ಬಾ, ನನ್ನ ರೊಟ್ಟಿಯನ್ನು ತಿಂದು ನಾನು ಬೆರಸಿದ ದ್ರಾಕ್ಷಾ ರಸವನ್ನು ಕುಡಿ ಎಂದೂ
Cross references
ದೀನರು ಉಂಡು ತೃಪ್ತಿಯಾಗುವರು; ಕರ್ತನನ್ನು ಹುಡುಕುವವರು ಆತನನ್ನು ಸ್ತುತಿಸುವರು; ನಿಮ್ಮ ಹೃದಯವು ಎಂದೆಂದಿಗೂ ಬದುಕುವದು.
ಭೂಮಿಯ ಪುಷ್ಟರೆಲ್ಲರೂ ಉಂಡು ಆರಾಧಿಸುವರು; ತಮ್ಮ ಪ್ರಾಣವನ್ನು ಬದುಕಿಸಲಾರದೆ ಧೂಳಿನಲ್ಲಿ ಇಳಿಯುವವರೆಲ್ಲರೂ ಆತನ ಮುಂದೆ ಅಡ್ಡಬೀಳುವರು.
ಆಕೆಯು ತನ್ನ ಪಶುಗಳನ್ನು ವಧಿಸಿ, ತನ್ನ ದ್ರಾಕ್ಷಾರಸವನ್ನು ಬೆರಸಿ, ತನ್ನ ಮೇಜನ್ನು ಸಹ ಸಿದ್ಧಪಡಿಸಿದಳು.
ಕದಿಯಲ್ಪಟ್ಟ ನೀರುಗಳು ಸಿಹಿಯಾಗಿವೆ ರಹಸ್ಯ ದಲ್ಲಿ ತಿನ್ನುವ ರೊಟ್ಟಿಯು ರುಚಿಯಾಗಿದೆ ಎಂದು ಹೇಳುತ್ತಾಳೆ.ಆದರೆ ಸತ್ತವರು ಅಲ್ಲಿದ್ದಾರೆಂದೂ ಪಾತಾಳದ ಅಗಾಧಗಳಲ್ಲಿ ಅವಳ ಅಥಿತಿಗಳು ಇದ್ದಾ ರೆಂದೂ ಅವನಿಗೆ ತಿಳಿಯದು.
ನನ್ನ ತೋಟಕ್ಕೆ ಬಂದೆನು, ನನ್ನ ಸಹೋದರಿಯೇ, ವಧುವೇ; ನನ್ನ ರಕ್ತಬೋಳ ವನ್ನೂ ನನ್ನ ಸುಗಂಧಗಳನ್ನೂ ಕೂಡಿಸಿದ್ದೇನೆ; ನನ್ನ ಜೇನು ಗೂಡನ್ನೂ ಜೇನು ತುಪ್ಪವನ್ನೂ ತಿಂದಿದ್ದೇನೆ; ನನ್ನ ದ್ರಾಕ್ಷಾರಸವನ್ನೂ ನನ್ನ ಹಾಲನ್ನೂ ಕುಡಿದಿದ್ದೇನೆ. ತಿನ್ನಿರಿ, ಓ ಸ್ನೇಹಿತರೇ; ಕುಡಿಯಿರಿ. ಹೌದು, ನನ್ನ ಪ್ರಿಯರೇ, ಸಮೃದ್ಧಿಯಾಗಿ ಕುಡಿಯಿರಿ.
ಹಾ, ಬಾಯಾರಿದ ಸಕಲಜನರೇ, ನೀವು ನೀರಿನ ಬಳಿಗೆ ಬನ್ನಿರಿ, ಕೊಂಡುಕೊಳ್ಳಿರಿ, ಉಣ್ಣಿರಿ; ಹೌದು, ಬನ್ನಿರಿ; ಹಣವಿಲ್ಲದೆ ಮತ್ತು ಕ್ರಯವಿಲ್ಲದೆ ದ್ರಾಕ್ಷಾರಸವನ್ನೂ ಹಾಲನ್ನೂ ಕೊಂಡು ಕೊಳ್ಳಿರಿ.
ಆ ಕ್ರಯಪತ್ರವನ್ನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನ ಮುಂದೆಯೂ ಕ್ರಯಪತ್ರ ದಲ್ಲಿ ರುಜು ಹಾಕಿದ ಸಾಕ್ಷಿಗಳ ಮುಂದೆಯೂ ಸೆರೆ ಮನೆಯ ಅಂಗಳದಲ್ಲಿ ಕೂತುಕೊಂಡಿದ್ದ ಯೆಹೂದ್ಯ ರೆಲ್ಲರ ಮುಂದೆಯೂ ಮಹ್ಸೇಮನ ಮಗನಾದ ನೇರೀ ಯನ ಮಗನಾದ ಬಾರೂಕನಿಗೆ ಕೊಟ್ಟೆನು.
ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿ ಯನ್ನು ತೆಗೆದುಕೊಂಡು ಅದನ್ನು ಆಶೀರ್ವದಿಸಿ ಮುರಿದು ತನ್ನ ಶಿಷ್ಯರಿಗೆ ಕೊಟ್ಟು--ತಕ್ಕೊಳ್ಳಿರಿ, ತಿನ್ನಿರಿ; ಇದು ನನ್ನ ದೇಹ ಅಂದನು.
ನಾಶವಾಗುವ ಆಹಾರಕ್ಕಾಗಿ ಅಲ್ಲ, ನಿತ್ಯಜೀವ ವನ್ನುಂಟು ಮಾಡುವ ಆಹಾರಕ್ಕೋಸ್ಕರ ದುಡಿಯಿರಿ; ಅದನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ತಂದೆಯಾದ ದೇವರು (ಇದಕ್ಕಾಗಿ) ಆತನಿಗೆ ಮುದ್ರೆ ಹಾಕಿದ್ದಾನೆ ಅಂದನು.
ನಿಮ್ಮ ಪಿತೃಗಳು ಅಡವಿಯಲ್ಲಿ ಮನ್ನಾ ತಿಂದಾಗ್ಯೂ ಸತ್ತು ಹೋದರು.