ಅವನ ಹೃದಯದಲ್ಲಿ ಮೂರ್ಖ ತನವಿದೆ. ಯಾವಾಗಲೂ ಅವನು ಕೇಡನ್ನು ಕಲ್ಪಿಸು ತ್ತಾನೆ. ಅವನು ವೈಷಮ್ಯವನ್ನು ಬಿತ್ತುತ್ತಾನೆ.
Cross references
ಕುಯುಕ್ತಿಯನ್ನು ತನ್ನ ಹಾಸಿಗೆಯ ಮೇಲೆ ಕಲ್ಪಿಸುತ್ತಾನೆ; ಒಳ್ಳೇದಲ್ಲದ ಮಾರ್ಗದಲ್ಲಿ ನಿಂತು ಕೊಳ್ಳುತ್ತಾನೆ; ಕೆಟ್ಟದ್ದನ್ನು ಅಸಹ್ಯಿಸುವದಿಲ್ಲ.
ತಮ್ಮ ನಾಲಿಗೆಗಳನ್ನು ಹಾವಿನ ಹಾಗೆ ಅವರು ಹದಮಾಡುತ್ತಾರೆ; ಸರ್ಪಗಳ ವಿಷವು ಅವರ ತುಟಿಗಳ ಕೆಳಗಿದೆ ಸೆಲಾ.
ಕೆಟ್ಟ ದ್ದನ್ನು ಮಾಡುವದಕ್ಕೆ ಸಂತೋಷಿಸಿ ದುಷ್ಟರ ಮೂರ್ಖ ತನದಲ್ಲಿ ಆನಂದಿಸುವದರಿಂದ ನಿನ್ನನ್ನು ತಪ್ಪಿಸುವದು.
ನಿನ್ನ ನೆರೆಯವನು ಭದ್ರತೆಯಿಂದ ನಿನ್ನ ಪಕ್ಕದಲ್ಲಿ ಜೀವಿ ಸುತ್ತಿರುವಾಗ ಅವನಿಗೆ ವಿರೋಧವಾಗಿ ಕೇಡನ್ನು ಕಲ್ಪಿಸ ಬೇಡ.
ವಕ್ರ ಬುದ್ಧಿಯವನು ಕರ್ತನಿಗೆ ಅಸಹ್ಯನಾಗಿದ್ದಾನೆ; ಆದರೆ ಆತನ ಗುಟ್ಟು ನೀತಿವಂತರೊಂದಿಗೆ ಇದೆ.
ದುಷ್ಟ ಭಾವನೆಗಳನ್ನು ಕಲ್ಪಿಸುವ ಹೃದಯ, ಕೇಡಿಗೆ ಓಡಾಡುವದರಲ್ಲಿ ತ್ವರೆಪಡುವ ಕಾಲುಗಳು,
ಕೆಟ್ಟದ್ದನ್ನು ಕಲ್ಪಿಸುವವರು ತಪ್ಪು ಮಾಡುತ್ತಾರಲ್ಲವೇ? ಒಳ್ಳೆಯದನ್ನು ಕಲ್ಪಿಸುವವರಿಗೆ ಕರುಣೆಯೂ ಸತ್ಯವೂ ಇರುವವು.
ಮೂರ್ಖನು ಜಗಳವನ್ನು ಬಿತ್ತುತ್ತಾನೆ; ಪಿಸುಗುಟ್ಟುವವನು ಪ್ರಮುಖ ಸ್ನೇಹಿತರನ್ನು ಅಗಲಿಸು ತ್ತಾನೆ.
ಮನುಷ್ಯನ ಮಾರ್ಗವು ಡೊಂಕು ಮತ್ತು ಅಪರಿಚಿತ; ಪವಿತ್ರನಿ ಗಾದರೋ ಅವನ ಕ್ರಿಯೆಯು ಸರಳ.
ಕೆಟ್ಟತನವನ್ನು ಬಿತ್ತುವವನು ವ್ಯರ್ಥ ವನ್ನು ಕೊಯ್ಯುವನು; ಅವನ ಕೋಪದ ದಂಡವು ಬಿದ್ದುಹೋಗುವದು.
ಕೇಡನ್ನು ಕಲ್ಪಿಸುವವನು ಕುಚೋದ್ಯಗಾರ ನೆಂದು ಕರೆಯಲ್ಪಡುವನು.
ಹಾದು ಹೋಗುತ್ತಾ ತನ್ನದಾಗ ದಿರುವ ವ್ಯಾಜ್ಯದಲ್ಲಿ ತಲೆಹಾಕುವವನು ಕಿವಿಹಿಡಿದು ನಾಯಿಯನ್ನು ತೆಗೆದುಕೊಂಡು ಹೋಗುವವನಂತೆ ಇದ್ದಾನೆ.
ಜಿಪುಣನ ಆಯುಧಗಳು ಕೆಟ್ಟವುಗಳೇ, ದರಿದ್ರನು ನ್ಯಾಯವಾದದ್ದನ್ನು ಮಾತನಾಡಿದರೂ ಅವನು ಬಡವ ರನ್ನು ಸುಳ್ಳು ಮಾತುಗಳಿಂದ ಕೆಡಿಸುವದಕ್ಕೆ ಕುಯುಕ್ತಿ (ದೋಷ)ಗಳನ್ನು ಕಲ್ಪಿಸುವನು.
ಆದರೆ ದುಷ್ಟರು ಸುಮ್ಮನಿರಲಾರದಂಥ, ಅದರ ನೀರುಗಳು ಕೆಸರನ್ನೂ ಮೈಲಿಗೆಯನ್ನೂ ಕಾರು ವಂಥ, ಅಲ್ಲಕಲ್ಲೋಲವಾಗಿರುವ ಸಮುದ್ರದ ಹಾಗಿ ದ್ದಾರೆ.ದುಷ್ಟರಿಗೆ ಸಮಾಧಾನವೇ ಇಲ್ಲವೆಂದು ನನ್ನ ದೇವರು ಹೇಳುತ್ತಾನೆ.
ಆಮೇಲೆ ಆತನು ನನಗೆ ಹೇಳಿದ್ದೇನಂದರೆ --ಮನುಷ್ಯಪುತ್ರನೇ, ಈ ಪಟ್ಟಣದಲ್ಲಿ ಕುತಂತ್ರಗ ಳನ್ನು ಕಲ್ಪಿಸಿ ದುರಾಲೋಚನೆಗಳನ್ನು ಹೇಳಿ ಕೊಡುವ ವರಾದ ಈ ಜನರು--
ಅವರು ಗಾಳಿಯನ್ನು ಬಿತ್ತಿ ದ್ದಾರೆ; ಬಿರುಗಾಳಿಯನ್ನು ಕೊಯ್ಯುತ್ತಾರೆ. ಅದಕ್ಕೆ ಕಾಂಡ ವಿಲ್ಲ; ಮೊಳಕೆಯು ಆಹಾರವನ್ನು ಕೊಡುವದಿಲ್ಲ. ಒಂದು ವೇಳೆ ಅದು ಕೊಟ್ಟರೂ ಪರಕೀಯರು ಅದನ್ನು ನುಂಗುತ್ತಾರೆ.
ಅಪರಾಧವನ್ನು ಯೋಚಿಸಿ, ತಮ್ಮ ಹಾಸಿಗೆಗಳ ಮೇಲೆ ಕೆಟ್ಟದ್ದನ್ನು ನಡಿಸುವವರಿಗೆ ಅಯ್ಯೋ! ಹೊತ್ತಾರೆ ಬೆಳಕಾಗುವಾಗ ಅದನ್ನು ಮಾಡುತ್ತಾರೆ; ಅದು ಅವರ ಕೈವಶದಲ್ಲಿದೆ.
ಸಹೋದರರೇ, ನೀವು ಹೊಂದಿದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ ವಿಘ್ನಗಳನ್ನೂ ನಿಮ್ಮಲ್ಲಿ ಉಂಟು ಮಾಡುವವರನ್ನು ಗುರುತಿಟ್ಟು ಅವರನ್ನು ಬಿಟ್ಟು ತೊಲಗಿಹೋಗಿರಿ ಎಂದು ನಾನು ನಿಮ್ಮನ್ನು ಬೇಡಿ ಕೊಳ್ಳುತ್ತೇನೆ.
ಮೋಸ ಹೊಗಬೇಡಿರಿ; ದೇವರು ಪರಿಹಾಸ್ಯ ಮಾಡಲ್ಪಡುವಾತನಲ್ಲ; ಯಾಕಂದರೆ ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು.