Home Bibles ಸಾಮೇತಿಗಳು 8:23 · ಕನ್ನಡ ಬೈಬಲ್
ಸಾಮೇತಿಗಳು 8:23 · ಕನ್ನಡ ಬೈಬಲ್

ನಿತ್ಯತ್ವದಿಂದ ಇಲ್ಲವೆ ಆರಂಭದಿಂದ, ಭೂಮಿಯು ಇರುವದಕ್ಕೆ ಮುಂಚೆ ನಾನು ಸ್ಥಾಪಿಸಲ್ಪ ಟ್ಟೆನು.

Cross references

ಆದಿಕಾಂಡ 1:26

ತರುವಾಯ ದೇವರು--ನಮ್ಮ ರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯನನ್ನು ಮಾಡೋಣ; ಅವರು ಸಮುದ್ರದ ವಿಾನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಪಶುಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯ ಮೇಲೆಯೂ ದೊರೆತನಮಾಡಲಿ ಅಂದನು.

ಕೀರ್ತನೆಗಳು 2:6

ಆದಾಗ್ಯೂ ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ.

ಮೀಕ 5:1

ಈಗ ಓ ಸೈನ್ಯಗಳ ಕುಮಾರ್ತೆಯೇ, ಗುಂಪುಗಳಾಗಿ ಕೂಡಿಕೊಳ್ಳಿರಿ; ಅವನು ನಮಗೆ ಮುತ್ತಿಗೆ ಹಾಕಿದ್ದಾನೆ. ಇಸ್ರಾಯೇಲಿನ ನ್ಯಾಯಾಧಿಪತಿಯನ್ನು ಕೋಲಿನಿಂದ ಕೆನ್ನೆಯ ಮೇಲೆ ಹೊಡೆಯುತ್ತಾರೆ.

ಮೀಕ 5:2

ಆದರೆ ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಸಾವಿರಗಳಲ್ಲಿ ಸಣ್ಣದಾಗಿದ್ದರೂ ಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನು ನಿನ್ನೊಳ ಗಿಂದ ನನಗಾಗಿ ಹೊರಡುವನು; ಆತನ ಹೊರಡೋಣ ಗಳು ಪೂರ್ವದಿಂದಲೂ ಅನಾದಿ ದಿವಸಗಳಿಂದಲೂ ಅವೆ.

ಯೋಹಾನ 17:5

ಓ ತಂದೆಯೇ, ಹೀಗೆ ಲೋಕವು ಇದ್ದದ್ದಕ್ಕಿಂತ ಮುಂಚೆ ನಿನ್ನೊಂದಿಗೆ ನನಗಿದ್ದ ಮಹಿಮೆಯಿಂದ ನೀನು ಸ್ವತಃ ನನ್ನನ್ನು ಮಹಿಮೆಪಡಿಸು.

ಯೋಹಾನ 17:24

ತಂದೆ ಯೇ, ನೀನು ನನಗೆ ಕೊಟ್ಟಿರುವ ಮಹಿಮೆಯನ್ನು ನೀನು ನನಗೆ ಕೊಟ್ಟವರು ಸಹ ನೋಡುವ ಹಾಗೆಯೂ ನಾನಿರುವಲ್ಲಿ ಅವರು ನನ್ನೊಂದಿಗೆ ಇರುವಂತೆಯೂ ನಾನು ಇಚ್ಛೈಸುತ್ತೇನೆ. ಜಗದುತ್ಪತ್ತಿಗೆ ಮುಂಚೆ ನೀನು ನನ್ನನ್ನು ಪ್ರೀತಿಸಿದಿ.

ಎಫೆಸದವರಿಗೆ 1:10

ಅದೇನಂದರೆ ಕಾಲವು ಪರಿಪೂರ್ಣವಾದ ಯುಗದಲ್ಲಿ ಆತನು ಪರಲೋಕದಲ್ಲಿರುವವುಗಳನ್ನೂ ಭೂ ಲೋಕದಲ್ಲಿರುವವುಗಳನ್ನೂ ಆತನಲ್ಲಿ ಅಂದರೆ ಕ್ರಿಸ್ತನಲ್ಲಿ ಎಲ್ಲವನ್ನು ಒಂದುಗೂಡಿಸಬೇಕೆಂದಿದ್ದನು.

1 ಯೋಹಾನ 1:1

ಆದಿಯಿಂದ ಇದ್ದದ್ದನ್ನೂ ಆ ಜೀವ ವಾಕ್ಯದ ವಿಷಯವಾಗಿ ಕೇಳಿದ್ದನ್ನೂ ಕಣ್ಣಾರೆ ಕಂಡು ನೋಡಿದ್ದನ್ನೂ ನಾವು ಕೈಯಿಂದ ಮುಟ್ಟಿದ್ದೇವೆ.

Interlinear

Choose Theme