Home Bibles ಸಾಮೇತಿಗಳು 8:7 · ಕನ್ನಡ ಬೈಬಲ್
ಸಾಮೇತಿಗಳು 8:7 · ಕನ್ನಡ ಬೈಬಲ್

ನನ್ನ ಬಾಯಿಯು ಸತ್ಯವನ್ನು ಮಾತಾಡುವದು; ನನ್ನ ತುಟಿಗಳಿಗೆ ಕೆಟ್ಟತನವು ಅಸಹ್ಯವಾಗಿದೆ.

Cross references

ಯೋಬ 36:4

ನಿಜ ವಾಗಿ ನನ್ನ ಮಾತುಗಳು ಸುಳ್ಳಲ್ಲ; ತಿಳುವಳಿಕೆಯಲ್ಲಿ ಸಂಪೂರ್ಣನಾದವನು ನಿನ್ನ ಬಳಿಯಲ್ಲಿದ್ದಾನೆ.

ಕೀರ್ತನೆಗಳು 37:30

ನೀತಿವಂತನ ಬಾಯಿ ಜ್ಞಾನವನ್ನು ಉಚ್ಚರಿಸುವದು; ಅವನ ನಾಲಿಗೆ ನ್ಯಾಯ ವನ್ನು ನುಡಿಯುವದು.

ಸಾಮೇತಿಗಳು 12:22

ಸುಳ್ಳಾ ಡುವ ತುಟಿಗಳು ಕರ್ತನಿಗೆ ಅಸಹ್ಯವಾಗಿವೆ. ಸತ್ಯದಿಂದ ನಡೆದುಕೊಳ್ಳುವವರು ಆತನ ಆನಂದವಾಗಿದ್ದಾರೆ.

ಸಾಮೇತಿಗಳು 16:12

ಕೆಟ್ಟದ್ದನ್ನು ಮಾಡುವವರು ರಾಜರಿಗೆ ಅಸಹ್ಯರು; ನೀತಿಯಿಂದ ಸಿಂಹಾಸನವು ಸ್ಥಾಪಿಸಲ್ಪಡು ತ್ತದೆ.

ಸಾಮೇತಿಗಳು 29:27

ಅನೀತಿ ವಂತನು ನೀತಿವಂತರಿಗೆ ಅಸಹ್ಯ; ತನ್ನ ಮಾರ್ಗದಲ್ಲಿ ಯಥಾರ್ಥವಾಗಿರುವವನು ದುಷ್ಟರಿಗೆ ಅಸಹ್ಯ.

ಯೋಹಾನ 1:17

ನ್ಯಾಯಪ್ರಮಾಣವು ಮೋಶೆಯ ಮುಖಾಂತರ ವಾಗಿ ಕೊಡಲ್ಪಟ್ಟಿತು; ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರವಾಗಿ ಬಂದವು.

ಯೋಹಾನ 8:14

ಯೇಸು ಪ್ರತ್ಯುತ್ತರವಾಗಿ ಅವರಿಗೆ--ನನ್ನ ವಿಷಯ ವಾಗಿ ನಾನು ಸಾಕ್ಷಿಕೊಟ್ಟಾಗ್ಯೂ ನನ್ನ ಸಾಕ್ಷಿ ನಿಜವೇ; ಯಾಕಂದರೆ ನಾನು ಎಲ್ಲಿಂದ ಬಂದೆನೋ ಮತ್ತು ಎಲ್ಲಿಗೆ ಹೋಗುತ್ತೇನೋ ನಾನು ಬಲ್ಲೆನು; ಆದರೆ ನಾನು ಎಲ್ಲಿಂದ ಬಂದೆನೋ ಇಲ್ಲವೆ ಎಲ್ಲಿಗೆ ಹೋಗುತ್ತೇನೋ ನೀವು ಹೇಳಲಾರಿರಿ.

ಯೋಹಾನ 8:45

ನಾನು ನಿಮಗೆ ಸತ್ಯವನ್ನು ಹೇಳುವವನಾದದರಿಂದ ನೀವು ನನ್ನನ್ನು ನಂಬುವದಿಲ್ಲ.

ಯೋಹಾನ 14:6

ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.

ಯೋಹಾನ 17:17

ನಿನ್ನ ಸತ್ಯದಿಂದ ಅವರನ್ನು ಪ್ರತಿಷ್ಠೆ ಪಡಿಸು; ನಿನ್ನ ವಾಕ್ಯವೇ ಸತ್ಯವು

ಯೋಹಾನ 18:37

ಆದದರಿಂದ ಪಿಲಾತನು ಆತನಿಗೆ--ಹಾಗಾದರೆ ನೀನು ಅರಸನೋ ಅನ್ನಲು ಯೇಸು ಪ್ರತ್ಯುತ್ತರವಾಗಿ--ನಾನು ಅರಸ ನಾಗಿದ್ದೇನೆಂದು ನೀನೇ ಹೇಳುತ್ತೀ. ನಾನು ಸತ್ಯಕ್ಕೆ ಸಾಕ್ಷಿಕೊಡುವದಕ್ಕೋಸ್ಕರ ಹುಟ್ಟಿ ಅದಕ್ಕೋಸ್ಕರವೇ ಲೋಕಕ್ಕೆ ಬಂದೆನು; ಸತ್ಯಕ್ಕೆ ಸಂಬಂಧಿಸಿದ ಪ್ರತಿಯೊ ಬ್ಬನು ನನ್ನ ಸ್ವರವನು

ಪ್ರಕಟನೆ 3:14

ಲವೊದಿಕೀಯದಲ್ಲಿರುವ ಸಭೆಯ ದೂತನಿಗೆ ಬರೆ: ಆಮೆನ್‌ ಎಂಬಾತನು ಮತ್ತು ನಂಬಿಗಸ್ತನೂ ಸತ್ಯಸಾಕ್ಷಿಯೂ ದೇವರ ಸೃಷ್ಟಿಯ ಆದಿಯೂ ಆಗಿರುವಾತನು ಹೇಳುವವುಗಳು ಯಾವವೆಂದರೆ,

Interlinear

Choose Theme