ಜ್ಞಾನ ವೆಂಬ ನಾನು ವಿವೇಕದೊಂದಿಗೆ ವಾಸವಾಗಿದ್ದೇನೆ. ಯುಕ್ತಿಯುಳ್ಳ ಕಲ್ಪನಾ ಶಕ್ತಿಯ ತಿಳುವಳಿಕೆಯನ್ನು ನಾನು ಕಂಡುಕೊಳ್ಳುತ್ತೇನೆ.
Cross references
ನಾನು ಅವನನ್ನು ದೇವರ ಆತ್ಮನಿಂದಲೂ ಜ್ಞಾನದಿಂದಲೂ ತಿಳುವಳಿಕೆಯಿಂದಲೂ ವಿವೇಕ ದಿಂದಲೂ ಎಲ್ಲಾ ತರವಾದ ಕೆಲಸದ ಕಲೆಯಿಂದಲೂ ತುಂಬಿಸಿದ್ದೇನೆ.
ಆಗ ಮೋಶೆಯು ಇಸ್ರಾಯೇಲ್ ಮಕ್ಕಳಿಗೆ--ನೋಡಿರಿ, ಕರ್ತನು ಯೂದ ಕುಲದ ಹೂರನ ಮೊಮ್ಮಗನೂ ಊರಿಯನ ಮಗನೂ ಆದ ಬೆಚಲೇಲ ನನ್ನು ಹೆಸರು ಹೇಳಿ ಕರೆದು
ಇವನು ನಫ್ತಾಲಿಯ ಗೋತ್ರದವಳಾದ ಒಬ್ಬ ವಿಧವೆಯ ಮಗನು; ಅವನ ತಂದೆ ತೂರಿನ ಮನುಷ್ಯನಾದ ತಾಮ್ರದ ಕೆಲಸದವನಾಗಿದ್ದನು; ಅವನು ತಾಮ್ರದ ಎಲ್ಲಾ ಕೆಲಸವನ್ನು ಮಾಡತಕ್ಕ ಜ್ಞಾನ ದಿಂದಲೂ ಗ್ರಹಿಕೆಯಿಂದಲೂ ತಿಳುವಳಿಕೆಯಿಂದಲೂ ಪೂರ್ಣನಾಗಿದ್ದನು. ಅವನು ಅರಸನಾದ ಸೊಲೊ ಮೋನನ ಬಳಿಗೆ ಬಂದು ಅವನ ಕೆಲಸವನ್ನೆಲ್ಲಾ ಮಾಡಿದನು.
ಕರ್ತನ ಮನೆಯ ಅಂಗಳಗಳು, ಸುತ್ತಲಿ ರುವ ಕೊಠಡಿಗಳಾದ ಕರ್ತನ ಮನೆಯ ಉಗ್ರಾಣ ಗಳು, ಪ್ರತಿಷ್ಠೆ ಮಾಡಿದವುಗಳ ಉಗ್ರಾಣಗಳು, ಆತ್ಮ ದಿಂದ ತನಗುಂಟಾದ ಇವುಗಳ ಸಮಸ್ತ ಮಾದರಿ ಯನ್ನೂ ಕೊಟ್ಟನು.
ಕರ್ತನು ತನ್ನ ಕೈ ನನ್ನ ಮೇಲೆ ಇರಿಸಿ ಈ ಮಾದರಿಯ ಕೆಲಸಗಳನ್ನೆಲ್ಲಾ ನನಗೆ ತಿಳಿಯುವಂತೆ ಮಾಡಿದನು ಅಂದನು.
ಯೆಹೂದದವರು ಹಿಂದಕ್ಕೆ ನೋಡಿದಾಗ ಇಗೋ, ಯುದ್ಧವು ಅವರ ಮುಂದೆಯೂ ಹಿಂದೆಯೂ ಇತ್ತು. ಆಗ ಅವರು ಕರ್ತನಿಗೆ ಕೂಗಿದರು, ಯಾಜಕರು ತುತೂರಿಗಳನ್ನು ಊದಿದರು.
ಓ ಕರ್ತನೇ, ನಿನ್ನ ಕೆಲಸಗಳು ಎಷ್ಟೋ ಉಂಟು! ಅವುಗಳನ್ನೆಲ್ಲಾ ಜ್ಞಾನದಿಂದ ಉಂಟು ಮಾಡಿದ್ದೀ; ಭೂಮಿಯು ನಿನ್ನ ಸಂಪತ್ತಿನಿಂದ ತುಂಬಿದೆ.
ಇವು ಮೂಢರಿಗೆ ಜಾಣತನ ವನ್ನೂ ಯೌವನಸ್ಥನಿಗೆ ತಿಳುವಳಿಕೆಯನ್ನೂ ವಿವೇಕ ವನ್ನೂ ಕೊಡುವವುಗಳಾಗಿವೆ.
ಅವನ ದೇವರು ಇದನ್ನೆಲ್ಲಾ ಅವನಿಗೆ ಸರಿಯಾಗಿ ಕಲಿಸಿ ತಿದ್ದು ತ್ತಾನೆ.
ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಲ್ಲ; ಇಲ್ಲವೆ ನಿಮ್ಮ ಮಾರ್ಗಗಳು ನನ್ನ ಮಾರ್ಗಗಳಲ್ಲ ಎಂದು ಕರ್ತನು ಹೇಳುತ್ತಾನೆ.
ಹಾ, ದೇವರ ಜ್ಞಾನದ ಮತ್ತು ತಿಳುವಳಿಕೆಯ ಐಶ್ವರ್ಯವು ಎಷ್ಟೋ ಅಗಾಧ ವಾಗಿದೆ! ಆತನ ತೀರ್ಪುಗಳು ಪರಿಶೋಧನೆಗೂ ಆತನ ಮಾರ್ಗಗಳು ಕಂಡು ಹಿಡಿಯುವದಕ್ಕೂ ಅಸಾಧ್ಯ ವಾಗಿವೆ!
ಹೀಗೆ ಆತನು ತನ್ನ ಕೃಪಾತಿಶಯದಲ್ಲಿ ಸಕಲ ಜ್ಞಾನವನ್ನೂ ಬುದ್ದಿಯನ್ನೂ ಇನ್ನೂ ಹೆಚ್ಚಾಗಿ ನಮ್ಮ ಕಡೆಗೆ ತೋರಿಸಿದ್ದಾನೆ.
ಆತನ ಸ್ವಚಿತ್ತದ ಆಲೋಚನೆಗನುಸಾರವಾಗಿ ಎಲ್ಲಾ ಕಾರ್ಯ ಗಳನ್ನು ಸಾಧಿಸುವ ಆತನ ಉದ್ದೇಶದ ಮೇರೆಗೆ ಮೊದಲೇ ನೇಮಿಸಲ್ಪಟ್ಟವರಾದ ನಾವು ಆತನಲ್ಲಿ ಬಾಧ್ಯತೆಯನ್ನು ಸಹ ಹೊಂದಿದೆವು.
ನಾನಾ ವಿಧವಾದ ದೇವರ ಜ್ಞಾನವು ಪರಲೋಕದಲ್ಲಿ ಈಗ ರಾಜತ್ವಗಳಿಗೂ ಅಧಿಕಾರಗಳಿಗೂ ಸಭೆಯ ಮೂಲಕ ಗೊತ್ತಾಗಬೇಕೆಂಬದಾಗಿಯೂ ಆತನು ಉದ್ದೇಶಿಸಿದ್ದನು.
ಆತನಲ್ಲಿ (ಕ್ರಿಸ್ತನಲ್ಲಿ) ಜ್ಞಾನ ತಿಳುವಳಿಕೆಯ ಎಲ್ಲಾ ನಿಕ್ಷೇಪಗಳು ಅಡಕವಾಗಿವೆ.