Home Bibles ಸಾಮೇತಿಗಳು 8:21 · ಕನ್ನಡ ಬೈಬಲ್
ಸಾಮೇತಿಗಳು 8:21 · ಕನ್ನಡ ಬೈಬಲ್

ನನ್ನನ್ನು ಪ್ರೀತಿಸುವವರು ಸಂಪತ್ತನ್ನು ಬಾಧ್ಯವಾಗಿ ಹೊಂದಿದಂತೆ ನಾನು ಅವರ ಬೊಕ್ಕಸ ಗಳನ್ನು ತುಂಬಿಸುವೆನು.

Cross references

ಆದಿಕಾಂಡ 15:14

ಅವರು ಸೇವಿಸುವ ಜನಾಂಗಕ್ಕೆ ನಾನೇ ನ್ಯಾಯ ತೀರಿಸುವೆನು; ತರುವಾಯ ಮಹಾ ಸಂಪತ್ತಿನೊಂದಿಗೆ ಅವರು ಹೊರಗೆ ಬರುವರು.

1 ಸಮುವೇಲ 2:8

ದರಿದ್ರನನ್ನು ಭೂಮಿಯ ಧೂಳಿನಿಂದ ಎತ್ತುವಾ ತನೂ ಭಿಕ್ಷುಕನನ್ನು ತಿಪ್ಪೆಗುಂಡಿಯಿಂದ ತೆಗೆದು ಉನ್ನತ ಮಾಡುವಾತನೂ ಆಗಿದ್ದಾನೆ. ಅವರನ್ನು ಪ್ರಧಾ ನರ ಮಧ್ಯದಲ್ಲಿ ಕೂಡ್ರಿಸುತ್ತಾನೆ; ಘನತೆಯ ಸಿಂಹಾ ಸನವನ್ನು ಬಾಧ್ಯವಾಗಿ ಕೊಡುತ್ತಾನೆ. ಯಾಕಂದರೆ ಭೂಮಿಯ ಆಧಾರಸ್ತಂಭಗಳು ಕರ್ತನದಾಗಿವೆ, ಭೂಲೋಕವನ್ನು ಅವುಗಳ ಮೇಲೆ ಇಟ್ಟಿದ್ದಾನೆ.

ಕೀರ್ತನೆಗಳು 16:11

ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ.

ಸಾಮೇತಿಗಳು 1:13

ಅಮೂಲ್ಯವಾದ ಎಲ್ಲಾ ಸಂಪತ್ತನ್ನು ನಾವು ಕಂಡು ಹಿಡಿದು ಕೊಳ್ಳೆಯಿಂದ ನಮ್ಮ ಮನೆಗಳನ್ನು ತುಂಬಿ ಕೊಳ್ಳೋಣ.

ಸಾಮೇತಿಗಳು 6:31

ಅವನು ಸಿಕ್ಕಿಕೊಂಡರೆ ಏಳರಷ್ಟು ಹಿಂದಕ್ಕೆ ಕೊಡುವನು; ತನ್ನ ಮನೆಯ ಆಸ್ತಿಯನ್ನೆಲ್ಲಾ ಅವನು ಕೊಡುವನು.

ಸಾಮೇತಿಗಳು 8:18

ಐಶ್ವರ್ಯವೂ ಘನತೆಯೂ ಹೌದು, ಶ್ರೇಷ್ಠ ಸಂಪತ್ತೂ ನೀತಿಯೂ ನನ್ನೊಂದಿಗಿವೆ.

ಸಾಮೇತಿಗಳು 24:4

ತಿಳುವಳಿಕೆಯಿಂದ ಎಲ್ಲಾ ಅಮೂಲ್ಯವಾದ ಮತ್ತು ಇಷ್ಟ ಸಂಪತ್ತಿನಿಂದ ಕೋಣೆಗಳು ತುಂಬಲ್ಪಡುವವು.

ಮತ್ತಾಯ 25:46

ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು.

ಯೋಹಾನ 1:1

ಆದಿಯಲ್ಲಿ ವಾಕ್ಯವಿದ್ದನು; ಆ ವಾಕ್ಯವು ದೇವರೊಂದಿಗೆ ಇದ್ದನು; ಆ ವಾಕ್ಯವು ದೇವರಾಗಿದ್ದನು.

ರೋಮಾಪುರದವರಿಗೆ 8:17

ಮಕ್ಕಳಾ ಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತ ನೊಂದಿಗೆ ಸಹ ಬಾಧ್ಯರು; ಆತನೊಂದಿಗೆ ಶ್ರಮೆ ಯನ್ನನುಭವಿಸುವದಾದರೆ ಒಟ್ಟಾಗಿ ನಾವು ಸಹ ಮಹಿಮೆಯನ್ನು ಹೊಂದುವೆವು.

ಎಫೆಸದವರಿಗೆ 3:19

ಜ್ಞಾನಕ್ಕೆ ವಿಾರುವ ಕ್ರಿಸ್ತನ ಪ್ರೀತಿ ಯನ್ನು ತಿಳಿದುಕೊಂಡು ದೇವರ ಸಂಪೂರ್ಣತೆಯ ಮಟ್ಟಿಗೂ ಪರಿಪೂರ್ಣರಾಗುವ ಹಾಗೆಯೂ ನಿಮಗೆ ದಯ ಪಾಲಿಸಲಿ ಎಂದು ಆತನನ್ನು ಬೇಡಿಕೊಳ್ಳುತ್ತೇನೆ.

ಹೆಬ್ರಿಯರಿಗೆ 10:34

ಬೇಡಿಗಳನ್ನು ಹಾಕಿಸಿ ಕೊಂಡವನಾದ ನನ್ನ ವಿಷಯದಲ್ಲಿ ನೀವು ಅನುತಾಪ ಗೊಂಡು ಪರಲೋಕದಲ್ಲಿ ನಿಮಗೆ ಉತ್ತಮವಾಗಿಯೂ ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ನಿಮ್ಮಲ್ಲಿ ನೀವೇ ಅರಿತುಕೊಂಡು ನಿಮ್ಮ ಸೊತ್ತನ್ನು ಸುಲುಕೊಳ್ಳು ವವರಿಗೆ ಸಂತೋಷದಿಂದ ಬಿಟ್ಟಿರಿ.

1 ಪೇತ್ರ 1:4

ಲಯ ಕಳಂಕ ಕ್ಷಯಗಳಿಲ್ಲದ ಬಾಧ್ಯತೆಗೂ ನಮ್ಮನ್ನು ತಿರಿಗಿ ಹುಟ್ಟಿಸಿದ್ದಾನೆ. ಈ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಟ್ಟಿದೆ.

ಪ್ರಕಟನೆ 21:7

ಜಯಹೊಂದುವವನು ಎಲ್ಲವುಗಳಿಗೆ ಬಾಧ್ಯನಾಗುವನು; ನಾನು ಅವನ ದೇವರಾಗಿರುವೆನು. ಅವನು ನನ್ನ ಮಗನಾಗಿರುವನು.

Interlinear

Choose Theme