Home Bibles ಸಾಮೇತಿಗಳು 5:14 · ಕನ್ನಡ ಬೈಬಲ್
ಸಾಮೇತಿಗಳು 5:14 · ಕನ್ನಡ ಬೈಬಲ್

ನಾನು ಕೂಟ ಮತ್ತು ಸಭೆಯ ಮಧ್ಯದಲ್ಲಿ ಹೆಚ್ಚು ಕಡಿಮೆ ಎಲ್ಲಾ ಕೇಡಿನಲ್ಲಿ ಇದ್ದೆನು ಎಂದು ಹೇಳುವಿ.

Cross references

ಅಂಕೆಗಳ ಪುಸ್ತಕ 25:1

ಆಗ ಇಸ್ರಾಯೇಲ್ಯರು ಶಿಟ್ಟೀಮಿನಲ್ಲಿ ವಾಸವಾಗಿದ್ದಾಗ ಜನರು ಮೋವಾಬಿನ ಕುಮಾರ್ತೆಯರ ಸಂಗಡ ಜಾರತ್ವ ಮಾಡಲಾರಂಭಿ ಸಿದರು.

ಕೀರ್ತನೆಗಳು 73:2

ನನ್ನ ಪಾದಗಳ ಮಟ್ಟಿಗಾದರೋ ಅವು ತಪ್ಪುವ ಹಾಗಿದ್ದವು, ನನ್ನ ಹೆಜ್ಜೆಗಳು ಜಾರುವದಕ್ಕೆ ಬಹು ಸವಿಾಪವಾಗಿದ್ದವು.

ಸಾಮೇತಿಗಳು 10:17

ಶಿಕ್ಷಣವನ್ನು ಕೈಕೊಳ್ಳುವವನು ಜೀವನದ ಮಾರ್ಗದಲ್ಲಿ ಇದ್ದಾನೆ; ಗದರಿಕೆಯನ್ನು ತಿರಸ್ಕರಿಸುವವನು ತಪ್ಪುಮಾಡುತ್ತಾನೆ.

ಸಾಮೇತಿಗಳು 13:20

ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗಿರುವನು. ಬುದ್ಧಿ ಹೀನರ ಜೊತೆಗಾರನು ನಾಶವಾಗುವನು.

ಹೊಶೇಯ 4:11

ವ್ಯಭಿಚಾರವೂ ದ್ರಾಕ್ಷಾರಸವೂ ಹೊಸ ದ್ರಾಕ್ಷಾರಸವೂ ಹೃದಯವನ್ನು ಕೆಡಿಸುತ್ತದೆ.

1 ಕೊರಿಂಥದವರಿಗೆ 10:6

ಅವರು ಕೆಟ್ಟವಿಷಯಗಳನ್ನು ಆಶಿಸಿದಂತೆ ನಾವು ಆಶಿಸುವವರಾಗಬಾರದೆಂಬದಕ್ಕಾಗಿ ಈ ಸಂಗತಿ ಗಳು ನಮಗೆ ನಿದರ್ಶನಗಳಾಗಿವೆ.

2 ಪೇತ್ರ 2:10

ಆದರೆ ಮುಖ್ಯವಾಗಿ ಬಂಡು ತನದ ದುರಾಶೆಯಲ್ಲಿ ಶರೀರಾನುಸಾರ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೆ ಸ್ವೇಚ್ಛಾಪರರಾಗಿದ್ದಾರೆ; ದುರಹಂಕಾರದಿಂದ ಗೌರವವುಳ್ಳವರನ್ನು ದೂಷಿಸುತ್ತಾರೆ.

ಯೂದ 1:7

ಸೊದೋಮ ಗೊಮೋರ ದವರೂ ಹಾಗೆಯೇ ಅವುಗಳ ಸುತ್ತುಮುತ್ತಣ ಪಟ್ಟಣಗಳವರೂ ಅದೇ ರೀತಿಯಲ್ಲಿ ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು ಅನ್ಯ ಶರೀರವನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ಪ್ರತಿದಂಡನೆಯನ್ನು ಅನುಭವಿಸುತ್ತಾ ಉದಾಹರಣೆಗಾಗಿ ಇಡಲ್ಪಟ್ಟಿದ್ದಾರೆ.

Interlinear

Choose Theme