ಸಾಮೇತಿಗಳು 30:20 · ಕನ್ನಡ ಬೈಬಲ್
ಜಾರಸ್ತ್ರೀಯ ನಡತೆಯು ಹಾಗೆಯೇ ಇದೆ; ಅವಳು ತಿಂದು ತನ್ನ ಬಾಯನ್ನು ಒರಸಿಕೊಂಡು--ನಾನು ಯಾವ ಕೆಟ್ಟದ್ದನ್ನೂ ಮಾಡಲಿಲ್ಲ ಎಂದು ಹೇಳುತ್ತಾಳೆ.
Cross references
ಅಂಕೆಗಳ ಪುಸ್ತಕ 5:11
ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ--
2 ಸಮುವೇಲ 11:4
ದಾವೀದನು ದೂತರನ್ನು ಕಳುಹಿಸಿ ಅವಳನ್ನು ಕರೆಯಿಸಿದನು. ಅವಳು ಅವನ ಬಳಿಗೆ ಬಂದಾಗ ಅವಳು ತನ್ನ ಮೈಲಿಗೆಯನ್ನು ಕಳಕೊಂಡು ಶುಚಿಯಾಗಿದ್ದದರಿಂದ ದಾವೀದನು ಅವಳ ಸಂಗಡ ಮಲಗಿದನು.
ಸಾಮೇತಿಗಳು 5:6
ಅವುಗಳನ್ನು ನೀನು ತಿಳಿದುಕೊಳ್ಳಲಾರದಂತೆ ಜೀವದ ಮಾರ್ಗವನ್ನು ನೀನು ವಿವೇಚಿಸಲಾರದಷ್ಟು ಅವಳ ಮಾರ್ಗಗಳು ಚಂಚಲವಾಗಿವೆ.
ಸಾಮೇತಿಗಳು 7:13
ಹೀಗೆ ಅವಳು ಅವ ನನ್ನು--ಹಿಡುಕೊಂಡು ಮುದ್ದಿಟ್ಟು
ಯೆರೆಮಿಯ 2:23
ನಾನು ಅಶುದ್ಧನಲ್ಲ, ಬಾಳನನ್ನು ಹಿಂಬಾಲಿಸಲಿಲ್ಲ ಎಂದು ನೀನು ಹೇಳುವದು ಹೇಗೆ? ತಗ್ಗಿನಲ್ಲಿ ನಿನ್ನ ಮಾರ್ಗವನ್ನು ನೋಡು; ನೀನು ಮಾಡಿದ್ದನ್ನು ತಿಳುಕೋ; ನೀನು ತೀವ್ರವಾಗಿ ಸಂಚಾರ ಮಾಡುವ ಹೆಣ್ಣು ಒಂಟೆಯೇ;