Home Bibles ಸಾಮೇತಿಗಳು 9:17 · ಕನ್ನಡ ಬೈಬಲ್
ಸಾಮೇತಿಗಳು 9:17 · ಕನ್ನಡ ಬೈಬಲ್

ಕದಿಯಲ್ಪಟ್ಟ ನೀರುಗಳು ಸಿಹಿಯಾಗಿವೆ ರಹಸ್ಯ ದಲ್ಲಿ ತಿನ್ನುವ ರೊಟ್ಟಿಯು ರುಚಿಯಾಗಿದೆ ಎಂದು ಹೇಳುತ್ತಾಳೆ.ಆದರೆ ಸತ್ತವರು ಅಲ್ಲಿದ್ದಾರೆಂದೂ ಪಾತಾಳದ ಅಗಾಧಗಳಲ್ಲಿ ಅವಳ ಅಥಿತಿಗಳು ಇದ್ದಾ ರೆಂದೂ ಅವನಿಗೆ ತಿಳಿಯದು.

Cross references

ಆದಿಕಾಂಡ 3:6

ಸ್ತ್ರೀಯು--ಆ ಮರದ ಫಲವು ಆಹಾರಕ್ಕೆ ಒಳ್ಳೇದಾಗಿಯೂ ಕಣ್ಣಿಗೆ ರಮ್ಯವಾಗಿಯೂ ಒಬ್ಬನನ್ನು ಜ್ಞಾನಿಯನ್ನಾಗಿ ಮಾಡುವದಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಅದೆ ಎಂದು ನೋಡಿ ಅದರ ಫಲವನ್ನು ತೆಗೆದುಕೊಂಡು ತಿಂದಳು; ತನ್ನ ಸಂಗಡ ಇದ್ದ ತನ್ನ ಗಂಡನಿಗೂ ಕೊಟ್ಟಳು; ಅವನೂ ತಿಂದನು.

2 ಅರಸುಗಳು 5:24

ಅವನು ದುರ್ಗಕ್ಕೆ ಬಂದು ಅವುಗಳನ್ನು ಅವರ ಕೈಯಿಂದ ತಕ್ಕೊಂಡು ಮನೆಯಲ್ಲಿಟ್ಟು ಆ ಮನುಷ್ಯರನ್ನು ಕಳುಹಿಸಿಬಿಟ್ಟದ್ದರಿಂದ ಅವರು ಹೋದರು.

ಸಾಮೇತಿಗಳು 7:18

ಬಾ, ಬೆಳಗಿನ ವರೆಗೂ ತೃಪ್ತಿಯಾಗುವ ತನಕ ಪ್ರೀತಿಯ ವಶದಲ್ಲಿ ತುಂಬಿಕೊಳ್ಳುವ ಕಾಮ ವಿಲಾಸಗಳಿಂದ ನಮ್ಮನ್ನು ನಾವು ಆದರಿಸಿಕೊಳ್ಳೋಣ.

ಸಾಮೇತಿಗಳು 7:20

ಅವನು ತನ್ನೊಂದಿಗೆ ಹಣದ ಚೀಲವನ್ನು ತೆಗೆದುಕೊಂಡು ಹೋಗಿದ್ದಾನೆ; ನೇಮಕ ವಾದ ದಿನದಲ್ಲಿಯೇ ಅವನು ಈ ಮನೆಗೆ ಬರುವವನಾ ಗಿದ್ದಾನೆ ಎಂದು

ಸಾಮೇತಿಗಳು 20:17

ಮೋಸದಿಂದ ಸಿಕ್ಕಿದ ರೊಟ್ಟಿಯು ಮನು ಷ್ಯನಿಗೆ ರುಚಿ; ಆಮೇಲೆ ಅವನ ಬಾಯಿಯು ಮರಳಿ ನಿಂದ ತುಂಬುವದು.

ಸಾಮೇತಿಗಳು 23:31

ದ್ರಾಕ್ಷಾರಸವು ಕೆಂಪಾಗಿದ್ದು ಪಾತ್ರೆಯಲ್ಲಿ ಥಳಥಳಿಸುತ್ತಾ ಚಲಿಸಿದರೆ ಅದನ್ನು ನೋಡಬೇಡ.

ಸಾಮೇತಿಗಳು 30:20

ಜಾರಸ್ತ್ರೀಯ ನಡತೆಯು ಹಾಗೆಯೇ ಇದೆ; ಅವಳು ತಿಂದು ತನ್ನ ಬಾಯನ್ನು ಒರಸಿಕೊಂಡು--ನಾನು ಯಾವ ಕೆಟ್ಟದ್ದನ್ನೂ ಮಾಡಲಿಲ್ಲ ಎಂದು ಹೇಳುತ್ತಾಳೆ.

ರೋಮಾಪುರದವರಿಗೆ 7:8

ಆದರೆ ಪಾಪವು ಈ ಆಜ್ಞೆಯಿಂದ ಅನುಕೂಲ ಹೊಂದಿ ಸಕಲ ವಿಧವಾದ ದುರಾಶೆಯನ್ನು ನನ್ನಲ್ಲಿ ಹುಟ್ಟಿಸಿತು. ನ್ಯಾಯಪ್ರಮಾಣವು ಇಲ್ಲದಿರು ವಾಗ ಪಾಪವು ಸತ್ತದ್ದಾಗಿದೆ.

ಎಫೆಸದವರಿಗೆ 5:12

ಅವರು ರಹಸ್ಯವಾಗಿ ನಡಿಸುವ ಕೆಲಸ ಗಳನ್ನು ಕುರಿತು ಮಾತನಾಡುವದಾದರೂ ನಾಚಿಕೆಗೆ ಕಾರಣವಾಗಿದೆ.

ಯಾಕೋಬ 1:14

ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಯಿಂದ ಎಳೆಯಲ್ಪಟ್ಟು ಮರುಳುಗೊಂಡವನಾಗಿ ಶೋಧಿಸಲ್ಪಡುತ್ತಾನೆ.

Interlinear

Choose Theme