ಕರ್ತನ ಶಾಪವು ದುಷ್ಟರ ಮನೆಯಲ್ಲಿದೆ; ಆದರೆ ನ್ಯಾಯಸ್ಥರ ನಿವಾಸವನ್ನು ಆತನು ಆಶೀರ್ವದಿಸುತ್ತಾನೆ.
Cross references
ನೀವು ನನ್ನ ಮಾತನ್ನು ಕೇಳದೆ ಈ ಎಲ್ಲಾ ಆಜ್ಞೆಗಳ ಪ್ರಕಾರ ನಡೆಯದೆ ಹೋದರೆ
ನೀನು ಅದರಂತೆ ಶಾಪಕ್ಕೊಳಗಾಗದ ಹಾಗೆ ಅಸಹ್ಯವಾದದ್ದನ್ನು ನಿನ್ನ ಮನೆಗೆ ತಕ್ಕೊಂಡು ಬರ ಬಾರದು; ಅದನ್ನು ಸಂಪೂರ್ಣವಾಗಿ ಅಸಹ್ಯಿಸಬೇಕು; ಸಂಪೂರ್ಣವಾಗಿ ಹೇಸಿಕೊಳ್ಳಬೇಕು; ಯಾಕಂದರೆ ಅದು ಶಪಿಸಲ್ಪಟ್ಟದ್ದೇ.
ನಿಮ್ಮ ದೇವರಾದ ಕರ್ತನ ಆಜ್ಞೆಗಳಿಗೆ ವಿಧೇಯರಾಗದೆ, ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ಮಾರ್ಗಕ್ಕೆ ಓರೆಯಾಗಿ ನೀವು ತಿಳಿಯದ ಬೇರೆ ದೇವರುಗಳನ್ನು ಹಿಂಬಾಲಿಸಿದರೆ ಶಾಪವು.
ನೀನು ನಿನ್ನ ದೇವರಾದ ಕರ್ತನ ವಾಕ್ಯವನ್ನು ಕೇಳಿದರೆ ಈ ಎಲ್ಲಾ ಆಶೀರ್ವಾದಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು.
ಪಟ್ಟಣದಲ್ಲಿ ನಿನಗೆ ಶಾಪ; ಹೊಲದಲ್ಲಿ ನಿನಗೆ ಶಾಪ;
ಈ ಶಾಪದ ಮಾತುಗಳನ್ನು ಕೇಳಿ ಅವನು--ನನ್ನ ಹೃದಯದ ಕಲ್ಪನೆ ಯಲ್ಲಿ ನಡೆದುಕೊಂಡು ದಾಹಕ್ಕೆ ಅಮಲನ್ನು ಕುಡಿಸಿ ದರೂ ನನಗೆ ಸಮಾಧಾನವಿರುವದೆಂದು ಹೇಳಿಕೊಂಡು ತನ್ನ ಹೃದಯದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವವ ನಾದರೆ
ನೀವು ಶಾಪ ಕ್ಕೊಳಗಾದವುಗಳನ್ನು ತೆಗೆದುಕೊಂಡಾಗ ನಿಮ್ಮನ್ನು ಶಾಪಕ್ಕೆ ಈಡಾಗಿ ಮಾಡಿಕೊಂಡು ಇಸ್ರಾಯೇಲಿನ ದಂಡನ್ನು ಶಾಪಕ್ಕೆ ಈಡುಮಾಡಿ ತೊಂದರೆಪಡಿಸದ ಹಾಗೆ ಶಾಪಕ್ಕೆ ಈಡಾದವುಗಳನ್ನು ತೆಗೆದುಕೊಳ್ಳದೆ ಬಹು ಎಚ್ಚರಿಕೆಯಾಗಿರ್ರಿ.
ನೀನು ಎದ್ದು ಜನರನ್ನು ಪರಿಶುದ್ಧ ಮಾಡಿ ಹೇಳ ಬೇಕಾದದ್ದೇನಂದರೆ--ನಾಳೆಗೆ ನಿಮ್ಮನ್ನು ಪರಿಶುದ್ಧ ಮಾಡಿಕೊಳ್ಳಿರಿ; ಇಸ್ರಾಯೇಲೇ, ನಿನ್ನ ಮಧ್ಯದಲ್ಲಿ ಶಾಪಕ್ಕೆ ಕಾರಣವಾದದ್ದು ಉಂಟು; ಅದನ್ನು ನಿಮ್ಮಲ್ಲಿಂದ ತೆಗೆದುಹಾಕುವ ಪರಿಯಂತರ ನೀನು ನಿನ್ನ ಶತ್ರುಗಳ ಮುಂದೆ ನಿಲ್ಲಲಾರಿರಿ ಎಂದು ಇಸ್ರಾಯೇಲ್ ಕರ್ತನಾದ ದೇವರು ಹೇಳುತ್ತಾನೆ.
ಕರ್ತನ ಮಂಜೂ ಷವು ಗತ್ ಊರಿನ ಒಬೇದೆದೋಮನ ಮನೆಯಲ್ಲಿ ಮೂರು ತಿಂಗಳು ಇದ್ದದ್ದರಿಂದ ಕರ್ತನು ಒಬೇದೆ ದೋಮನನ್ನೂ ಅವನ ಮನೆಯವರೆಲ್ಲರನ್ನೂ ಆಶೀರ್ವದಿಸಿದನು.
ನೀನು ಶುದ್ಧನೂ ಯಥಾರ್ಥನೂ ಆಗಿದ್ದರೆ ನಿಶ್ಚಯ ವಾಗಿ ಈಗಲೇ ಆತನು ನಿನಗೋಸ್ಕರ ಎಚ್ಚತ್ತು ನಿನ್ನ ನೀತಿಯ ನಿವಾಸವನ್ನು ಅಭಿವೃದ್ಧಿಗೊಳಿಸುವನು.
ನೀರುಗಳ ಹಾಗೆ ಅವನು ತೀವ್ರವಾಗಿದ್ದಾನೆ; ಅವನ ಭಾಗವು ಭೂಮಿಯ ಮೇಲೆ ಶಪಿಸಲ್ಪಟ್ಟಿದೆ; ಅವನು ದ್ರಾಕ್ಷೇ ತೋಟಗಳ ಮಾರ್ಗಕ್ಕೆ ತಿರುಗು ವದಿಲ್ಲ.
ಅದು ನಾಶವಾಗುವ ವರೆಗೆ ದಹಿ ಸುವಂಥ, ಆದಾಯವನ್ನೆಲ್ಲಾ ನಿರ್ಮೂಲ ಮಾಡು ವಂಥ ಆಗ್ನಿಯಾಗಿರುವದು.
ಅವನು ತನ್ನ ಕಾಲದಲ್ಲಿ ತನ್ನ ಫಲಕೊಡುವಂಥ, ಎಲೆ ಬಾಡದಂಥ, ನೀರಿನ ಹೊಳೆಗಳ ಬಳಿಯಲ್ಲಿ ನೆಡಲ್ಪಟ್ಟಂಥ ಮರದ ಹಾಗಿರುವನು; ಅವನು ಮಾಡು ವದೆಲ್ಲಾ ಸಫಲವಾಗುವದು.
ಆತನು ಆಶೀರ್ವದಿಸಿದವರು ಭೂಮಿಯನ್ನು ಸ್ವತಂತ್ರಿಸಿ ಕೊಳ್ಳುವರು; ಆತನು ಶಪಿಸಿದವರು ಕಡಿದು ಹಾಕಲ್ಪಡವರು.
ಕೇಡು ನಿನ್ನನ್ನು ಮುಟ್ಟದು; ಯಾವ ವ್ಯಾಧಿಯೂ ನಿನ್ನ ನಿವಾಸಕ್ಕೆ ಸವಿಾಪಿಸದು.
ನೀತಿವಂತರ ತಲೆಯ ಮೇಲೆ ಆಶೀರ್ವಾದಗಳು ಇವೆ; ಆದರೆ ದುಷ್ಟನ ಬಾಯಿಯನ್ನು ಬಲಾತ್ಕಾರವು ಮುಚ್ಚುತ್ತದೆ.
ದುಷ್ಟರ ಮನೆಯು ಕೆಡವಲ್ಪಡುವದು; ಯಥಾರ್ಥವಂತರ ಗುಡಾರವು ಏಳಿಗೆಯಾಗುವದು.
ನೀತಿವಂತನ ಮನೆಯಲ್ಲಿ ಬಹಳ ಸಂಪತ್ತು; ದುಷ್ಟನ ಆದಾಯಗಳಲ್ಲಿ ತೊಂದರೆ ಇರುವದು.
ನೀತಿವಂತನು ದುಷ್ಟನ ಮನೆಯನ್ನು ಬುದ್ಧಿ ಯಿಂದ ಲಕ್ಷಿಸುತ್ತಾನೆ; ಅವರ ದುಷ್ಟತನಕ್ಕಾಗಿ ದೇವರು ಅವರನ್ನು ಕೆಡವುತ್ತಾನೆ.
ಆಗ ಅವನು ನನಗೆ ಹೇಳಿದ್ದೇನಂದರೆ--ದೇಶದ ಮೇಲೆಲ್ಲಾ ಹೊರಡುವ ಶಾಪವು ಇದೇ; ಕಳ್ಳತನ ಮಾಡುವವರೆಲ್ಲರು ಈ ದಿಕ್ಕಿನ ಪ್ರಕಾರ ತೆಗೆದುಹಾಕಲ್ಪಡುವರು; ಆಣೆ ಇಡುವವರೆಲ್ಲರು ಆ ಕಡೆ ಅದರ ಪ್ರಕಾರ ತೆಗೆದುಹಾಕಲ್ಪಡುವರು.
ನಾನು ಅದನ್ನು ಹೊರಗೆ ತರುತ್ತೇನೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಅದು ಕಳ್ಳನ ಮನೆಯಲ್ಲಿಯೂ ನನ್ನ ಹೆಸರಿನಿಂದ ಸುಳ್ಳಾಗಿ ಆಣೆಯಿಡುವವನ ಮನೆಯ ಲ್ಲಿಯೂ ಪ್ರವೇಶಿಸಿ ಅವನ ಮನೆಯ ಮಧ್ಯದಲ್ಲಿ ನಿಂತು ಅದರ ಮರಗಳನ್ನೂ ಅದರ ಕಲ್ಲುಗಳನ್ನೂ ಅಳಿಸಿಬಿಡುವದು ಅಂದನು.
ಸೈನ್ಯಗಳ ಕರ್ತನು ಹೇಳುವದೇ ನಂದರೆ ನೀವು ಕೇಳದೆ, ಹೃದಯದಲ್ಲಿ ಇಟ್ಟುಕೊಳ್ಳದೆ, ನನ್ನ ಹೆಸರಿಗೆ ಮಹಿಮೆಯನ್ನು ಕೊಡದೆ ಹೋದರೆ ನಿಮ್ಮ ಮೇಲೆ ಶಾಪವನ್ನು ಕಳುಹಿಸುವೆನು, ನಿಮ್ಮ ಆಶೀರ್ವಾದಗಳನ್ನು ಶಪಿಸುವೆನು; ಹೌದು, ಅವು ಗಳನ್ನು ಆಗಲೇ ಶಪಿಸಿದ್ದಾಯಿತು; ನೀವು ಅವುಗಳನ್ನು ಹೃದಯದಲ್ಲಿ ಇಟ್ಟುಕೊಳ್ಳುವದಿಲ್ಲ.