ಆಕೆಯು ತನಗಾಗಿ ರತ್ನ ಕಂಬಳಿಗಳನ್ನು ಮಾಡು ತ್ತಾಳೆ; ಆಕೆಯ ಉಡುಪೋ ರೇಷ್ಮೆ ರಕ್ತಾಂಭರ.
Cross references
ಇದಲ್ಲದೆ ಫರೋಹನು ತನ್ನ ಕೈಯೊಳಗಿನ ಉಂಗುರವನ್ನು ತೆಗೆದು ಯೋಸೇಫನ ಕೈಯಲ್ಲಿಟ್ಟು ನಾರುಮಡಿಯ ವಸ್ತ್ರವನ್ನು ತೊಡಿಸಿ ಚಿನ್ನದ ಸರವನ್ನು ಅವನ ಕೊರಳಿಗೆ ಹಾಕಿದನು.
ಆದರೆ ಆಭರಣಗಳೂ ಕಂಠಮಾಲೆ ಗಳೂ ಮಿದ್ಯಾನ್ಯರ ಅರಸುಗಳು ಹೊದ್ದುಕೊಂಡಿದ್ದ ರಕ್ತಾಂಬರ ವಸ್ತ್ರಗಳೂ ಅವರ ಒಂಟೆಗಳ ಕೊರಳಿಗೆ ಇದ್ದ ಸರಪಣಿಗಳೂ ಹೊರತು ಅವನು ಕೇಳಿ ತೆಗೆದು ಕೊಂಡ ಬಂಗಾರದ ವಾಲೆಗಳ ತೂಕವು ಸಾವಿರದ ಏಳು ನೂರು ಶೆಕೆಲ್ ತೂಕವಾಗಿತ್ತು.
ಮೂರನೇ ದಿನದಲ್ಲಿ ಏನಾಯಿತಂದರೆ, ಎಸ್ತೇರಳು ರಾಜ ಭೂಷಣಗಳನ್ನು ಧರಿಸಿ ಕೊಂಡು ಅರಮನೆಗೆ ಎದುರಾಗಿರುವ ಅರಸನ ಮನೆಯ ಅಂಗಳದಲ್ಲಿ ಹೋಗಿ ನಿಂತಳು. ಅರಸನು ರಾಜ ಮನೆ ಯಲ್ಲಿ ಬಾಗಲಿಗೆದುರಾಗಿ ತನ್ನ ರಾಜ ಸಿಂಹಾಸನದ ಮೇಲೆ ಕುಳಿತಿದ್ದನು.
ಮೊರ್ದೆಕೈ ನೀಲ ಶುಭ್ರವಾದ ರಾಜವಸ್ತ್ರವನ್ನು ಧರಿಸಿಕೊಂಡು ಬಂಗಾರದ ದೊಡ್ಡ ಕಿರೀಟವನ್ನು ಇಟ್ಟು ಕೊಂಡು ರಕ್ತವರ್ಣವುಳ್ಳ ನಯವಾದ ವಸ್ತ್ರ ಧರಿಸಿ ಕೊಂಡು ಅರಸನ ಸಮ್ಮುಖದಿಂದ ಹೊರಟು ಹೋದನು. ಆಗ ಶೂಷನ್ ಪಟ್ಟಣವು ಸಂಭ್ರಮವೂ ಸಂತೋಷವೂ ಉಳ್ಳದ್ದಾಗಿತ್ತು.
ಅರಸನ ಮಗಳು ತನ್ನಲ್ಲಿ ಪೂರ್ಣ ಘನವುಳ್ಳವ ಳಾಗಿದ್ದಾಳೆ; ಅವಳ ವಸ್ತ್ರವು ಚಿನ್ನದಿಂದ ನೆಯಿದದೆ.
ಚಿತ್ರವಾಗಿ ನೇಯ್ದ ವಸ್ತುಗಳಿಂದಲೂ ವಿಚಿತ್ರ ವಸ್ತು ಗಳಿಂದಲೂ ಐಗುಪ್ತದ ನಯವಾದ ನಾರುಮಡಿ ಯಿಂದಲೂ ನನ್ನ ಹಾಸಿಗೆಯನ್ನು ಅಲಂಕರಿಸಿದ್ದೇನೆ.
ಇದಲ್ಲದೆ ನಾನು ಕಸೂ ತಿಯ ಬಟ್ಟೆಯನ್ನು ನಿನಗೆ ತೊಡಿಸಿ, ಕಡಲ ಪ್ರಾಣಿಯ ಜೋಡುಗಳನ್ನು ಕೊಟ್ಟೆನು, ನಯವಾದ ನಾರುಮಡಿ ಯನ್ನು ನಿನಗೆ ಉಡಿಸಿದೆನು, ರೇಷ್ಮೆಯ ಹೊದಿಕೆಯನ್ನು ನಿನಗೆ ಹೊದಿಸಿದೆನು.
ಜಡೆ ಹೆಣೆದುಕೊ ಳ್ಳುವದೂ ಚಿನ್ನದ ಒಡವೆಗಳನ್ನು ಇಟ್ಟುಕೊಳ್ಳುವದೂ ಇಲ್ಲವೆ ಉಡಿಗೆಗಳನ್ನು ಧರಿಸಿಕೊಳ್ಳುವದೂ ಈ ಹೊರ ಗಣ ಅಲಂಕಾರವು ಬೇಡ.
ನಿರ್ಮಲವಾದ ಬಿಳೀ ನಯವಾದ ನಾರು ಮಡಿಯನ್ನು ಧರಿಸಿಕೊಳ್ಳುವದಕ್ಕೆ ಆಕೆಗೆ ಅನುಗ್ರಹಿ ಸೋಣವಾಗಿತ್ತು; ಯಾಕಂದರೆ ಆ ನಾರುಮಡಿಯು ಪರಿಶುದ್ಧರ ನೀತಿಯೇ.
ಪರಲೋಕದಲ್ಲಿರುವ ಸೈನ್ಯಗಳು ಶುಭ್ರವಾಗಿಯೂ ನಿರ್ಮಲವಾಗಿಯೂ ಇರುವ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳೀ ಕುದುರೆಗಳ ಮೇಲೆ ಆತನ ಹಿಂದೆ ಬರುತ್ತಿದ್ದವು.