ಅವನು ಸಿಕ್ಕಿಕೊಂಡರೆ ಏಳರಷ್ಟು ಹಿಂದಕ್ಕೆ ಕೊಡುವನು; ತನ್ನ ಮನೆಯ ಆಸ್ತಿಯನ್ನೆಲ್ಲಾ ಅವನು ಕೊಡುವನು.
Cross references
ಗುಂಡಿಯನ್ನು ಅಗೆದವನು ಕ್ರಯ ಕೊಡಬೇಕು. ಅವುಗಳ ಯಜಮಾನನಿಗೆ ಹಣ ತೀರಿಸಬೇಕು. ಆದರೆ ಸತ್ತ ಪಶುವು ಅವನದಾಗಬೇಕು.
ಒಬ್ಬನು ಎತ್ತನ್ನಾಗಲಿ ಕುರಿಯನ್ನಾಗಲಿ ಕದ್ದು ಕೊಯ್ದರೆ ಇಲ್ಲವೆ ಅದನ್ನು ಮಾರಿದರೆ ಅವನು ಒಂದು ಎತ್ತಿಗೆ ಬದಲಾಗಿ ಐದು ಎತ್ತುಗಳನ್ನೂ ಒಂದು ಕುರಿಗೆ ನಾಲ್ಕು ಕುರಿಗಳನ್ನೂ ಕೊಡಬೇಕು.
ಅವನು ಕರುಣೆ ಯಿಲ್ಲದೆ ಈ ಕಾರ್ಯವನ್ನು ಮಾಡಿದ್ದರಿಂದ ಆ ಕುರಿ ಗೋಸ್ಕರ ನಾಲ್ಕರಷ್ಟು ತಿರಿಗಿ ಕೊಡಬೇಕು ಅಂದನು.
ದುಡಿದದ್ದನ್ನ್ನು ನುಂಗದೆ ತಿರುಗಿ ಕೊಡುವನು; ಆಸ್ತಿಯ ಮೇರೆಗೆ ಬದಲು ಕೊಡುವನು; ಅವನು ಉಲ್ಲಾಸ ಹೊಂದುವದಿಲ್ಲ.
ಆದರೆ ಕೊಡುವದಕ್ಕೆ ಅವನಿಗೆ ಏನೂ ಇಲ್ಲದ್ದರಿಂದ ಅವನನ್ನೂ ಅವನ ಹೆಂಡತಿಯನ್ನೂ ಮಕ್ಕಳನ್ನೂ ಅವನಿಗಿದ್ದದ್ದೆಲ್ಲವನ್ನೂ ಮಾರಿ ಸಾಲ ತೀರಿಸಬೇಕೆಂದು ಅವನ ಯಜಮಾನನು ಅಪ್ಪಣೆ ಕೊಟ್ಟನು.
ಆಗ ಜಕ್ಕಾಯನು ನಿಂತುಕೊಂಡು ಕರ್ತನಿಗೆ--ಕರ್ತನೇ, ಇಗೋ, ನನ್ನ ಸೊತ್ತಿನಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ; ನಾನು ಯಾರಿಂದಲಾದರೂ ಸುಳ್ಳಾಗಿ ದೂರು ಹೇಳಿ ಏನಾದರೂ ತಕ್ಕೊಂಡಿದ್ದರೆ ಅವನಿಗೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ ಅಂದನು.