Home Bibles ಸಾಮೇತಿಗಳು 7:1 · ಕನ್ನಡ ಬೈಬಲ್
ಸಾಮೇತಿಗಳು 7:1 · ಕನ್ನಡ ಬೈಬಲ್

ನನ್ನ ಮಗನೇ, ನನ್ನ ಮಾತುಗಳನ್ನು ಅನುಸರಿಸಿ ನನ್ನ ಆಜ್ಞೆಗಳನ್ನು ನಿನ್ನಲ್ಲಿ ಇಟ್ಟುಕೋ.

Cross references

ದ್ವಿತೀಯೋಪದೇಶಕಾಂಡ 11:28

ನಿಮ್ಮ ದೇವರಾದ ಕರ್ತನ ಆಜ್ಞೆಗಳಿಗೆ ವಿಧೇಯರಾಗದೆ, ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ಮಾರ್ಗಕ್ಕೆ ಓರೆಯಾಗಿ ನೀವು ತಿಳಿಯದ ಬೇರೆ ದೇವರುಗಳನ್ನು ಹಿಂಬಾಲಿಸಿದರೆ ಶಾಪವು.

ಯೋಬ 22:22

ಆತನ ಬಾಯಿಂದ ನ್ಯಾಯಪ್ರಮಾಣವನ್ನು ತಕ್ಕೋ; ಆತನ ಮಾತುಗಳನ್ನು ನಿನ್ನ ಹೃದಯದಲ್ಲಿ ಇಟ್ಟುಕೋ.

ಸಾಮೇತಿಗಳು 1:8

ನನ್ನ ಮಗನೇ, ನಿನ್ನ ತಂದೆಯ ಶಿಕ್ಷಣವನ್ನು ಕೇಳು, ನಿನ್ನ ತಾಯಿಯ ಕಟ್ಟಳೆಯನ್ನು ತೊರೆಯಬೇಡ;

ಸಾಮೇತಿಗಳು 2:1

ನನ್ನ ಮಗನೇ, ನನ್ನ ಮಾತುಗಳನ್ನು ನೀನು ಅಂಗೀಕರಿಸಿ ನನ್ನ ಆಜ್ಞೆಗಳನ್ನು ನಿನ್ನಲ್ಲಿ ಬಚ್ಚಿಟ್ಟುಕೊಂಡರೆ

ಸಾಮೇತಿಗಳು 3:1

ನನ್ನ ಮಗನೇ, ನನ್ನ ಕಟ್ಟಳೆಯನ್ನು ಮರೆಯಬೇಡ. ನಿನ್ನ ಹೃದಯವು ನನ್ನ ಆಜ್ಞೆ ಗಳನ್ನು ಕಾಪಾಡಲಿ:

ಸಾಮೇತಿಗಳು 5:5

ಅವಳ ಪಾದಗಳು ಮರಣದ ಕಡೆಗೆ ಇಳಿದು ಹೋಗು ತ್ತವೆ. ಅವಳ ಹೆಜ್ಜೆಗಳು ಪಾತಾಳವನ್ನು ಹಿಡಿಯುತ್ತವೆ.

ಸಾಮೇತಿಗಳು 6:20

ನನ್ನ ಮಗನೇ, ನಿನ್ನ ತಂದೆಯ ಆಜ್ಞೆಯನ್ನು ಕೈಕೊಳ್ಳು, ತಾಯಿಯ ಕಟ್ಟಳೆಯನ್ನು ತ್ಯಜಿಸಬೇಡ.

ಸಾಮೇತಿಗಳು 10:14

ಜ್ಞಾನಿ ಗಳು ತಿಳುವಳಿಕೆಯನ್ನು ಇಟ್ಟುಕೊಳ್ಳುತ್ತಾರೆ; ಆದರೆ ಮೂರ್ಖನ ಬಾಯಿ ನಾಶನಕ್ಕೆ ಸವಿಾಪವಾಗಿದೆ.

ಲೂಕ 8:15

ಆದರೆ ಒಳ್ಳೇ ಭೂಮಿಯವರು ಯಾರಂದರೆ ಯಥಾರ್ಥವಾದ ಒಳ್ಳೇ ಹೃದಯದಿಂದ ವಾಕ್ಯವನ್ನು ಕೇಳಿ ಅದನು ಕೈಕೊಂಡು ತಾಳ್ಮೆಯಿಂದ ಫಲಿಸುವವರೇ.

ಲೂಕ 11:28

ಆದರೆ ಆತನು--ಹೌದು, ಇದಕ್ಕಿಂ ತಲೂ ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯು ವವರೇ ಧನ್ಯರು ಎಂದು ಹೇಳಿದನು.

ಯೋಹಾನ 14:23

ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯಾವನಾ ದರೂ ನನ್ನನ್ನು ಪ್ರೀತಿಸುವದಾದರೆ ಅವನು ನನ್ನ ಮಾತುಗಳನ್ನು ಕೈಕೊಳ್ಳುವನು; ನನ್ನ ತಂದೆಯು ಅವ ನನ್ನು ಪ್ರೀತಿಸುವನು. ಇದಲ್ಲದೆ ನಾವು ಅವನ ಬಳಿಗೆ ಬಂದು ಅವನೊಂದಿಗೆ ನಮ್ಮ ನಿವಾಸವನ್ನು ಮಾಡಿ ಕೊಳ್ಳುವೆವು.

ಯೋಹಾನ 15:20

ತನ್ನ ದಣಿಗಿಂತ ಆಳು ದೊಡ್ಡವನಲ್ಲ ಎಂದು ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಳ್ಳಿರಿ; ಅವರು ನನ್ನನ್ನು ಹಿಂಸಿಸಿದರೆ ನಿಮ್ಮನ್ನು ಸಹ ಹಿಂಸಿಸುವರು. ಅವರು ನನ್ನ ಮಾತನ್ನು ಕೈ ಕೊಂಡಿದ್ದರೆ ನಿಮ್ಮ ಮಾತನ್ನು ಸಹ ಕೈಕೊಳ್ಳುವರು.

ಪ್ರಕಟನೆ 1:3

ಇದನ್ನು ಓದುವಂಥ ವನೂ ಈ ಪ್ರವಾದನಾ ವಾಕ್ಯಗಳನ್ನು ಕೇಳುವಂಥವರೂ ಅದರಲ್ಲಿ ಬರೆದಿರುವಂಥವುಗಳನ್ನು ಕಾಪಾಡುವಂಥ ವರೂ ಧನ್ಯರು. ಯಾಕಂದರೆ ಕಾಲವು ಸವಿಾಪವಾಗಿದೆ.

ಪ್ರಕಟನೆ 22:9

ಆಗ ಅವನು ನನಗೆ--ಇದನ್ನು ಮಾಡಬೇಡ ನೋಡು; ಯಾಕಂದರೆ ನಾನು ಪ್ರವಾದಿಗಳಾಗಿರುವ ನಿನ್ನ ಸಹೋದರರಿಗೂ ಈ ಪುಸ್ತಕ ದಲ್ಲಿ ಹೇಳಿರುವವುಗಳನ್ನು ಕೈಕೊಂಡು ನಡೆಯುವವ ರಿಗೂ ಜೊತೆಯ ಸೇವಕನಾಗಿದ್ದೇನೆ; ದೇವರನ್ನು ಆರಾಧಿಸು ಎಂದು ನನಗೆ ಹೇಳಿದನು.

Interlinear

Choose Theme