Home Bibles ಸಾಮೇತಿಗಳು 8:31 · ಕನ್ನಡ ಬೈಬಲ್
ಸಾಮೇತಿಗಳು 8:31 · ಕನ್ನಡ ಬೈಬಲ್

ಆತನ ಭೂಮಿಯ ವಾಸ ಸ್ಥಳದ ಭಾಗದಲ್ಲಿ ಸಂತೋಷಿಸುತ್ತಿದ್ದೆನು. ಮನುಷ್ಯರ ಕುಮಾರರೊಂದಿಗೆ ನನ್ನ ಆನಂದವಿದ್ದಿತು.

Cross references

ಕೀರ್ತನೆಗಳು 16:3

ಭೂಮಿಯಲ್ಲಿರುವ ಪರಿಶುದ್ಧರಿಗೂ ನನ್ನ ಸಂತೋಷ ವಾಗಿರುವ ಮುಖ್ಯಸ್ಥರಿಗೂ ಸೇರುತ್ತದೆಂದು ಓ ನನ್ನ ಆತ್ಮವೇ, ನೀನು ಕರ್ತನಿಗೆ ಹೇಳಿದ್ದೀ.

ಕೀರ್ತನೆಗಳು 40:6

ಯಜ್ಞದಲ್ಲಿಯೂ ಅರ್ಪಣೆಯಲ್ಲಿಯೂ ನೀನು ಇಷ್ಟ ಪಡಲಿಲ್ಲ; ದಹನಬಲಿಯನ್ನೂ ಪಾಪದಬಲಿಯನ್ನೂ ನೀನು ಕೇಳಲಿಲ್ಲ. ನನ್ನ ಕಿವಿಗಳನ್ನು ನೀನು ತೆರೆದಿ;

ಯೋಹಾನ 4:34

ಆದರೆ ಯೇಸು ಅವರಿಗೆ--ನನ್ನನ್ನು ಕಳುಹಿಸಿದಾತನ ಚಿತ್ತವನ್ನು ನೆರವೇರಿಸಿ ಆತನ ಕೆಲಸ ವನ್ನು ಪೂರೈಸುವದೇ ನನ್ನ ಆಹಾರ ಅಂದನು.

ಯೋಹಾನ 13:1

ಆಗ ಪಸ್ಕ ಹಬ್ಬದ ಮುಂಚೆ ಯೇಸು ತಾನು ಈ ಲೋಕದೊಳಗಿಂದ ತಂದೆಯ ಬಳಿಗೆ ಹೋಗಬೇಕಾದ ತನ್ನ ಗಳಿಗೆಯು ಬಂತೆಂದು ತಿಳಿದು ಈ ಲೋಕದಲ್ಲಿದ್ದ ತನ್ನ ಸ್ವಂತದವರನ್ನು ಪ್ರೀತಿಸಿ ಅವರನ್ನು ಅಂತ್ಯದವರೆಗೆ ಪ್ರೀತಿಸಿದನು.

2 ಕೊರಿಂಥದವರಿಗೆ 8:9

ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯನ್ನು ನೀವು ಅರಿತವರಾಗಿದ್ದೀರಿ; ಹೇಗಂದರೆ ಆತನು ಐಶ್ವರ್ಯವಂತನಾಗಿದ್ದರೂ ಆತನ ಬಡತನದ ಮೂಲಕ ನೀವು ಐಶ್ವರ್ಯವಂತ ರಾಗುವಂತೆ ಆತನು ನಿಮಗೋಸ್ಕರ ಬಡವನಾದನು.

Interlinear

Choose Theme