Home Bibles ಸಾಮೇತಿಗಳು 5:16 · ಕನ್ನಡ ಬೈಬಲ್
ಸಾಮೇತಿಗಳು 5:16 · ಕನ್ನಡ ಬೈಬಲ್

ನಿನ್ನ ಬುಗ್ಗೆಗಳು ಹೊರಗೆ ಮತ್ತು ನೀರಿನ ನದಿಗಳು ಬೀದಿ ಗಳಲ್ಲಿ ಹರಡಿಹೋಗಲಿ.

Cross references

ಆದಿಕಾಂಡ 24:60

ಇದ ಲ್ಲದೆ ಅವರು ರೆಬೆಕ್ಕಳನ್ನು ಆಶೀರ್ವದಿಸಿ ಆಕೆಗೆ--ನೀನು ನಮ್ಮ ಸಹೋದರಿ, ನೀನು ಸಹಸ್ರ ಸಹಸ್ರಗಳಿಗೆ ತಾಯಿಯಾಗು; ನಿನ್ನ ಸಂತಾನದವರು ತಮ್ಮನ್ನು ಹಗೆ ಮಾಡುವವರ ದ್ವಾರಗಳನ್ನು ಸ್ವಾಧೀನಮಾಡಿಕೊಳ್ಳಲಿ ಅಂದರು.

ದ್ವಿತೀಯೋಪದೇಶಕಾಂಡ 33:28

ಇಸ್ರಾಯೇಲು ಒಂಟಿಯಾಗಿ ಭರವಸದಿಂದ ಸುರಕ್ಷಿತವಾಗಿ ವಾಸಿಸುವದು. ಧಾನ್ಯ ದ್ರಾಕ್ಷಾರಸಗಳ ದೇಶದಲ್ಲಿ ಯಾಕೋಬನ ಬುಗ್ಗೆ ಇರುವದು. ಅವನ ಆಕಾಶಗಳು ಸಹ ಮಂಜನ್ನು ಸುರಿಸುವವು.ಇಸ್ರಾಯೇಲೇ, ನೀನು ಸಂತೋಷವುಳ್ಳವನೂ ನಿನ್ನ ಸಹಾಯದ ಗುರಾಣಿಯೂ ನಿನ್ನ ಘನತೆಯ ಕತ್ತಿಯೂ ಆಗಿರುವ ಕರ್ತನಿಂದ ರಕ್ಷಿಸಲ್ಪಟ್ಟ ಓ ಜನವೇ, ನಿನ್ನ ಹಾಗೆ ಯಾರಿದ್ದಾರೆ? ನಿನ್ನ ಶತ್ರುಗಳು ನಿನಗೆ ಸುಳ್ಳುಗಾರರಾಗಿ ಕಂಡುಬರುವರು. ನೀನು ಅವರ ಉನ್ನತವಾದ ಸ್ಥಳಗಳ ಮೇಲೆ ನಡೆದು ಹೋಗುವಿ.

ನ್ಯಾಯಾಧಿಪತಿಗಳು 12:9

ಅವನಿಗೆ ಮೂವತ್ತು ಮಂದಿ ಕುಮಾರರೂ ಮೂವತ್ತು ಮಂದಿ ಕುಮಾರ್ತೆಯರೂ ಇದ್ದರು. ಕುಮಾರ್ತೆಯರನ್ನು ಹೊರಗೆ ಮದುವೆಮಾಡಿಕೊಟ್ಟನು; ಹೊರಗಿ ನಿಂದ ಮೂವತ್ತು ಮಂದಿ ಕುಮಾರ್ತೆಯರನ್ನು ತನ್ನ ಕುಮಾರರಿಗೆ ತಕ್ಕೊಂಡನು. ಅವನು ಇಸ್ರಾಯೇಲ್ಯರಿಗೆ ಏಳು ವರುಷ ನ್ಯಾಯತೀರಿಸಿದನು.

ಕೀರ್ತನೆಗಳು 68:26

ಸಭೆಗಳಲ್ಲಿ ದೇವರನ್ನು ಸ್ತುತಿ ಸಿರಿ; ಇಸ್ರಾಯೇಲನ ಬುಗ್ಗೆಯಿಂದ ಕರ್ತನನ್ನು ಸ್ತುತಿ ಸಿರಿ.

ಕೀರ್ತನೆಗಳು 127:3

ಇಗೋ, ಮಕ್ಕಳು ಕರ್ತನಿಂದ ಸಿಕ್ಕಿದ ಸ್ವಾಸ್ಥ್ಯವಾಗಿ ದ್ದಾರೆ; ಗರ್ಭಫಲವು ಆತನ ಬಹುಮಾನವಾಗಿದೆ.

ಕೀರ್ತನೆಗಳು 128:3

ನಿನ್ನ ಹೆಂಡತಿಯು ನಿನ್ನ ಮನೆಯ ಪಕ್ಕದಲ್ಲಿರುವ ಫಲಭರಿತ ವಾದ ದ್ರಾಕ್ಷೇಗಿಡದ ಹಾಗೆಯೂ ನಿನ್ನ ಮೇಜಿನ ಸುತ್ತಲಿರುವ ನಿನ್ನ ಮಕ್ಕಳು ಎಣ್ಣೇಮರಗಳ ಸಸಿಗಳ ಹಾಗೆಯೂ ಇರುವರು.

ಯೆಶಾಯ 48:21

ಆತನು ಅವರನ್ನು ಮರುಭೂಮಿಯಲ್ಲಿ ನಡೆಸಿದಾಗ ಅವರು ದಾಹಗೊಳ್ಳಲಿಲ್ಲ; ಅವರಿಗಾಗಿ ನೀರನ್ನು ಬಂಡೆಯೊಳಗಿಂದ ಹರಿಸಿದನು; ಆತನು ಬಂಡೆಯನ್ನು ಸೀಳಲು ನೀರು ರಭಸದಿಂದ ಹೊರಗೆ ಬಂತು;ದುಷ್ಟರಿಗೆ ಸಮಾಧಾನವೇ ಇಲ್ಲ ಎಂದು ಕರ್ತನು ನುಡಿಯುತ್ತಾನೆ.

Interlinear

Choose Theme