Home Bibles ಸಾಮೇತಿಗಳು 29:27 · ಕನ್ನಡ ಬೈಬಲ್
ಸಾಮೇತಿಗಳು 29:27 · ಕನ್ನಡ ಬೈಬಲ್

ಅನೀತಿ ವಂತನು ನೀತಿವಂತರಿಗೆ ಅಸಹ್ಯ; ತನ್ನ ಮಾರ್ಗದಲ್ಲಿ ಯಥಾರ್ಥವಾಗಿರುವವನು ದುಷ್ಟರಿಗೆ ಅಸಹ್ಯ.

Cross references

ಕೀರ್ತನೆಗಳು 101:4

ಡೊಂಕಾದ ಹೃದಯವು ನನ್ನನ್ನು ಬಿಟ್ಟು ಹೋಗುವದು; ಕೆಟ್ಟವನನ್ನು ತಿಳಿಯು ವದಿಲ್ಲ.

ಕೀರ್ತನೆಗಳು 119:115

ಕೇಡು ಮಾಡುವವರೇ, ನನ್ನಿಂದ ತೊಲಗಿರಿ; ನನ್ನ ದೇವರ ಆಜ್ಞೆಗಳನ್ನು ಕೈಕೊಳ್ಳುವೆನು.

ಕೀರ್ತನೆಗಳು 139:21

ಓ ಕರ್ತನೇ, ನಾನು ನಿನ್ನನ್ನು ದ್ವೇಷಿಸುವವರನ್ನು ಹಗೆಮಾಡುವದಿಲ್ಲವೋ? ನಿನ್ನ ವಿರೋಧಿಗಳಿಗೆ ನಾನು ಬೇಸರಗೊಳ್ಳುವ ದಿಲ್ಲವೋ?

ಸಾಮೇತಿಗಳು 13:19

ಇಷ್ಟ ಸಿದ್ಧಿ ಪ್ರಾಣಕ್ಕೆ ಸಿಹಿಯಾಗಿದೆ; ಕೆಟ್ಟತನದಿಂದ ತೊಲಗುವದು ಅವಿವೇಕಿಗಳಿಗೆ ಅಸಹ್ಯವಾಗಿದೆ.

ಸಾಮೇತಿಗಳು 24:9

ಬುದ್ಧಿಹೀನನ ಆಲೋ ಚನೆಯು ಪಾಪ; ಪರಿಹಾಸ್ಯಗಾರನು ಮನುಷ್ಯರಿಗೆ ಅಸಹ್ಯ.

ಸಾಮೇತಿಗಳು 29:10

ಕೊಲೆಪಾತಕರು ನೀತಿವಂತರನ್ನು ದ್ವೇಷಿಸು ತ್ತಾರೆ; ಯಥಾರ್ಥವಂತರು ಅವನ ಪ್ರಾಣವನ್ನು ಹುಡು ಕುತ್ತಾರೆ.

ಜೆಕರ್ಯ 11:8

ಇದಲ್ಲದೆ ಒಂದೇ ತಿಂಗಳಲ್ಲಿ ಮೂರು ಕುರುಬರನ್ನು ತೆಗೆದುಹಾಕಿದೆನು; ನನ್ನ ಆತ್ಮವು ಅವರನ್ನು ಹೇಸಿಕೊಂಡಿತು; ಅವರ ಆತ್ಮವು ಸಹ ನನ್ನನ್ನು ಹೇಸಿ ಕೊಂಡಿತು.

ಯೋಹಾನ 7:7

ಲೋಕವು ನಿಮ್ಮನ್ನು ಹಗೆಮಾಡಲಾರದು; ಆದರೆ ಅದರ ಕ್ರಿಯೆಗಳು ಕೆಟ್ಟವುಗಳಾಗಿವೆ ಎಂದು ಅದರ ವಿಷಯ ದಲ್ಲಿ ನಾನು ಸಾಕ್ಷಿ ಹೇಳುವದರಿಂದ ಅದು ನನ್ನನ್ನು ಹಗೆಮಾಡುತ್ತದೆ.

ಯೋಹಾನ 15:17

ನೀವು ಒಬ್ಬರನ್ನೊಬ್ಬರು ಪ್ರೀತಿ ಮಾಡಬೇಕೆಂದು ನಾನು ಇವುಗಳನ್ನು ನಿಮಗೆ ಆಜ್ಞಾಪಿಸುತ್ತೇನೆ.

ಯೋಹಾನ 15:23

ನನ್ನನ್ನು ದ್ವೇಷಮಾಡುವವನು ನನ್ನ ತಂದೆಯನ್ನು ಸಹ ದ್ವೇಷಮಾಡುತ್ತಾನೆ.

1 ಯೋಹಾನ 3:13

ನನ್ನ ಸಹೋದರರೇ, ಲೋಕವು ನಿಮ್ಮನ್ನು ದ್ವೇಷಿಸಿದರೆ ಆಶ್ಚರ್ಯಪಡಬೇಡಿರಿ.

Interlinear

Choose Theme