ಬಡವರಿಗೆ ನಂಬಿಕೆಯಿಂದ ನ್ಯಾಯತೀರಿಸುವ ಅರಸನ ಸಿಂಹಾ ಸನವು ಎಂದೆಂದಿಗೂ ಸ್ಥಿರಗೊಳ್ಳುವದು.
Cross references
ಕೇಳುವ ಕಿವಿ ನನ್ನನ್ನು ಧನ್ಯನೆಂದು ಹರಸಿತು; ನೋಡುವ ಕಣ್ಣು ನನಗೆ ಸಾಕ್ಷಿ ಕೊಡುತ್ತಿತ್ತು.
ನಿನ್ನ ಜನರಿಗೆ ನೀತಿಯಿಂದಲೂ ದೀನರಿಗೆ ನ್ಯಾಯದಿಂದಲೂ ಆತನು ತೀರ್ಪು ಮಾಡು ವನು.
ಆತನಿಗೆ ಮೊರೆ ಇಡುವ ಬಡವರನ್ನೂ ಸಹಾಯ ಕನಿಲ್ಲದ ದೀನನನ್ನೂ ಬಿಡಿಸುವನು.
ಎಷ್ಟರ ವರೆಗೂ ಅನ್ಯಾಯವಾಗಿ ತೀರ್ಪುಮಾಡಿ ದುಷ್ಟ ರಿಗೆ ಮುಖದಾಕ್ಷಿಣ್ಯ ಮಾಡುವಿರಿ? ಸೆಲಾ.
ಎಂದೆಂದಿಗೂ ಕರುಣೆಯು ಸ್ಥಾಪಿಸಲ್ಪಡು ವದು; ಆಕಾಶಗಳಲ್ಲಿಯೂ ನಿನ್ನ ನಂಬಿಗಸ್ತಿಕೆಯನ್ನು ಸ್ಥಿರಪಡಿಸುವಿ ಎಂದು ಹೇಳಿದ್ದೇನೆ.
ಕೆಟ್ಟದ್ದನ್ನು ಮಾಡುವವರು ರಾಜರಿಗೆ ಅಸಹ್ಯರು; ನೀತಿಯಿಂದ ಸಿಂಹಾಸನವು ಸ್ಥಾಪಿಸಲ್ಪಡು ತ್ತದೆ.
ಕರುಣೆಯೂ ಸತ್ಯವೂ ಅರಸನನ್ನು ಕಾಯುತ್ತದೆ; ಕರುಣೆಯಿಂದಲೇ ಅವನ ಸಿಂಹಾಸನವು ಸ್ಥಿರಗೊಳ್ಳುತ್ತದೆ.
ಅರಸನ ಸಮ್ಮುಖದಿಂದ ದುಷ್ಟರನ್ನು ತೆಗೆದುಹಾಕಿದರೆ ಅವನ ಸಿಂಹಾಸನವು ನೀತಿಯಲ್ಲಿ ಸ್ಥಿರವಾಗುವದು.
ವಿವೇಕ ಶೂನ್ಯನಾದ ಒಡೆಯನು ಮಹಾಹಿಂಸಕನು; ಲೋಭತನವನ್ನು ಹಗೆಮಾಡುವವನು ತನ್ನ ದಿನಗಳನ್ನು ದೀರ್ಘಮಾಡುತ್ತಾನೆ.
ನ್ಯಾಯತೀರ್ಪಿನಿಂದ ಅರಸನು ದೇಶವನ್ನು ಸ್ಥಿರಗೊಳಿಸುತ್ತಾನೆ; ಲಂಚಗಳನ್ನು ಸ್ವೀಕರಿಸು ವವನು ಅದನ್ನು ಕೆಡವಿಹಾಕುತ್ತಾನೆ.
ಒಳ್ಳೆಯದನ್ನು ಮಾಡಲು ಕಲಿತುಕೊಳ್ಳಿರಿ; ನ್ಯಾಯ ವನ್ನು ಹುಡುಕಿರಿ, ಹಿಂಸೆಪಡುವವರನ್ನು ಉಪಚರಿಸಿರಿ, ಅನಾಥರಿಗೆ ನ್ಯಾಯತೀರಿಸಿರಿ, ವಿಧವೆಯರ ಪರವಾಗಿವಾದಿಸಿರಿ.
ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.
ಆದರೆ ಬಡವರಿಗೆ ನೀತಿಯಿಂದ ನ್ಯಾಯತೀರಿಸುವನು; ಭೂಮಿಯ ದೀನರಿಗೆ ನ್ಯಾಯ ವಾಗಿ ತೀರ್ಪುಮಾಡುವನು; ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ಹೊಡೆಯುವನು, ತನ್ನ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವನು.
ಅವರೆಲ್ಲರು ಘೋರವಾಗಿ ತಿರುಗಿ ಬೀಳುವವರೇ; ಚಾಡಿಕೋರರಾಗಿ ನಡೆಯುತ್ತಾರೆ; ಹಿತ್ತಾಳೆಯೂ ಕಬ್ಬಿಣವೂ ಆಗಿದ್ದಾರೆ; ಅವರೆಲ್ಲರೂ ಕೆಡಿಸುವವರೇ.
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ನಿಮಗೆ ಪ್ರವಾದಿಸುವ ಪ್ರವಾದಿಗಳ ವಾಕ್ಯಕ್ಕೆ ಕಿವಿ ಗೊಡಬೇಡಿರಿ; ಅವರು ನಿಮ್ಮನ್ನು ನಿಷ್ಫಲಮಾಡುತ್ತಾರೆ; ಕರ್ತನ ಬಾಯಿಂದಲ್ಲ, ಸ್ವಂತ ಹೃದಯದಿಂದ ದರ್ಶನ ವನ್ನು ಹೇಳುತ್ತಾರೆ.
ಆದದರಿಂದ ಓ ಅರಸನೇ, ನನ್ನ ಆಲೋಚನೆಯು ನಿನಗೆ ಸಮ್ಮತಿ ಯಾಗಿ ನಿನ್ನ ಪಾಪಗಳನ್ನು ನೀತಿಯಿಂದ ಅಳಿಸಿ ನಿನ್ನ ಅನ್ಯಾಯಗಳನ್ನು ಬಡವರಿಗೆ ದಯೆ ತೋರಿಸುವದ ರಿಂದ ಬಿಟ್ಟುಬಿಡು. ಒಂದು ವೇಳೆ ಇದರಿಂದ ನಿನ್ನ ನೆಮ್ಮದಿಯು ಹೆಚ್ಚಾಗಬಹುದು.
ಆತನು ದೊಡ್ಡವನಾಗಿದ್ದು ಮಹೋನ್ನತನ ಕುಮಾರನೆಂದು ಕರೆಯಲ್ಪಡುವನು; ದೇವರಾದ ಕರ್ತನು ಆತನ ತಂದೆ ಯಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡು ವನು.
ಮಗನ ವಿಷಯದಲ್ಲಿಯಾದರೋ--ಓ ದೇವರೇ, ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವದು; ನೀತಿದಂಡವೇ ನಿನ್ನ ರಾಜದಂಡವಾಗಿದೆ.