Home Bibles ಸಾಮೇತಿಗಳು 6:21 · ಕನ್ನಡ ಬೈಬಲ್
ಸಾಮೇತಿಗಳು 6:21 · ಕನ್ನಡ ಬೈಬಲ್

ಅವುಗಳನ್ನು ಯಾವಾಗಲೂ ನಿನ್ನ ಹೃದಯಕ್ಕೆ ಬಂಧಿಸು. ನಿನ್ನ ಕಂಠಕ್ಕೆ ಕಟ್ಟಿಕೋ.

Cross references

ನಿರ್ಗಮಕಾಂಡ 13:9

ಕರ್ತನ ನ್ಯಾಯಪ್ರಮಾಣವು ನಿನ್ನ ಬಾಯಲ್ಲಿ ಇರುವಂತೆ ಅದು (ಆಚರಣೆಯು) ನಿನ್ನ ಕೈ ಮೇಲೆ ಗುರುತಾಗಿಯೂ ನಿನ್ನ ಕಣ್ಣುಗಳ ಮಧ್ಯೆ ಜ್ಞಾಪಕಾರ್ಥವಾಗಿಯೂ ಇರ ಬೇಕು. ಕರ್ತನು ನಿನ್ನನ್ನು ತನ್ನ ಬಲವಾದ ಕೈಯಿಂದ ಐಗುಪ್ತದಿಂದ ಹೊರಗೆ ಬರಮಾಡಿದ್ದಾನೆ.

ನಿರ್ಗಮಕಾಂಡ 13:16

ಇದು ನಿನ್ನ ಕೈಮೇಲೆ ಗುರುತಾಗಿಯೂ ನಿನ್ನ ಕಣ್ಣುಗಳ ನಡುವೆ ಹಣೆಯ ಕಟ್ಟಾಗಿಯೂ ಇರಲಿ. ಯಾಕಂದರೆ ಕರ್ತನು ತನ್ನ ಬಲವಾದ ಕೈಯಿಂದ ನಮ್ಮನ್ನು ಐಗುಪ್ತದೊಳಗಿನಿಂದ ಹೊರಗೆ ಬರಮಾಡಿದ್ದಾನೆ.

ದ್ವಿತೀಯೋಪದೇಶಕಾಂಡ 6:8

ಅವುಗಳನ್ನು ಗುರುತಾಗಿ ನಿನ್ನ ಕೈ ಮೇಲೆ ಕಟ್ಟಿಕೊಳ್ಳಬೇಕು; ಅವು ನಿನ್ನ ಕಣ್ಣುಗಳ ನಡುವೆ ಹಣೆ ಕಟ್ಟಾಗಿರಬೇಕು.

ಸಾಮೇತಿಗಳು 3:3

ಕರುಣೆಯೂ ಸತ್ಯವೂ ನಿನ್ನನ್ನು ಬಿಡದಿರಲಿ. ನಿನ್ನ ಕೊರಳಿನ ಸುತ್ತಲೂ ಅವುಗಳನ್ನು ಕಟ್ಟಿಕೋ; ನಿನ್ನ ಹೃದಯದ ಹಲಗೆಯ ಮೇಲೆ ಅವುಗಳನ್ನು ಬರೆ.

ಸಾಮೇತಿಗಳು 4:6

ಅವುಗಳನ್ನು ತ್ಯಜಿಸ ದಿದ್ದರೆ ಅವು ನಿನ್ನನ್ನು ಕಾಯುವವು, ಅವುಗಳನ್ನು ಪ್ರೀತಿಸಿದರೆ ಅವು ನಿನ್ನನ್ನು ಕಾಪಾಡುವವು.

ಸಾಮೇತಿಗಳು 4:21

ಅವುಗಳು ನಿನ್ನ ಕಣ್ಣುಗಳಿಗೆ ತಪ್ಪಿಹೋಗದೆ ಇರಲಿ; ಅವುಗಳನ್ನು ನಿನ್ನ ಹೃದಯದ ಮಧ್ಯದಲ್ಲಿ ಇಟ್ಟುಕೋ.

ಸಾಮೇತಿಗಳು 7:3

ಅವುಗ ಳನ್ನು ನಿನ್ನ ಬೆರಳುಗಳಿಗೆ ಕಟ್ಟಿಕೋ, ನಿನ್ನ ಹೃದಯದ ಹಲಗೆಯಲ್ಲಿ ಅವುಗಳನ್ನು ಬರೆ.

2 ಕೊರಿಂಥದವರಿಗೆ 3:3

ನೀವು ಕ್ರಿಸ್ತನು ನಮ್ಮ ಕೈಯಿಂದ ಬರೆಯಿಸಿ ಕೊಟ್ಟ ಪತ್ರಿಕೆಯಾಗಿದ್ದೀರೆಂಬದು ಪ್ರತ್ಯಕ್ಷವಾಗಿಯೇ ಇದೆ; ಅದು ಮಸಿಯಿಂದ ಬರೆದದ್ದಲ್ಲ, ಆದರೆ ಜೀವವುಳ್ಳ ದೇವರ ಆತ್ಮನಿಂದಲೇ ಬರೆದದ್ದು; ಕಲ್ಲಿನ ಹಲಿಗೆಗಳ ಮೇಲೆಯಲ್ಲ, ಮನುಷ್ಯನ ಹೃದಯವೆಂಬ ಹಲಿಗೆಗಳ ಮೇಲೆ ಬರೆದದ್ದು.

Interlinear

Choose Theme