Home Bibles ಸಾಮೇತಿಗಳು 3:30 · ಕನ್ನಡ ಬೈಬಲ್
ಸಾಮೇತಿಗಳು 3:30 · ಕನ್ನಡ ಬೈಬಲ್

ಒಬ್ಬನು ನಿನಗೆ ಯಾವ ಕೇಡನ್ನೂ ಮಾಡ ದಿದ್ದರೆ ಅವನೊಂದಿಗೆ ಯಾವ ಕಾರಣವಿಲ್ಲದೆ ಜಗಳ ವಾಡಬೇಡ.

Cross references

2 ಅರಸುಗಳು 14:10

ನೀನು ಎದೋಮ್ಯ ರನ್ನು ಹೊಡೆದೇ ಹೊಡೆದದ್ದರಿಂದ ನಿನ್ನ ಹೃದಯವು ನಿನ್ನನ್ನು ಹೆಚ್ಚಿಸುವಂತೆ ಮಾಡಿತು. ಹೆಚ್ಚಳಪಡು; ಮನೆಯಲ್ಲಿ ಕಾದಿರು; ನಿನ್ನ ಕೇಡಿಗಾಗಿ ನೀನು ಯಾಕೆ ಜಗಳವಾಡಬೇಕು? ನೀನೂ ನಿನ್ನ ಸಂಗಡ ಯೆಹೂ ದವೂ ಬಿದ್ದು ಹೋಗುವಿರಲ್ಲಾ ಅಂದನು. ಆದರೆ ಅಮಚ್ಯನು ಕೇಳದೆ ಹೋದನು.

ಸಾಮೇತಿಗಳು 17:14

ಒಬ್ಬನು ನೀರನ್ನು ಹೊರಬಿಡುವಂತೆ ಕಲಹದ ಪ್ರಾರಂಭವು ಇರುವದು. ಆದಕಾರಣ ಆ ಕಲಹಕ್ಕೆ ಕೈ ಹಾಕುವದಕ್ಕಿಂತ ಮುಂಚೆ ಅದನ್ನು ಬಿಟ್ಟುಬಿಡು.

ಸಾಮೇತಿಗಳು 18:6

ಅವಿವೇಕಿಯ ತುಟಿಗಳು ಕಲಹದಲ್ಲಿ ಸೇರುವದರಿಂದ ಏಟುಗಳನ್ನು ತಿನ್ನುವದಕ್ಕೆ ಅವನ ಬಾಯಿಯು ಕೂಗಿಕೊಳ್ಳುತ್ತದೆ.

ಸಾಮೇತಿಗಳು 25:8

ನಿನ್ನ ನೆರೆಯವನು ನಿನ್ನನ್ನು ಅವಮಾನಕ್ಕೆ ಗುರಿಮಾಡಿದಾಗ ಕಡೆಯಲ್ಲಿ ಏನು ಮಾಡಬೇಕೆಂಬದು ನೀನು ತಿಳಿಯ ದಂತೆ ದುಡುಕಿನಿಂದ ಕಲಹಮಾಡುವದಕ್ಕಾಗಿ ಹೋಗ ಬೇಡ.

ಸಾಮೇತಿಗಳು 29:22

ಕೋಪಿಷ್ಠನು ಜಗಳ ವನ್ನೆಬ್ಬಿಸುತ್ತಾನೆ; ರೋಷಗೊಂಡವನು ದೋಷದಲ್ಲಿ ತುಂಬಿರುತ್ತಾನೆ.

ಮತ್ತಾಯ 5:39

ಆದರೆ ನಾನು ನಿಮಗೆ ಹೇಳುವದೇನಂದರೆ--ನೀವು ಕೆಟ್ಟದ್ದನ್ನು ಎದುರಿಸಬೇಡಿರಿ; ಯಾವನಾದರೂ ನಿನ್ನ ಬಲ ಗೆನ್ನೆಯ ಮೇಲೆ ಹೊಡೆದರೆ ಮತ್ತೊಂದನ್ನು ಸಹ ಅವನಿಗೆ ತಿರುಗಿಸು.

ರೋಮಾಪುರದವರಿಗೆ 12:18

ಸಾಧ್ಯ ವಾದರೆ ನಿಮ್ಮಿಂದಾಗುವ ಮಟ್ಟಿಗೆ ಎಲ್ಲರ ಸಂಗಡ ಸಮಾಧಾನವಾಗಿರ್ರಿ.

1 ಕೊರಿಂಥದವರಿಗೆ 6:6

ಆದರೆ ಸಹೋದರನು ಸಹೋದರನ ಮೇಲೆ ವ್ಯಾಜ್ಯ ವಾಡುವದಲ್ಲದೆ ಅವಿಶ್ವಾಸಿಗಳ ಮುಂದೆಯೂ ಹೋಗುತ್ತಾನೆ.

2 ತಿಮೋಥೆಯ 2:24

ಕರ್ತನ ಸೇವ ಕನು ಜಗಳವಾಡದೆ ಎಲ್ಲರ ವಿಷಯದಲ್ಲಿ ಸಾಧುವೂ ಬೋಧಿಸುವದರಲ್ಲಿ ಪ್ರವೀಣನೂ ತಾಳ್ಮೆಯುಳ್ಳವನೂ ಆಗಿರಬೇಕು.

Interlinear

Choose Theme