Home Bibles ಸಾಮೇತಿಗಳು 6:18 · ಕನ್ನಡ ಬೈಬಲ್
ಸಾಮೇತಿಗಳು 6:18 · ಕನ್ನಡ ಬೈಬಲ್

ದುಷ್ಟ ಭಾವನೆಗಳನ್ನು ಕಲ್ಪಿಸುವ ಹೃದಯ, ಕೇಡಿಗೆ ಓಡಾಡುವದರಲ್ಲಿ ತ್ವರೆಪಡುವ ಕಾಲುಗಳು,

Cross references

ಆದಿಕಾಂಡ 6:5

ಮನುಷ್ಯನ ದುಷ್ಟತ್ವವು ಭೂಮಿಯಲ್ಲಿ ಹೆಚ್ಚಿದ್ದನ್ನೂ ಅವನ ಹೃದಯದ ಆಲೋಚನೆಗಳ ಕಲ್ಪನೆಗಳೆಲ್ಲಾ ಯಾವಾಗಲೂ ಬರೀ ಕೆಟ್ಟವುಗಳೆಂದೂ ದೇವರು ನೋಡಿದನು.

ಕೀರ್ತನೆಗಳು 36:4

ಕುಯುಕ್ತಿಯನ್ನು ತನ್ನ ಹಾಸಿಗೆಯ ಮೇಲೆ ಕಲ್ಪಿಸುತ್ತಾನೆ; ಒಳ್ಳೇದಲ್ಲದ ಮಾರ್ಗದಲ್ಲಿ ನಿಂತು ಕೊಳ್ಳುತ್ತಾನೆ; ಕೆಟ್ಟದ್ದನ್ನು ಅಸಹ್ಯಿಸುವದಿಲ್ಲ.

ಸಾಮೇತಿಗಳು 1:16

ಅವರ ಪಾದಗಳು ಕೇಡಿಗೆ ಓಡುತ್ತವೆ, ರಕ್ತವನ್ನು ಸುರಿಸುವದಕ್ಕೆ ಆತುರ ಪಡುತ್ತವೆ.

ಸಾಮೇತಿಗಳು 15:26

ದುಷ್ಟರ ಆಲೋಚನೆಯು ಕರ್ತನಿಗೆ ಅಸಹ್ಯವಾಗಿದೆ; ಶುದ್ಧನ ಮಾತುಗಳು ಸಂತೋಷಕರ ವಾದ ಮಾತುಗಳೇ.

ಸಾಮೇತಿಗಳು 24:8

ಕೇಡನ್ನು ಕಲ್ಪಿಸುವವನು ಕುಚೋದ್ಯಗಾರ ನೆಂದು ಕರೆಯಲ್ಪಡುವನು.

ಯೆಶಾಯ 59:7

ಅವರ ಕಾಲುಗಳು ಕೇಡಿಗೆ ಓಡುತ್ತವೆ; ಅಪರಾಧವಿಲ್ಲದ ರಕ್ತ ವನ್ನು ಚೆಲ್ಲುವದಕ್ಕೆ ತ್ವರೆಪಡುತ್ತವೆ. ಅವರ ಆಲೋ ಚನೆ ಗಳು ದುಷ್ಟತನದ ಆಲೋಚನೆಗಳೇ; ನಷ್ಟವೂ ನಾಶವೂ ಅವರ ಮಾರ್ಗಗಳಲ್ಲಿ ಅವೆ.

ಯೆರೆಮಿಯ 4:14

ಯೆರೂಸಲೇಮೇ, ನೀನು ರಕ್ಷಿಸಲ್ಪಡುವ ಹಾಗೆ ನಿನ್ನ ಹೃದಯವನ್ನು ಕೆಟ್ಟತನದಿಂದ ತೊಳೆದುಕೋ; ನಿನ್ನ ವ್ಯರ್ಥ ಆಲೋಚನೆಗಳು ಎಷ್ಟರ ವರೆಗೆ ನಿನ್ನಲ್ಲಿ ತಂಗುವವು?

ಮೀಕ 2:1

ಅಪರಾಧವನ್ನು ಯೋಚಿಸಿ, ತಮ್ಮ ಹಾಸಿಗೆಗಳ ಮೇಲೆ ಕೆಟ್ಟದ್ದನ್ನು ನಡಿಸುವವರಿಗೆ ಅಯ್ಯೋ! ಹೊತ್ತಾರೆ ಬೆಳಕಾಗುವಾಗ ಅದನ್ನು ಮಾಡುತ್ತಾರೆ; ಅದು ಅವರ ಕೈವಶದಲ್ಲಿದೆ.

ಜೆಕರ್ಯ 8:17

ನಿಮ್ಮ ಹೃದಯಗಳಲ್ಲಿ ಒಬ್ಬರ ಮೇಲೊ ಬ್ಬರು ಕೇಡನ್ನು ಕಲ್ಪಿಸದಿರ್ರಿ; ಸುಳ್ಳು ಪ್ರಮಾಣವನ್ನು ಪ್ರೀತಿಮಾಡಿದಿರಿ; ಇವುಗಳೆಲ್ಲವೂ ನಾನು ಹಗೆ ಮಾಡುವಂಥವುಗಳೇ ಎಂದು ಕರ್ತನು ಹೇಳುತ್ತಾನೆ.

ರೋಮಾಪುರದವರಿಗೆ 3:15

ಅವರ ಕಾಲುಗಳು ರಕ್ತವನ್ನು ಸುರಿಸಲು ಆತುರ ಪಡುತ್ತವೆ.

Interlinear

Choose Theme