಳಲ್ಲಿ ಮಾತನಾಡಿದಿಯಲ್ಲಾ? ಇಗೋ, ಆ ಬೆಳ್ಳಿಯು ನನ್ನ ಬಳಿಯಲ್ಲಿ ಅದೆ; ನಾನು ಅದನ್ನು ತಕ್ಕೊಂಡೆನು ಅಂದನು. ಅದಕ್ಕೆ ಅವನ ತಾಯಿ--ನನ್ನ ಮಗನೇ, ನೀನು ಕರ್ತನಿಂದ ಆಶೀರ್ವದಿಸಲ್ಪಡುವಿ ಅಂದಳು.
ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗಿರುವನು. ಬುದ್ಧಿ ಹೀನರ ಜೊತೆಗಾರನು ನಾಶವಾಗುವನು.
ಸೋಮಾರಿಯು ತನ್ನ ಕೆಲಸ ದಲ್ಲಿ ಬಹಳವಾಗಿ ಹಾಳುಮಾಡುವವನಿಗೆ ಸಹೋದ ರನು ಆಗಿದ್ದಾನೆ.
ತಂದೆಯನ್ನು ನಷ್ಟಪಡಿಸಿ ತಾಯಿಯನ್ನು ಓಡಿಸುವವನು ನಾಚಿಕೆಯನ್ನುಂಟು ಮಾಡಿ ನಿಂದೆಯನ್ನು ತರುತ್ತಾನೆ.
ದಯಾದೃಷ್ಟಿಯುಳ್ಳವನು ಆಶೀ ರ್ವಾದವನ್ನು ಹೊಂದುವನು; ತನಗಿದ್ದ ಆಹಾರದಲ್ಲಿ ಬಡವರಿಗೆ ಕೊಡುತ್ತಾನೆ.
ಕಟ್ಟಳೆಯನ್ನು ಕೈಕೊಳ್ಳು ವವನು ಜ್ಞಾನಿಯಾದ ಮಗನು; ದುಂದುಗಾರ ಸಂಗ ಡಿಗನು ತನ್ನ ತಂದೆಯನ್ನು ಅವಮಾನಪಡಿಸುತ್ತಾನೆ.
ಯಾಕಂ ದರೆ ದೇವರು ಅಪ್ಪಣೆ ಕೊಟ್ಟು ಹೇಳಿದ್ದೇನಂದರೆ--ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು. ಮತ್ತು--ಯಾವನಾದರೂ ತಂದೆಯನ್ನಾಗಲೀ ತಾಯಿಯನ್ನಾ ಗಲೀ ಶಪಿಸಿದರೆ ಅವನು ಸಾಯಲೇಬೇಕು ಎಂಬದೇ.