Home Bibles ಸಾಮೇತಿಗಳು 7:25 · ಕನ್ನಡ ಬೈಬಲ್
ಸಾಮೇತಿಗಳು 7:25 · ಕನ್ನಡ ಬೈಬಲ್

ಅವಳ ಮಾರ್ಗಗಳಿಗೆ ನಿನ್ನ ಹೃದಯವು ತಿರುಗದೆ ಇರಲಿ. ಅವಳ ದಾರಿಗಳಲ್ಲಿ ತಪ್ಪಿಹೋಗದೆ ಇರಲಿ.

Cross references

ಕೀರ್ತನೆಗಳು 119:176

ತಪ್ಪಿಹೋದ ಕುರಿಯ ಹಾಗೆ ತೊಳಲ್ಲಿದ್ದೇನೆ; ನಿನ್ನ ಸೇವಕನನ್ನು ಹುಡುಕು; ನಿನ್ನ ಆಜ್ಞೆಗಳನ್ನು ಮರೆತುಬಿಡೆನು.

ಸಾಮೇತಿಗಳು 4:14

ದುಷ್ಟರ ದಾರಿಯೊಳಗೆ ಪ್ರವೇಶಿಸದಿರು, ಕೆಟ್ಟವರ ಮಾರ್ಗದಲ್ಲಿ ಹೋಗಬೇಡ.

ಸಾಮೇತಿಗಳು 5:8

ಅವಳ ಕಡೆಯಿಂದ ನಿನ್ನ ದಾರಿಯನ್ನು ದೂರಮಾಡು. ಅವಳ ಮನೆಯ ಬಾಗಲ ಹತ್ತಿರಕ್ಕೆ ಬಾರದೆ ಇರು.

ಸಾಮೇತಿಗಳು 5:23

ಶಿಕ್ಷಣವಿಲ್ಲದೆ ಅವನು ಸಾಯುವನು; ತನ್ನ ಮೂಢತ್ವದ ದೊಡ್ಡಸ್ತಿಕೆಯಲ್ಲಿ ತಪ್ಪಿಹೋಗುವನು.

ಸಾಮೇತಿಗಳು 6:25

ನಿನ್ನ ಹೃದಯದಲ್ಲಿ ಅವಳ ಸೌಂದರ್ಯವನ್ನು ಮೋಹಿಸಬೇಡ; ಇದಲ್ಲದೆ ಅವಳ ಕಣ್ಣುರೆಪ್ಪೆಗಳಿಂದ ನಿನ್ನನ್ನು ಅವಳು ವಶಮಾಡಿಕೊಳ್ಳದೆ ಇರಲಿ.

ಸಾಮೇತಿಗಳು 9:15

ಮಾರ್ಗಕ್ಕನುಸಾರವಾಗಿ ಹೋಗುವ ಪ್ರಯಾಣಿಕ ರನ್ನು ಕರೆಯುತ್ತಾಳೆ.

ಸಾಮೇತಿಗಳು 23:31

ದ್ರಾಕ್ಷಾರಸವು ಕೆಂಪಾಗಿದ್ದು ಪಾತ್ರೆಯಲ್ಲಿ ಥಳಥಳಿಸುತ್ತಾ ಚಲಿಸಿದರೆ ಅದನ್ನು ನೋಡಬೇಡ.

ಯೆಶಾಯ 53:6

ನಾವೆಲ್ಲರೂ ದಾರಿ ತಪ್ಪಿದ ಕುರಿಗಳಂತಿದ್ದೆವು; ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು; ಕರ್ತನು ನಮ್ಮ ದುಷ್ಕೃತ್ಯಗಳನ್ನೆಲ್ಲಾ ಆತನ ಮೇಲೆ ಹಾಕಿದನು.

ಮತ್ತಾಯ 5:28

ಆದರೆ ನಾನು ನಿಮಗೆ ಹೇಳುವದೇನಂದರೆ--ಒಬ್ಬ ಸ್ತ್ರೀಯನ್ನು ಮೋಹಿಸುವದಕ್ಕೆ ನೋಡುವ ಪ್ರತಿಯೊಬ್ಬನು ಆಗಲೇ ತನ್ನ ಹೃದಯದಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದ್ದಾನೆ.

Interlinear

Choose Theme