ಅವಳ ಮಾರ್ಗ ಗಳು ಸಂತೋಷಕರವೂ ಎಲ್ಲಾ ದಾರಿಗಳು ಸಮಾ ಧಾನಕರವೂ ಆಗಿವೆ.
Cross references
ಅವು ಬಂಗಾರಕ್ಕಿಂತಲೂ ಬಹಳ ಅಪರಂಜಿ ಗಿಂತಲೂ ಅಪೇಕ್ಷಿಸತಕ್ಕವುಗಳು; ಜೇನಿಗಿಂತಲೂ ಶೋಧಿಸಿದ ಜೇನು ತುಪ್ಪಕ್ಕಿಂತಲೂ ಸಿಹಿಯಾದವು ಗಳು.
ಆತನ ಒಡಂಬಡಿಕೆಯನ್ನೂ ಸಾಕ್ಷಿಗಳನ್ನೂ ಕೈಕೊಳ್ಳು ವವರಿಗೆ ಕರ್ತನ ದಾರಿಗಳೆಲ್ಲಾ ಕರುಣೆಯೂ ಸತ್ಯವೂ ಉಳ್ಳವು.
ಆದರೆ ಸಾತ್ವಿಕರು ಭೂಮಿಯನ್ನು ಸ್ವಾಧೀನ ಮಾಡಿಕೊಂಡು ಬಹಳ ಸಮಾಧಾನದಲ್ಲಿ ಆನಂದ ಪಡುವರು.
ನಿನ್ನ ಪ್ರೀತಿ ಕರುಣೆಯು ಜೀವಕ್ಕಿಂತ ಶ್ರೇಷ್ಠ ವಾದದ್ದು; ನನ್ನ ತುಟಿಗಳು ನಿನ್ನನ್ನು ಹೊಗಳುವವು.
ನೀವು ಕರ್ತನನ್ನು ಸ್ತುತಿಸಿರಿ. ಕರ್ತನಿಗೆ ಭಯಪಟ್ಟು ಆತನ ಆಜ್ಞೆಗಳಲ್ಲಿ ಬಹಳವಾಗಿ ಸಂತೋಷಿಸುವ ಮನುಷ್ಯನು ಧನ್ಯನು.
ನಿನ್ನ ಸಾಕ್ಷಿಗಳ ಮಾರ್ಗದಲ್ಲಿ, ಸಕಲ ಸಂಪತ್ತಿನಲ್ಲಿ ಹೇಗೋ ಹಾಗೆಯೇ ಸಂತೋಷಿಸಿದ್ದೇನೆ.
ನಾನು ಪ್ರೀತಿಮಾಡುವ ನಿನ್ನ ಆಜ್ಞೆಗಳಲ್ಲಿ ಆನಂದಪಡುವೆನು.
ನಿನ್ನ ಮಾತುಗಳು ನನ್ನ ರುಚಿಗೆ ಎಷ್ಟೋ ಸಿಹಿ ಯಾಗಿವೆ, ಅವು ನನ್ನ ಬಾಯಿಗೆ ಜೇನಿಗಿಂತ ಸಿಹಿ ಯಾಗಿವೆ.
ನಿನ್ನ ನ್ಯಾಯಪ್ರಮಾಣ ವನ್ನು ಪ್ರೀತಿಮಾಡುವವರಿಗೆ ಸಂಪೂರ್ಣ ಸಮಾ ಧಾನ ಉಂಟು; ಅವರಿಗೆ ಆತಂಕವೇನೂ ಇರುವದಿಲ್ಲ.
ಕರ್ತನೇ, ನಿನ್ನ ರಕ್ಷಣೆಗೆ ಆಶೆಪಟ್ಟಿದೇನೆ. ನಿನ್ನ ನ್ಯಾಯಪ್ರಮಾಣವು ನನ್ನ ಆನಂದವಾಗಿದೆ.
ನಿನ್ನ ಹೃದಯದಲ್ಲಿ ಜ್ಞಾನವು ಪ್ರವೇಶಿ ಸಿದಾಗ ನಿನ್ನ ಪ್ರಾಣಕ್ಕೆ ತಿಳುವಳಿಕೆಯು ಅಂದವಾಗಿರು ವದು.
ಮನುಷ್ಯನ ಮಾರ್ಗಗಳು ಕರ್ತನನ್ನು ಮೆಚ್ಚಿಸಿದಾಗ ಅವನ ಶತ್ರುಗಳನ್ನು ಸಹ ಅವನೊಂದಿಗೆ ಸಮಾಧಾನ ದಲ್ಲಿರುವಂತೆ ಆತನು ಮಾಡುತ್ತಾನೆ.
ಅವುಗಳನ್ನು ನಿನ್ನೊಳಗೆ ಕಾಪಾಡಿದರೆ ಅದು ರಮ್ಯವಾಗಿದೆ; ಅವು ನಿನ್ನ ತುಟಿ ಗಳಲ್ಲಿ ಹೊಂದಿಕೊಂಡಿರುವವು.
ದೃಢಮನಸ್ಸುಳ್ಳವನನ್ನು ಪೂರ್ಣ ಸಮಾಧಾನದಲ್ಲಿ ನೆಲೆಗೊಳಿಸಿ ಕಾಯುವಿ. ಅವನಿಗೆ ನಿನ್ನಲ್ಲಿ ಭರವಸವಿದೆ.
ನಾನು ತುಟಿಗಳಿಗೆ ಫಲವನ್ನುಂಟು ಮಾಡುವ ವನಾಗಿ ಅವನಿಗೆ ದೂರವಾದವನಿಗೂ ಅವನಿಗೆ ಸವಿಾಪವಾದವನಿಗೂ ಸಮಾಧಾನವಿರಲಿ. ನಾನು ಅವನನ್ನು ಸ್ವಸ್ಥಮಾಡುವೆ ನೆಂದು ಕರ್ತನು ಹೇಳು ತ್ತಾನೆ.
ಕಷ್ಟಪಡುವವರೇ ಮತ್ತು ಭಾರಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ, ನಾನು ನಿಮಗೆ ವಿಶ್ರಾಂತಿಯನ್ನು ಕೊಡುವೆನು.