ನಿನ್ನ ದೃಷ್ಟಿಯಲ್ಲಿ ಜ್ಞಾನಿಯಂತೆ ನೀನು ಇರಬೇಡ; ಕರ್ತನಿಗೆ ಭಯಪಟ್ಟು ಕೆಟ್ಟತನದಿಂದ ನೀನು ತೊಲಗಿಹೋಗು.
Cross references
ಆದರೆ ನನಗಿಂತ ಮುಂಚೆ ಇದ್ದ ಅಧಿಪತಿಗಳು ಜನರಿಗೆ ಭಾರವಾಗಿದ್ದು ನಾಲ್ವತ್ತು ಬೆಳ್ಳಿಯ ಶೇಕೆಲುಗಳ ಹೊರ ತಾಗಿ ಅವರಿಂದ ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಳ್ಳುತ್ತಾ ಇದ್ದರು. ಅವರ ಸೇವಕರು ಸಹ ಜನರನ್ನು ಆಳುತ್ತಾ ಇದ್ದರು. ಆದರೆ ದೇವರ ಭಯದ ನಿಮಿತ್ತ ನಾನು ಹೀಗೆ ಮಾಡಿದವನಲ್ಲ.
ಊಚ್ ಎಂಬ ದೇಶದಲ್ಲಿ ಒಬ್ಬ ಮನುಷ್ಯನು ಇದ್ದನು. ಅವನ ಹೆಸರು ಯೋಬ. ಆ ಮನುಷ್ಯನು ಸಂಪೂರ್ಣನೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೇಡನ್ನು ಬಿಟ್ಟು ತೊಲ ಗುವವನೂ ಆಗಿದ್ದನು.
ಆತನು ಮನುಷ್ಯನಿಗೆ ಹೇಳಿದ್ದೇ ನಂದರೆ--ಇಗೋ, ಕರ್ತನ ಭಯವೇ ಜ್ಞಾನ; ಕೇಡಿನಿಂದ ತೊಲಗುವದೇ ಗ್ರಹಿಕೆ.
ಮಕ್ಕಳೇ, ನೀವು ಬಂದು ನನ್ನ ಮಾತನ್ನು ಕೇಳಿರಿ; ನಾನು ಕರ್ತನ ಭಯವನ್ನು ನಿಮಗೆ ಕಲಿಸುವೆನು.
ಜ್ಞಾನಿ ಯು ಭಯಪಟ್ಟು ಕೆಟ್ಟತನದಿಂದ ಹೊರಟುಹೋಗು ವನು; ಬುದ್ಧಿಹೀನನು ಕೋಪಿಸಿಕೊಂಡು ಧೈರ್ಯದಿಂದ ಇರುತ್ತಾನೆ.
ಮರಣದ ಪಾಶಗಳಿಂದ ತೊಲಗುವದಕ್ಕೆ ಕರ್ತನ ಭಯವು ಜೀವದ ಬುಗ್ಗೆ.
ಕನಿಕರ ಮತ್ತು ಸತ್ಯದಿಂದ ಅಕ್ರಮವು ಶುದ್ಧೀಕರಿಸಲ್ಪಡುತ್ತದೆ; ಕರ್ತನ ಭಯದ ಮೂಲಕ ಮನುಷ್ಯರು ಕೆಟ್ಟದ್ದರಿಂದ ತೊಲಗುತ್ತಾರೆ.
ತನ್ನ ಸ್ವಂತ ಅಭಿಪ್ರಾಯದಲ್ಲಿ ಜ್ಞಾನಿಯಾದವನನ್ನು ನೀನು ನೋಡಿ ದ್ದೀಯೋ? ಅವನಿಗಿಂತ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯು ಇರುತ್ತದೆ,
ತನ್ನ ಹೃದಯದಲ್ಲಿಯೇ ಭರವಸವಿ ಡುವವನು ಬುದ್ಧಿಹೀನನು; ಜ್ಞಾನದಿಂದ ನಡೆಯುವ ವನು ತಪ್ಪಿಸಿಕೊಳ್ಳುವನು.
ಸಮಸ್ತ ವಿಷಯವನ್ನು ನಾವು ಕೇಳಿ ಮುಗಿಸೋಣ; ದೇವರಿಗೆ ಭಯಪಡು; ಆತನ ಆಜ್ಞೆಗಳನ್ನು ಪಾಲಿಸು; ಇದೇ ಮನುಷ್ಯನ ಪ್ರಮುಖ ಕರ್ತವ್ಯ.ಒಳ್ಳೇದಾಗಲಿ, ಕೆಟ್ಟದ್ದಾಗಲಿ, ಪ್ರತಿಯೊಂದು ರಹಸ್ಯದ ಸಂಗತಿಗೂ ದೇವರು ಪ್ರತಿಯೊಂದು ಕೆಲಸ ವನ್ನು ಕುರಿತು ನ್ಯಾಯವಿಚಾರಣೆಗೆ ತರುವನು.
ತಮ್ಮ ಸ್ವಂತ ಕಣ್ಣುಗಳಲ್ಲಿ ಜ್ಞಾನಿಗಳೂ ಸ್ವಂತ ದೃಷ್ಟಿಯಲ್ಲಿ ವಿವೇಕಿಗಳೂ ಆಗಿರುವವರಿಗೆ ಅಯ್ಯೋ!
ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತ ರೆಂಬದಾಗಿ ಎಣಿಸಿಕೊಳ್ಳದಂತೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿದಿರಬೇಕೆಂದು ಅಪೇಕ್ಷಿಸುತ್ತೇನೆ. ಅದೇನಂದರೆ, ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಕುರುಡುತನವು ಅನ್ಯಜನಗಳು ಸಂಪೂರ್ಣವಾಗಿ ದೇವರ ರಾಜ್ಯದಲ್ಲಿ ಸೇರುವ ತನಕ
ಒಬ್ಬರಿಗೊಬ್ಬರು ಒಂದೇ ಮನಸ್ಸುಳ್ಳುವರಾಗಿರ್ರಿ; ದೊಡ್ಡಸ್ತಿಕೆಗಳ ಮೇಲೆ ಮನಸ್ಸಿಡದೆ ದೀನರ ಸಂಗಡ ಬಳಿಕೆಯಾಗಿರ್ರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಭಾವಿಸಿಕೊಳ್ಳಬೇಡಿರಿ.